ಸಿಎಂ ಬೊಮ್ಮಾಯಿಗೆ ನಡ್ಡಾ ಶಹಬ್ಬಾಸ್‌..!

ಬಳ್ಳಾರಿಯಲ್ಲಿ ನಡೆದ ಎಸ್‌ಟಿ ಸಮಾವೇಶದಲ್ಲಿ ರಾಜ್ಯದ ಆಡಳಿತಕ್ಕೆ ನಡ್ಡಾ ಫುಲ್‌ ಮಾರ್ಕ್ಸ್, ಜನರ ಕಲ್ಯಾಣಕ್ಕೆ ಹಗಲಿರುಳು ಶ್ರಮಿಸುವ ದಕ್ಷ ಮುಖ್ಯಮಂತ್ರಿ

JP Nadda Appreciate to CM Basavaraj Bommai Government grg

ಬಳ್ಳಾರಿ(ನ.21): ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಹಾಗೂ ಕರ್ನಾಟಕದಲ್ಲಿ ಬೊಮ್ಮಾಯಿ ಸರ್ಕಾರಗಳು ಅತ್ಯುತ್ತಮವಾಗಿ ಕೆಲಸ ಮಾಡುತ್ತಿವೆ. ನಾಡಿನ ಜನರ ಕಲ್ಯಾಣಕ್ಕಾಗಿ ಬಸವರಾಜ ಬೊಮ್ಮಾಯಿ ಹಗಲಿರುಳು ಶ್ರಮಿಸುವ ದಕ್ಷ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆದಿವಾಸಿ-ಬುಡಕಟ್ಟು ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಿರುವ ಬಿಜೆಪಿ, ಹಿಂದುಳಿದ ಎಲ್ಲ ಸಮುದಾಯಗಳ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿಕೊಂಡು ಅನುಷ್ಠಾನಗೊಳಿಸುತ್ತಿದೆ. ಆದರೆ, ಎಪ್ಪತ್ತು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಯಾವುದೇ ಕಾರ್ಯಕ್ರಮ ರೂಪಿಸದೆ ವಂಚಿಸಿತು ಎಂದು ಅವರು ಹರಿಹಾಯ್ದಿದ್ದಾರೆ.

ಗಣಿನಾಡಲ್ಲಿ ಚುನಾವಣೆ ರಣ ಕಹಳೆ ಮೊಳಗಿಸಿದ ಬಿಜೆಪಿ

ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿದ ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಫುಲ್‌ ಮಾರ್ಕ್ಸ್ ನೀಡುವ ಮೂಲಕ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು.

ದಲಿತರ ಬಗ್ಗೆ ಕಾಳಜಿ ಇರುವವರನ್ನು ಆರಿಸಿ:

ದಲಿತ ಸಮುದಾಯದ ಬಗ್ಗೆ ಕಾಳಜಿ ಹೊಂದಿರುವ ಬಿಜೆಪಿಗೆ ಬರುವ ಚುನಾವಣೆಯಲ್ಲಿ ಜನರು ಆಶೀರ್ವದಿಸಬೇಕು. ಆ ಮೂಲಕ ಮತ್ತೆ ನಿಮ್ಮ ಸೇವೆ ಮಾಡುವ ಅವಕಾಶವನ್ನು ನಮ್ಮ ಪಕ್ಷಕ್ಕೆ ನೀಡಬೇಕು ಎಂದು ನೆರೆದಿದ್ದ ಜನತೆಯಲ್ಲಿ ನಡ್ಡಾ ಮನವಿ ಮಾಡಿದರು.

ಬಿಜೆಪಿ ದಲಿತ, ಬುಡಕಟ್ಟು, ಆದಿವಾಸಿಗಳಿಗೆ ಆದ್ಯತೆ ನೀಡಿದೆ ಎಂಬುದಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಸಾಕ್ಷಿ. ಅತ್ಯುನ್ನತವಾದ ರಾಷ್ಟ್ರಪತಿ ಹುದ್ದೆಯನ್ನು ಅವರಿಗೆ ನೀಡಲಾಗಿದೆ. ಬುಡಕಟ್ಟು ಸಮುದಾಯದ ಅರ್ಜುನ ಮುಂಡಾ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಈಗ ಕೇಂದ್ರ ಸಚಿವರಾಗಿದ್ದಾರೆ. ಆದಿವಾಸಿ, ಬುಡಕಟ್ಟು ಸಮುದಾಯಕ್ಕೆ ಕೇಂದ್ರ ಸಂಪುಟದಲ್ಲಿ ಸಾಕಷ್ಟುಸಚಿವ ಸ್ಥಾನಗಳನ್ನು ನೀಡಲಾಗಿದೆ. ಈ ಸಮುದಾಯದವರನ್ನು ರಾಜ್ಯಪಾಲರನ್ನಾಗಿ ಮಾಡಲಾಗಿದೆ. ಎಲ್ಲ ಜನ-ಜಾತಿಗಳ ಪ್ರಗತಿಗೆ ನಾವು ಕೆಲಸ ಮಾಡುತ್ತಿದ್ದೇವೆ. ಆದರೆ, ಕಾಂಗ್ರೆಸ್‌, ದಲಿತರನ್ನು ಓಟ್‌ ಬ್ಯಾಂಕ್‌ ಮಾಡಿಕೊಂಡಿತೇ ವಿನಃ ಅವರ ಅಭಿವೃದ್ಧಿಯ ಬಗ್ಗೆ ಕಾಳಜಿ ತೋರಿಸಲಿಲ್ಲ ಎಂದು ದೂರಿದರು.

