ಜು. 14 ಮತ್ತು 15ಕ್ಕೆ ‘ಸಂಘ’ದ ಜತೆ ಬಿಜೆಪಿ ಚಿಂತನ ಮಂಥನ ಸಭೆ

ಮುಂಬರುವ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು  ಬಿಜೆಪಿ ಹಾಗೂ ಸಂಘ ಪರಿವಾರ ಒಳಗೊಂಡ ಮಹತ್ವದ ‘ಚಿಂತನ-ಮಂಥನ’ ಸಭೆ  ನಡೆಯಲಿದ್ದು, ರಾಜ್ಯ ಸರ್ಕಾರದ ಸಾಧನೆ ಪರಾಮರ್ಶೆ  ಆಡಳಿತ, ನಿಗಮ-ಮಂಡಳಿ ಚರ್ಚೆಯಾಗುವ ಸಾಧ್ಯತೆ ಇದೆ.

july 14th and 15th Karnataka  BJP and sangh parivar meeting gow

 ಬೆಂಗಳೂರು (ಜು.8): ಮುಂಬರುವ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ತಂತ್ರಗಾರಿಕೆ ಹೆಣೆಯುವ ಸಂಬಂಧ ಮುಂದಿನ ವಾರ ಮುಖ್ಯಮಂತ್ರಿ ಸೇರಿದಂತೆ ಆಡಳಿತಾರೂಢ ಬಿಜೆಪಿಯ ಹಿರಿಯ ನಾಯಕರು ಹಾಗೂ ಸಂಘ ಪರಿವಾರದ ಮುಖಂಡರನ್ನು ಒಳಗೊಂಡ ಮಹತ್ವದ ‘ಚಿಂತನ-ಮಂಥನ’ ಸಭೆ ನಡೆಯಲಿದೆ.

ಈ ತಿಂಗಳ 14 ಮತ್ತು 15ರಂದು ಎರಡು ದಿನಗಳ ಕಾಲ ಬೆಂಗಳೂರಿನ ಚಾಮರಾಜಪೇಟೆಯ ಸಂಘ ಪರಿವಾರದ ಕೇಂದ್ರ ಸ್ಥಳವಾದ ‘ಕೇಶವ ಕೃಪ’ದಲ್ಲಿ ಸಭೆ ನಡೆಯುವುದು ಬಹುತೇಕ ನಿಶ್ಚಿತವಾಗಿದೆ.

ಇದೊಂದು ರೀತಿಯಲ್ಲಿ ಮುಂದಿನ ಚುನಾವಣೆಗೆ ಪರೋಕ್ಷವಾಗಿ ಸಿದ್ಧತೆ ಆರಂಭಿಸಿದಂತೆ. ಚುನಾವಣೆ ಎದುರಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳನ್ನು ಅಂತಿಮಗೊಳಿಸಿ ಅನುಷ್ಠಾನಗೊಳಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ. ಈ ಸಭೆಯ ಬಳಿಕ ರಾಜ್ಯ ಬಿಜೆಪಿ ಈಗಿರುವ ಸಣ್ಣ ಪುಟ್ಟಲೋಪದೋಷಗಳನ್ನು ನಿವಾರಿಸಿಕೊಂಡು ಚುನಾವಣೆಯತ್ತ ಗಂಭೀರವಾಗಿ ಹೆಜ್ಜೆ ಇಡಲಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯಸಭೆಗೆ ನಾಮನಿರ್ದೇಶನ: ವೀರೇಂದ್ರ ಹೆಗ್ಗಡೆ ತಂದೆ, ತಾತ ಕೂಡ ಶಾಸಕರಾಗಿದ್ದರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಯ ಪರಾಮರ್ಶೆ ನಡೆಸುವುದರ ಜೊತೆಗೆ ಚುನಾವಣೆ ಉದ್ದೇಶದಿಂದ ಆಡಳಿತದಲ್ಲಿ ಏನೇನು ಸುಧಾರಣೆ ತರಬೇಕು ಎಂಬುದರ ಬಗ್ಗೆಯೂ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ಆಡಳಿತವನ್ನು ಇನ್ನಷ್ಟುಜನಪರವನ್ನಾಗಿಸುವ ದಿಕ್ಕಿನಲ್ಲಿ ಸಂಘ ಪರಿವಾರದ ಮುಖಂಡರು ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ ಎನ್ನಲಾಗಿದೆ.

ಈ ಸಭೆಯ ಬಳಿಕ ಕಳೆದ ಒಂದು ವರ್ಷದಿಂದ ನೆನೆಗುದಿಗೆ ಬಿದ್ದಿರುವ ನಿಗಮ-ಮಂಡಳಿಗಳ ನೇಮಕ ಪ್ರಕ್ರಿಯೆಗೂ ಚಾಲನೆ ಸಿಗುವ ನಿರೀಕ್ಷೆಯಿದೆ. ಇದಕ್ಕೆ ಸಂಬಂಧಿಸಿದಂತೆ ಮೂರು ವರ್ಷ ಅವಧಿ ಪೂರೈಸಿರುವ ನಿಗಮ-ಮಂಡಳಿಗಳ ಅಧ್ಯಕ್ಷರ ಪೈಕಿ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಅಲ್ಲದೆ, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆಯೂ ಈ ಸಭೆಯ ನಂತರ ಸ್ಪಷ್ಟಚಿತ್ರಣ ಹೊರಬೀಳುವ ಸಾಧ್ಯತೆಯಿದೆ.

Assembly Election 2023; ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಾತ್ವಿಕ ಒಪ್ಪಿಗೆ?

ಸಭೆಗೆ ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರೂ ಆಗಮಿಸುವ ಸಂಭವವಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ರಾಜ್ಯ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್‌ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Latest Videos
Follow Us:
Download App:
  • android
  • ios