ಕರ್ನಾಟಕದ ಜನಪ್ರತಿನಿಧಿಗಳೂ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಾಯಕರುಗಳಿಗೆ ಕೊರೋನಾ ದೃಢಪಟ್ಟಿದೆ. ಇದೀಗ ಮತ್ತೋರ್ವ ಕಾಂಗ್ರೆಸ್ ಶಾಸಕನಿಗೆ ಮಾಹಾಮಾರಿ ಅಟ್ಯಾಕ್ ಆಗಿದೆ.

ಬೆಂಗಳೂರು, (ಜುಲೈ.10): ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಪುತ್ರ ಡಾ. ಅಜಯ್ ಸಿಂಗ್ ಅವರಿಗೂ ಕೊರೋನಾ ವೈರಸ್ ತಗುಲಿದೆ.

ಕಲಬುರಗಿ ಜಿಲ್ಲೆಯಲ್ಲಿ ಜೀವರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಇಂದು (ಶುಕ್ರವಾರ) ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರೇ ಟ್ವಿಟ್ಟರ್‌ ಮೂಲಕ ಖಚಿತಪಡಿಸಿದ್ದಾರೆ.

Scroll to load tweet…

 ಈ ಹಿನ್ನೆಲೆಯಲ್ಲಿ ತಮ್ಮ ಸಂಪರ್ಕದಲ್ಲಿ ಬಂದಿದ್ದ ಜನರಿಗೆ ಪ್ರಾಥಮಿಕ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ವಿನಂತಿಸಿಕೊಂಡಿದ್ದಾರೆ. ಇನ್ನು ಅಜಯ್ ಸಿಂಗ್ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನಾ ವೈರಸ್‌ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು....

ಈಗಾಗಲೇ ಅದೇ ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರಿಗೂ ನಿನ್ನೆ (ಗುರುವಾರ) ಕೊರೋನಾ ಅಟ್ಯಾಕ್ ಆಗಿದೆ. 

ಅಲ್ಲದೇ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಅವರಿಗೂ ಕೊರೋನಾ ದೃಢಪಟ್ಟಿದೆ. ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಕಚೇರಿಗೆ ಸ್ಯಾನಿಟೈಸಿಂಗ್ ಮಾಡಲಾಗಿದೆ.

ಶಾಸಕರಾದ ಶರತ್ ಬಚ್ಚೇಗೌಡ, ಭರತ್ ಶೆಟ್ಟಿ, ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಇಬ್ಬರು ವಿಧಾನಪರಿಷತ್ ಸದಸ್ಯರಿಗೂ ಕೊರೋನಾ ಸೊಂಕು ತಗುಲಿರುವುದನ್ನು ಇಲ್ಲಿ ಸ್ಮರಿಸಬಹುದು. ಇನ್ನು ಈ ನಾಯಕರ ಸಂಪರ್ಕಕ್ಕೆ ಬಂದ ಇತರೆ ಮುಖಂಡರಿಗೂ ಕೊರೋನಾ ಆತಂಕ ಶುರುವಾಗಿದೆ.