Asianet Suvarna News Asianet Suvarna News

ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್‌ 10 ಸ್ಥಾನ ಗೆಲ್ಲಲಿದೆ: ಎಚ್‌.ಡಿ.ಕುಮಾರಸ್ವಾಮಿ

ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿದ್ದಾರೆ. ನನಗೆ ನಂಬಿಕೆ ಇದೆ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 10 ಸ್ಥಾನಗಳನ್ನು ಜೆಡಿಎಸ್‌ ಪಕ್ಷ ಗೆಲ್ಲಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿಕುಮಾರಸ್ವಾಮಿ ಹೇಳಿದರು. 

JDS will win 10 seats in Tumkur district says hd kumaraswamy gvd
Author
First Published Nov 6, 2022, 11:01 PM IST

ಶಿರಾ (ನ.06): ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿದ್ದಾರೆ. ನನಗೆ ನಂಬಿಕೆ ಇದೆ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 10 ಸ್ಥಾನಗಳನ್ನು ಜೆಡಿಎಸ್‌ ಪಕ್ಷ ಗೆಲ್ಲಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿಕುಮಾರಸ್ವಾಮಿ ಹೇಳಿದರು. ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮರಡಿಗುಡ್ಡದ ಮರಡಿ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಜಾನಕಲ್ಲು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿರಾ ಕ್ಷೇತ್ರಕ್ಕೆ ಜೆಡಿಎಸ್‌ ಪಕ್ಷದಿಂದ ಹಲವಾರು ಅಭ್ಯರ್ಥಿಗಳು ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಎಲ್ಲಾ ಆಕಾಂಕ್ಷಿಗಳನ್ನು ಕರೆದು ಎಲ್ಲರೊಂದಿಗೆ ಚರ್ಚಿಸಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದರು. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದ ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿರುವ ವಿಷಯ ಕೇಳಿ ಮನಸ್ಸಿಗೆ ತುಂಬ ನೋವುಂಟಾಯಿತು. ಇಂತಹ ಪರಿಸ್ಥಿತಿ ರಾಜ್ಯದಲ್ಲಿ ಎಲ್ಲಿಯೂ ಸೃಷ್ಟಿಯಾಗಬಾರದು ಎಂಬ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 30 ಹಾಸಿಗೆಯುಳ್ಳ ಸುಸಜ್ಜಿತ ಆಸ್ಪತ್ರೆಯನ್ನು ಸ್ಥಾಪಿಸಿ, ಉತ್ತಮ ವೈದ್ಯರನ್ನು ನಿಯೋಜಿಸಲಾಗುವುದು ಎಂದರು. 

ಕೊರಟಗೆರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ: ಡಾ.ಜಿ.ಪರಮೇಶ್ವರ್‌

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುರೇಶ್‌ ಬಾಬು, ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಎಸ್‌.ಆರ್‌.ಗೌಡ, ಜಿಪಂ ಮಾಜಿ ಸದಸ್ಯ ಜಯಪ್ರಕಾಶ್‌, ಜಿಪಂ ಮಾಜಿ ಉಪಾಧ್ಯಕ್ಷ ಮುದಿಮಡು ರಂಗಶಾಮಯ್ಯ, ತಾಪಂ ಮಾಜಿ ಅಧ್ಯಕ್ಷ ಸತ್ಯಪ್ರಕಾಶ್‌, ಮುಖಂಡರಾದ ಕಲ್ಕೆರೆ ರವಿಕುಮಾರ್‌, ಮಹದೇವಪ್ಪ, ತಾಲೂಕು ಜೆಡಿಎಸ್‌ ಅಧ್ಯಕ್ಷ ಆರ್‌.ಉಗ್ರೇಶ್‌, ಮುದ್ದುಗಣೇಶ್‌ ಸೇರಿದಂತೆ ಹಲವರು ಹಾಜರಿದ್ದರು.

ಎಚ್‌ಡಿಕೆ ಬೆಂಬಲಿಸಿ ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ರೈತರು, ಜನಸಾಮಾನ್ಯರ ಬಗ್ಗೆ ಸದಾ ಚಿಂತಿಸುವ ಎಚ್‌.ಡಿ.ಕುಮಾರಸ್ವಾಮಿಯನ್ನು ಬೆಂಬಲಿಸಿ, ಜೆಡಿಎಸ್‌ಅನ್ನು ಅಧಿಕಾರಕ್ಕೆ ತರಬೇಕು ಎಂದು ಶಾಸಕ ಡಿ.ಸಿ.ತಮ್ಮಣ್ಣ ಮನವಿ ಮಾಡಿದರು. ಸಮೀಪದ ಮಠದ ಹೊನ್ನಾಯಕನಹಳ್ಳಿ ಮಂಟೇಸ್ವಾಮಿ ಮಠದ ಆವರಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಅನ್ನು ಗೆಲ್ಲಿಸಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕೋರಿದರು. ರೈತರಿಗೆ ಏನಾದರೂ ಅನುಕೂಲವಾಗಬೇಕಾದರೆ 2023ರ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರಬೇಕು. 

ಅವಳಿ ಮಕ್ಕಳಿಬ್ಬರು ಸಾವನ್ನಪ್ಪಿರುವ ಘಟನೆಯಿಂದ ದಿಗ್ಭ್ರಮೆಗೆ ಒಳಗಾಗಿದ್ದೇನೆ: ಸಚಿವ ಸುಧಾಕರ್‌

ಇಲ್ಲದಿದ್ದರೆ ರೈತರು ಉಳಿವಿಗೆ ಕಷ್ಟವಾಗಲಿದೆ. ರಾಷ್ಟ್ರೀಯ ಪಕ್ಷಗಳನ್ನು ರೈತರು, ಜನಸಾಮಾನ್ಯರನ್ನು ಶೋಷಣೆ ಮಾಡಲಿವೆ ಎಂದು ಎಚ್ಚರಿಸಿದರು. ತಾಲೂಕಿನ ಆಸ್ಪತ್ರೆಗಳನ್ನು ಉನ್ನತೀಕರಣಗೊಳಿಸಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಮನುಷ್ಯನಿಗೆ ಅಗತ್ಯವಾಗಿ ಬೇಕಾಗಿರುವ ರಸ್ತೆ, ಶಿಕ್ಷಣ, ನೀರಾವರಿ ಯೋಜನೆಗೆ ಹೆಚ್ಚು ಮಹತ್ವ ನೀಡಿರುವುದನ್ನು ಮತದಾರರು ಗಮನಿಸಬೇಕು. ಯುವಕರು ಚಿಂತಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ನಂತರ ಚಂದೂಪುರ, ಹಾಗಲಹಳ್ಳಿ, ಎಸ್‌.ಐ.ಹೊನ್ನಲಗೆರೆ, ಹೊಸೂರು, ಎಚ್‌.ಹೊಸಹಳ್ಳಿ, ಮುಡೀನಹಳ್ಳಿ ಗ್ರಾಮಗಳಿಗೆ ತೆರಳಿ ಜನರ ಕುಂದುಕೊರತೆಗಳನ್ನು ಶಾಸಕ ಡಿ.ಸಿ.ತಮ್ಮಣ್ಣ ಆಲಿಸಿದರು.

Follow Us:
Download App:
  • android
  • ios