ಚುನಾವಣೆಯಲ್ಲಿ ಸೋತು ನಿರಾಸೆಯಲ್ಲಿದ್ದ ಅಣ್ಣಾಮಲೈಗೆ ಒಲಿದು ಬಂತು ಮಹತ್ವದ ಹುದ್ದೆ
* ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಂಪರ್
* ಚುನಾವಣೆಯಲ್ಲಿ ಸೋತು ನಿರಾಸೆಯಲ್ಲಿದ್ದ ಅಣ್ಣಾಮಲೈಗೆ ಮಹತ್ವದ ಜವಾಬ್ದಾರಿ
* ಜೆ.ಪಿ ನಡ್ಡಾ ಸೂಚನೆ ಮೇರೆಗೆ ಅಣ್ಣಾಮಲೈ ಒಲಿದು ಬಂತು ಹುದ್ದೆ
ನವದೆಹಲಿ/ ಚೆನ್ನೈ, (ಜುಲೈ.08): ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡು ನಿರಾಸೆಯಲ್ಲಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈಗೆ ಮಹತ್ವದ ಹುದ್ದೆ ನೀಡಲಾಗಿದೆ.
ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿದ್ದ ಅಣ್ಣಾಮಲೈ ಅವರನ್ನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೂಚನೆ ಮೇರೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದು (ಗುರುವಾರ) ಆದೇಶ ಹೊರಡಿಸಿದ್ದಾರೆ.
ನಾನು ಮರೆಯಲಾರದ ಒಂದು ದಿನ; ಅಣ್ಣಾಮಲೈ ಹೇಳಿದ ಹೃದಯವಿದ್ರಾವಕ ಪ್ರಸಂಗ!
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್ ಮುರುಗನ್ ಅವರನ್ನ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಡೇರಿ ಖಾತೆ ಸಚಿವರನ್ನಾಗಿ ಮಾಡಲಾಗಿದೆ. ಹಾಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷವನ್ನು ಅಣ್ಣಾಮಲೈ ಹೆಗಲಿಗೆ ಹಾಕಲಾಗಿದೆ.
ಕಳೆದ ವಿಧಾಸನಭೆ ಚುನಾವಣೆಯಲ್ಲಿ ಸೋಲುಂಡ ಅಣ್ಣಾಮಲೈ ಕೊಂಚ ನಿರಾಸೆಯಲ್ಲಿದ್ದರು. ಆದರೆ ಅವರೊಬ್ಬ ಸಮರ್ಥ ನಾಯಕ ರೂಪುಗೊಳ್ಳುತ್ತಿದ್ದಾನೆ ಅನ್ನುತ್ತಿದೆ ತಮಿಳುನಾಡು ಬಿಜೆಪಿ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಪಕ್ಷ ಕಟ್ಟುವಲ್ಲಿ ಕಟ್ಟಾಳಾಗಿ ಅಣ್ಣಾಮಲೈರನ್ನು ತೊಡಗಿಸಬಹುದು ಎಂಬುದು ರಾಜ್ಯ ಬಿಜೆಪಿ ನಾಯಕರ ಲೆಕ್ಕಾಚಾರವಾಗಿದೆ.
ಅಣ್ಣಾಮಲೈ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ವೈಯಕ್ತಿಕ ವರ್ಚಸ್ಸು, ಜನಪ್ರಿಯತೆಯನ್ನು ಉಳಿಸಿಕೊಂಡಿದ್ದಾರೆ. ಪಕ್ಷವನ್ನು ಮುನ್ನಡೆಸುವ ಉತ್ಸಾಹಿ ಯುವ ರಾಜಕಾರಣಿಯಾಗಬಲ್ಲರು ಎಂದು 2024 ರ ಲೋಕಸಭಾ ಚುನಾವಣೆಗಳನ್ನು ಕೇಂದ್ರೀಕರಿಸಿ ಅಧ್ಯಕ್ಷ ಸ್ಥಾನಕ್ಕೆ ಕೆ. ಅಣ್ಣಾಮಲೈ ಅವರನ್ನ ನೇಮಕ ಮಾಡಲಾಗಿದೆ.