ಸಿಎಂ ಬೊಮ್ಮಾಯಿ ಸರ್ಕಾರ ಹೊಗಳಿದ ಜೆಪಿ ನಡ್ಡಾ ಹಿಂದುಳಿದ ವರ್ಗಗಳ ಮೀಸಲಾತಿ ಇಲ್ಲದೇ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ನಮ್ಮ ಅಭಿವೃದ್ಧಿ ಏನಾಗಿದೆ? ನಾವೆಲ್ಲಿದ್ದೇವೆ? ಆಲೋಚಿಸಿ
ಚಿತ್ರದುರ್ಗ(ಜೂ.18): ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳಿಗಾಗಿ ಪ್ರತ್ಯೇಕ ಹಾಸ್ಟೆಲ್ಗಳು, ಪ್ರತ್ಯೇಕ ರೆಸಿಡೆನ್ಸಿಯಲ್ ಶಾಲೆಗಳು ಹಾಗೂ ಉದ್ಯೋಗ ನೀಡುವಂತಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ನಡ್ಡಾ, ಹಿಂದುಳಿದ ವರ್ಗಗಳ ಮೀಸಲಾತಿ ಇಲ್ಲದೇ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಮಾತಿನಲ್ಲಿ ಜಾಗೃತ ನಾಯಕ ಎಂಬುದನ್ನು ತೋರಿಸುತ್ತಿದೆ ಎಂದರು.
ಸಾಮಾಜಿಕ ನ್ಯಾಯವಷ್ಟೇ ಅಲ್ಲ, ಸಾಮಾಜಿಕ ಅವಕಾಶ ನೀಡುವಂತಾಗಬೇಕು.ಬೊಮ್ಮಾಯಿ ಸರ್ಕಾರ ಸಾಮಾಜಿಕ ಅವಕಾಶವನ್ನೂ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ ಭಾರತದ ಬಡತನರೇಖೆಗಿಂತ ಕೆಳಗಿನ ಮಟ್ಟ 22% ಇಂದ 10% ಕ್ಕೆ ಕಡಿಮೆಯಾಗಿದೆ ಎಂದು ನಡ್ಡಾ ಹೇಳಿದ್ದಾರೆ.ಒಂದು ದಿನ ಮೊಬೈಲ್ ಸ್ವಿಚ್ ಆಫ್ ಮಾಡಿ , ಯಾರೊಂದಿಗೂ ಮಾತನಾಡಬೇಡಿ, ಬಳಿಕ ಏಕಾಗ್ರತೆಯಿಂದ ನಮ್ಮ ಆರ್ಥಿಕತೆ ಸ್ಥಿತಿಯೇನಿದೆ? ನಮ್ಮ ಅಭಿವೃದ್ಧಿ ಏನಾಗಿದೆ? ನಾವೆಲ್ಲಿದ್ದೇವೆ? ನಾವು ಎಷ್ಟು ಕಾಲಾವಧಿಯಲ್ಲಿ ಎಲ್ಲಿಗೆ ಹೋಗಬೇಕು ಎಂಬುದನ್ನು ಆಲೋಚಿಸಿ. ಮಾಹಿತಿ ಪಡೆದುಕೊಳ್ಳಿ. ಎಲ್ಲವೂ ಅರ್ಥವಾಗಲಿದೆ ಎಂದು ನಡ್ಡಾ ಹೇಳಿದ್ದಾರೆ.
ರಾಜಕೀಯ ಸಂಸ್ಕೃತಿ ಬದಲಾಯಿಸಿದ್ದು ಮೋದಿ ಹೆಗ್ಗಳಿಕೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಣ್ಣನೆ
ಮುಂಬರವು ಚುನಾವಣೆ ಹಾಗೂ ಪಕ್ಷ ಸಂಘಟನೆ ಕುರಿತು ಹೆಚ್ಚಿನ ಗಮನಕೇಂದ್ರಿಕರಿಸದ ಜೆಪಿ ನಡ್ಡಾ, ಬಿಜೆಪಿಯನ್ನು ಬೂತ್ ಮಟ್ಟದಿಂದ ಸದೃಡವಾಗಿ ಬೆಳೆಸಲು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದ್ದಾರೆ. ಎಲ್ಲಾ ಜಾತಿಗಳ ನಾಯಕರ ಬಗ್ಗೆ ಪಟ್ಟಿ ಮಾಡಿ , ಇದನ್ನು ದ್ವಿಗುಣಗೊಳಿಸಲು ದುಡಿಯಬೇಕು. ನಮ್ಮ ಸಂಘಟನೆ ಎಷ್ಟು ದೊಡ್ಡದಾಗಿದೆ. ಅದು ಎಷ್ಟಾಗಿದೆ ಎಂದರೆ ಪಕ್ಷಕ್ಕಾಗಿ ನನ್ನ ಕೊಡುಗೆ ಏನು ಎಂಬುದನ್ನೇ ಮರೆತುಬಿಡುವಂತಾಗಿದೆ. ಅಷ್ಟೊಂದು ಬಿಜೆಪಿ ವಿಶಾಲವಾಗಿ ಬೆಳೆದಿದೆ ಎಂದು ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ್ದಾರೆ.
