Asianet Suvarna News Asianet Suvarna News

ಗ್ಯಾರಂಟಿ ಮೂಲಕ ಬ್ಲಾಕ್‌ಮೇಲ್: ನಿಖಿಲ್ ಕುಮಾರಸ್ವಾಮಿ ಕಿಡಿ

ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ ಎಂದು ಸಚಿವರೇ ಹೇಳುತ್ತಿರುವುದು ವಿಷಾದನೀಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ. ಮಾರ್ಗಸೂಚಿ ಬೆಲೆಯ ಮೇಲೂ ಶೇ.30ರಷ್ಟು ಏರಿಸಿದ್ದಾರೆ. ಹಾಲಿನ ಪ್ರೋತ್ಸಾಹಧನ ಸಿಕ್ಕಿಲ್ಲ. ಹಗರಣಗಳಿಂದ ರಾಜ್ಯದ ಹಣ ಲೂಟಿಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ 

JDS Youth Unit President nikhil kumaraswamy slams karnataka congress government grg
Author
First Published Aug 16, 2024, 5:25 AM IST | Last Updated Aug 16, 2024, 5:25 AM IST

ಬೆಂಗಳೂರು(ಆ.16):  ರಾಜ್ಯದ ಜನತೆ ಕೇಳದಿದ್ದರೂ ಕಾಂಗ್ರೆಸ್ ಸರ್ಕಾರವೇ ನೀಡಿರುವ ಗ್ಯಾರಂಟಿಗಳನ್ನು ಇದೀಗ ಸ್ಥಗಿತಗೊಳಿಸುವ ಪ್ರಯತ್ನದ ಮೂಲಕ ಬ್ಲಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಗುರುವಾರ ಜೆಡಿಎಸ್‌ ಕಚೇರಿಯಲ್ಲಿ ಸ್ವಾತಂತ್ರೋತ್ಸವ ಪ್ರಯುಕ್ತ ಮಾತನಾಡಿದ ಅವರು, ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ ಎಂದು ಸಚಿವರೇ ಹೇಳುತ್ತಿರುವುದು ವಿಷಾದನೀಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ. ಮಾರ್ಗಸೂಚಿ ಬೆಲೆಯ ಮೇಲೂ ಶೇ.30ರಷ್ಟು ಏರಿಸಿದ್ದಾರೆ. ಹಾಲಿನ ಪ್ರೋತ್ಸಾಹಧನ ಸಿಕ್ಕಿಲ್ಲ. ಹಗರಣಗಳಿಂದ ರಾಜ್ಯದ ಹಣ ಲೂಟಿಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇವೇಗೌಡರ ವಯಸ್ಸಿಗೆ ಮರ್ಯಾದೆ ಕೊಡುವುದು ಕಲಿಯಬೇಕು: ಡಿಕೆಶಿಗೆ ನಿಖಿಲ್‌ ಕುಮಾರಸ್ವಾಮಿ ಟಾಂಗ್

ಕಾಂಗ್ರೆಸ್ ಪಕ್ಷ ಚುನಾವಣೆ ಗೆಲ್ಲುವುದಕ್ಕೆ ಏನು ಬೇಕಾದರೂ ಮಾಡುತ್ತದೆ. ಸರ್ಕಾರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಂಸದರನ್ನು ಆಯ್ಕೆ ಮಾಡಿಲ್ಲ ಎಂದರೆ ಗ್ಯಾರಂಟಿಗಳನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಅಲ್ಲದೇ, ರೈತರ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ. ಹಾಲಿನ ಪ್ರೋತ್ಸಾಹ ಧನವೂ ರೈತರಿಗೆ ಸಿಕ್ಕಿಲ್ಲ. ಆದರೆ, ಹಾಲಿನ ದರ ಏರಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಹಣಕ್ಕೆ, ಸಂಪನ್ಮೂಲಕ್ಕೆ ಕೊರತೆ ಇಲ್ಲ. ಮೂರೂವರೆ ಲಕ್ಷ ಕೋಟಿ ರು.ನಷ್ಟು ರಾಜ್ಯದ ಬಜೆಟ್ ಗಾತ್ರ ಇದೆ. ತೆರಿಗೆ ರೂಪದಲ್ಲಿ ಕಟ್ಟುವಂತಹ ರಾಜ್ಯದ ಜನತೆಯ ಹಣ ದುರ್ಬಳಕೆ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Latest Videos
Follow Us:
Download App:
  • android
  • ios