ಅಭಿವೃದ್ಧಿಪರ ಆಡಳಿತ:

ಕೇಂದ್ರ ಸರ್ಕಾರ ಎಸ್ಟಿಸಮುದಾಯ ಹಾಗೂ ವಿದ್ಯಾರ್ಥಿಗಳಿಗೆ ಕೈಗೊಂಡಿರುವ ವಿವಿಧ ಯೋಜನೆಗಳನ್ನು ಪ್ರಸ್ತಾಪಿಸಿದ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ.ಎಸ್‌.ಯಡಿಯೂರಪ್ಪ ಅವರ ಮಾರ್ಗದರ್ಶನ ಮತ್ತು ಬಸವರಾಜ ಬೊಮ್ಮಾಯಿ ಅವರ ಅಭಿವೃದ್ಧಿಪರ ಆಡಳಿತದಿಂದ ರಾಜ್ಯ ಸರ್ಕಾರ ಮುನ್ನಡೆಯುತ್ತಿದೆ ಎಂದು ಹೇಳಿದರು.

60 ವರ್ಷ ವೋಟ್‌ ಬ್ಯಾಂಕ್‌ಗೆ ಸೀಮಿತವಾಗಿಟ್ಟಿದ್ದ ಎಸ್‌ಸಿ, ಎಸ್ಟಿ ಸಮುದಾಯದ ಶಾಪ ಕಾಂಗ್ರೆಸ್‌ಗೆ ತಟ್ಟುತ್ತಿದೆ: ಸಿಎಂ ಬೊಮ್ಮಾಯಿ

ಬಳ್ಳಾರಿಯಲ್ಲಿ ನಡೆದ ಬಿಜೆಪಿಯ ಪರಿಶಿಷ್ಟಪಂಗಡಗಳ ನವಶಕ್ತಿ ಸಮಾವೇಶದಲ್ಲಿ ಜೆ.ಪಿ.ನಡ್ಡಾ, ಬಸವರಾಜ ಬೊಮ್ಮಾಯಿ, ಪ್ರಹ್ಲಾದ್‌ ಜೋಶಿ, ಅರುಣ್‌ ಸಿಂಗ್‌ ಮುಂತಾದವರು ಭಾಗವಹಿಸಿದ್ದರು.

ಮೋದಿ ಸಲಹೆಯಂತೆ ದಲಿತ ಮೀಸಲು ಏರಿಕೆ

ಪ್ರಧಾನಿ ನರೇಂದ್ರ ಮೋದಿಯವರ ಸಲಹೆಯಂತೆ ಎಸ್ಸಿ, ಎಸ್ಟಿಮೀಸಲಾತಿ ಹೆಚ್ಚಿಸಿದ್ದೇವೆ. ದಲಿತರು, ಅಲ್ಪಸಂಖ್ಯಾತರ ಹೆಸರು ಹೇಳಿಕೊಂಡು ಈವರೆಗೆ ಅಧಿಕಾರ ಅನುಭವಿಸಿದ ಕಾಂಗ್ರೆಸ್‌ನಿಂದ ಮೀಸಲಾತಿ ಹೆಚ್ಚಿಸಲು ಸಾಧ್ಯವಾಗಲಿಲ್ಲ. ಬಳ್ಳಾರಿಯಿಂದ ಗೆದ್ದು ಹೋಗಿದ್ದ ಸೋನಿಯಾ ಗಾಂಧಿಯವರು ಬಳ್ಳಾರಿಯ ಜನತೆಗೆ ಮೋಸ ಮಾಡಿದರು. ಆದರೆ, ಶ್ರೀರಾಮುಲು ಕೊಟ್ಟಮಾತನ್ನು ಉಳಿಸಿಕೊಂಡಿದ್ದಾರೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
 

Latest Videos
Follow Us:
Download App:
  • android
  • ios