ಎಲ್ಲಿ ಬಿಜೆಪಿಯ ಅವಶ್ಯಕತೆಯಿದೆಯೋ ಅಲ್ಲಿ ಬಿಜೆಪಿ ಧಾವಿಸುತ್ತದೆ. ನಾವು ಬೇರೆಯವರಿಗಿಂತ ಭಿನ್ನ. ಸಮಾಜವಾದಿ, ಡಿಎಂಕೆ, ಆರ್.ಜೆ.ಡಿ. ಜನತಾದಳದಲ್ಲಿ ಕುಟುಂಬ ಸದಸ್ಯರಷ್ಟೇ ಪ್ರಧಾನಿಯಾಗಲು ಸಾಧ್ಯ. ಆದರೆ ನಮ್ಮ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ ಯಾವುದೇ ಸ್ಥಾನ ಅಲಂಕರಿಸಲು ಸಾಧ್ಯ ಎಂದು ನಡ್ಡಾ ಹೇಳಿದ್ದಾರೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವುದನ್ನು ಅರಿತು ಜನರಿಗೆ ತಿಳಿಸಿ. ರಾಜಕೀಯ ಕಾರ್ಯಕರ್ತರು ಸದಾ ಜಾಗೃತಾ ವಸ್ಥೆಯಲ್ಲಿರಬೇಕು. ರಾಜಕೀಯ ಪಕ್ಷಗಳ ಕಾರ್ಯಕರ್ತರಾಗಿ ರಾಜಕೀಯದಲ್ಲಿ ಏನು ನಡೆಯುತ್ತಿದೆ. ವಾತಾವರಣ ಹೇಗಿದೆ ವಿಪಕ್ಷಗಳ ಬಗ್ಗೆ ಏನಿದೆ ಎಂಬುದನ್ನು ಎಲ್ಲರೂ ತಿಳಿದಿರಬೇಕು ಎಂದಿದ್ದಾರೆ.
ರಾಜಕೀಯ ಕಾರ್ಯಕರ್ತರ ಜೀವನ ಪಕ್ಷವಾಗಬೇಕು. ತಮ್ಮತಮ್ಮ ಕ್ಷೇತ್ರದಲ್ಲಿ ಏನಾಗುತ್ತಿದೆ ಎಂಬುದನ್ನು ಕಾರ್ಯಕರ್ತರು ಅರಿತಿರಬೇಕು. ಕಾರ್ಯಕರ್ತರು ಪ್ರೋ ಆಕ್ವಿವ್ ಆಗಿರಬೇಕು. ನಮ್ಮ ಪರಿಚಯವೇನೆಂಬುದು ಬಿಜೆಪಿಯಾಗಬೇಕು. ಎಲ್ಲರ ಜಾತಿ ಬಿಜೆಪಿಯಾಗಬೇಕು.ಇಂತಹ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ.
18 ಹಾಲಿ ಶಾಸಕರಿಗಿಲ್ಲ ಟಿಕೆಟ್: ಇಲ್ಲಿದೆ ಬಿಜೆಪಿ ಹೈಕಮಾಂಡ್ ನಿರ್ಧಾರದ ಹಿಂದಿನ ಕಾರಣ
ಬಿಜೆಪಿ ಎನ್ನುವ ಜಾತಿಯೊಂದಿಗೆ ಎಲ್ಲರೂ ತಮ್ಮತಮ್ಮನ್ನು ಜೋಡಿಸಿಕೊಳ್ಳಬೇಕು. ಎಲ್ಲರ ಜಾತಿಯೇ ಬಿಜೆಪಿಯೇ ಆಗಬೇಕು.ನಮ್ಮ ಜಾತಿಯ ವ್ಯಕ್ತಿ ಬಿಜೆಪಿಯಲ್ಲಿದ್ದಾನೆ ಎಂಬ ಹೆಮ್ಮೆ ಜಾತಿ ಸಮುದಾಯದಲ್ಲಿ ಬರಬೇಕು.
ಒಬಿಸಿ ವರ್ಗದಿಂದ ಯಾರೊಬ್ಬರೂ ಬಿಜೆಪಿಯಿಂದ ದೂರವುಳಿಯದಂತೆ ನೋಡಿಕೊಳ್ಳಬೇಕು. ಹಿಂದುಳಿದ ಜಾತಿಗಳ ಪ್ರಭಾವಿ ಯಾರು? ನಾಯಕ ಯಾರು? ಎಂಬುದನ್ನು ತಿಳಿಯಬೇಕು. ನಮ್ಮನಮ್ಮಲ್ಲಿ ಜಾತಿ ದ್ವೇಷ ಬರಬಾರದು. ಎಲ್ಲಾ ಜಾತಿಗಳ ಪ್ರಭಾವಿಗಳು ನಾಯಕರು ಬಿಜೆಪಿಯಾಗಬೇಕು. ಸಣ್ಣ ಸಣ್ಣ ಮಾತುಗಳನ್ನಾಡುವವರು ಸಣ್ಣದಾಗಿಯೇ ಇದ್ದು ವ್ಯರ್ಥ ಆಗುತ್ತಾರೆ. ಪ್ರಧಾನ ಮಂತ್ರಿ ಮೋದಿ ಒಂದೊಂದು ಸಮುದಾಯ ಜಾತಿಯನ್ನು ಜೋಡಿಸುವ ಕೆಲಸ ಮಾಡುತ್ತಿದ್ದಾರೆ.ಹೀಗಾಗಿ ಎಲ್ಲರೂ ಪಕ್ಷ ಸಂಘಟನೆಯತ್ತ ಲಕ್ಷ್ಯವಹಿಸಬೇಕು ಎಂದು ನಡ್ಡಾ ಹೇಳಿದ್ದಾರೆ
