ಜೆಪಿಸಿ ಒಂದು ನಾಟಕ ಕಂಪನಿ, ಅದಕ್ಕೆ ಮಾನ್ಯತೆ ಇಲ್ಲ: ಡಿ.ಕೆ.ಶಿವಕುಮಾರ್
ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ. ಹುಬ್ಬಳ್ಳಿ, ವಿಜಯಪುರಕ್ಕೆ ಭೇಟಿ ನೀಡಿರುವ ಜೆಪಿಸಿ ಸಮಿತಿ ಒಂದು ನಾಟಕ ಕಂಪನಿ. ಅದಕ್ಕೆ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ ಎಂದು ಕಿಡಿಕಾರಿದರು.
ಹುಬ್ಬಳ್ಳಿ (ನ.08): ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ. ಹುಬ್ಬಳ್ಳಿ, ವಿಜಯಪುರಕ್ಕೆ ಭೇಟಿ ನೀಡಿರುವ ಜೆಪಿಸಿ ಸಮಿತಿ ಒಂದು ನಾಟಕ ಕಂಪನಿ. ಅದಕ್ಕೆ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ ಎಂದು ಕಿಡಿಕಾರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜೆಪಿಸಿ ಅಂದರೆ ಜಾಯಿಂಟ್ ಪಾರ್ಲಿಮೆಂಟರಿ ಕಮಿಟಿ. ಅದಕ್ಕೊಂದು ಲೆಕ್ಕವಿದೆ. ಅವರು ರಾಜ್ಯಕ್ಕೆ ಬರಬೇಕು ಅಂದರೆ ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.
ಇಡೀ ಸಮಿತಿ ತಂಡ ಭೇಟಿ ನೀಡಬೇಕು. ಕೇವಲ ಸಮಿತಿ ಅಧ್ಯಕ್ಷರು ನಮ್ಮಲ್ಲಿ ಬಂದಿದ್ದಾರೆಂದರೆ ಅವರು ಪಕ್ಷದ ಕೆಲಸಕ್ಕಾಗಿ ಬಂದಿದ್ದಾರೆ. ಅವರು ಸಂಸದರಾದ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ವಿ.ಸೋಮಣ್ಣ ಜತೆ ಬಂದಿದ್ದಾರೆ. ಇವರಿಬ್ಬರು ಜೆಪಿಸಿ ಸದಸ್ಯರೇ? ಎಂದು ಪ್ರಶ್ನಿಸಿದರು. ಇಲ್ಲಿಗೆ ಭೇಟಿ ನೀಡಿದವರು ಕೇವಲ ಬಿಜೆಪಿ ಸದಸ್ಯರು ಮಾತ್ರ, ರಾಜಕೀಯ ಉದ್ದೇಶದಿಂದ ಅವರು ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ. ಅವರು ಏನಾದರೂ ರಾಜಕೀಯ ಮಾಡಲಿ. ಸತ್ಯಾಂಶವೇ ಬೇರೆ ಎಂದು ತಿಳಿಸಿದರು.
ವಕ್ಫ್ ವಿವಾದ ಬಗ್ಗೆ ಲೋಕಸಭಾ ಸ್ಪೀಕರ್‌ಗೆ ವರದಿ ಸಲ್ಲಿಕೆ: ಜಗದಂಬಿಕಾ ಪಾಲ್
ಬಿಜೆಪಿಯಿಂದಲೇ ನೋಟಿಸ್: ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ವಕ್ಫ್ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿ ಬೇರೆ ಜಿಲ್ಲೆಗಳಲ್ಲಿ 2019ಕ್ಕೂ ಮೊದಲು ನೋಟಿಸ್ ಕೊಟ್ಟಿದ್ದು ಬಿಜೆಪಿ. ಬೊಮ್ಮಾಯಿ ಅವರ ಸರ್ಕಾರವೇ ನೋಟಿಸ್ ನೀಡಿದೆ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ ಎಂದು ಟೀಕಿಸಿದರು.
ನಾವು ನುಡಿದಂತೆ ನಡೆಯುತ್ತೇವೆ, ನಡೆಯುತ್ತಿದ್ದೇವೆ: ೧.೨೯ ಕೋಟಿ ಮಹಿಳೆಯರ ಖಾತೆಗೆ ನೇರವಾಗಿ ಗೃಹಲಕ್ಷ್ಮೀ ಹಣ ₹೨ ಸಾವಿರ ಬರುತ್ತಿದೆ. ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಓಡಾಡುತ್ತಿದ್ದಾರೆ. ಸುಮಾರು ₹೫೦-೫೨ ಸಾವಿರ ಕೋಟಿ ಹಣ ಗ್ಯಾರಂಟಿಗಳಿಗೆ ಎಂದು ಮೀಸಲಿಡಲಾಗಿದೆ ಎಂದರು. ಚನ್ನಪಟ್ಟಣದ ಚುನಾವಣಾ ಪ್ರಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವೇಗೌಡರ ಇಬ್ಬಗೆ ನೀತಿ ಬಗ್ಗೆ ಹೇಳಿದ್ದಾರೆ. ಒಬ್ಬ ಮೊಮ್ಮಗ ಏನೋ ಮಾಡಿದಾಗ ಕಣ್ಣಲ್ಲಿ ನೀರು ಬರಲಿಲ್ಲ.
ಅಪರಾಧ ಹಾಗೂ ರೌಡಿ ಚಟುವಟಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಅಲೋಕ್ ಮೋಹನ್
ಆದರೆ ಈಗ? ದೊಡ್ಡವರಾದ ಕಾರಣ ಅವರ ಬಗ್ಗೆ ಚರ್ಚೆ ಮಾಡಲು ಹೋಗುವುದಿಲ್ಲ. ದೇವೇಗೌಡರು ಈ ನಾಡಿನ ಹಿರಿಯ ರಾಜಕಾರಣಿ. ಅವರ ಬಗ್ಗೆ ಅಪಾರವಾದ ಗೌರವವಿದೆ. ನಾನೇನಾದರೂ ಲೂಟಿ ಮಾಡಿದ್ದರೆ ನನ್ನ ಕ್ಷೇತ್ರದ ಜನ ೧.೨೩ ಲಕ್ಷ ಮತಗಳ ಅಂತರದಿಂದ ೮ ಬಾರಿ ನನ್ನ ಆಯ್ಕೆ ಮಾಡುತ್ತಿದ್ದಾರಾ? ದೇವೇಗೌಡರ ಸುಪುತ್ರ ಕುಮಾರಸ್ವಾಮಿ ವಿರುದ್ಧವೂ ನನ್ನನ್ನು ಆಯ್ಕೆ ಮಾಡಿದ್ದಾರೆ. ನನ್ನ ಕ್ಷೇತ್ರದ ಜನ ನನಗೆ ದೇವರಿದ್ದಂತೆ. ಅವರ ಬದುಕಿನಲ್ಲಿ ಬದಲಾವಣೆ ತರಲು ಶ್ರಮಿಸುತ್ತಿದ್ದೇನೆ ಎಂದು ಹೇಳಿದರು.