Asianet Suvarna News Asianet Suvarna News

ಕಾಂತರಾಜು ಆಯೋಗದ ವರದಿ ವೈಜ್ಞಾನಿಕ: ಮಾಜಿ ಸಚಿವ ಆಂಜನೇಯ

ಕಾಂತರಾಜು ಆಯೋಗದ ವರದಿ ವೈಜ್ಞಾನಿಕವಾಗಿದ್ದು, ಅದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುವ ಮುನ್ನವೇ ವಿರೋಧಿಸುವುದು ಸರಿಯಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. 
 

Kantaraj Commission Report Scientific Says Former Minister H Anjaneya gvd
Author
First Published Jan 25, 2024, 9:23 PM IST

ಸಿರಿಗೆರೆ (ಜ.25): ಕಾಂತರಾಜು ಆಯೋಗದ ವರದಿ ವೈಜ್ಞಾನಿಕವಾಗಿದ್ದು, ಅದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುವ ಮುನ್ನವೇ ವಿರೋಧಿಸುವುದು ಸರಿಯಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಶೋಷಿತರ ಜಾಗೃತಿಗಾಗಿ ಚಿತ್ರದುರ್ಗದಲ್ಲಿ ಏರ್ಪಡಿಸಲಾಗಿರುವ ಸಮಾವೇಶದ ಯಶಸ್ಸಿಗೆ ಭರಮಸಾಗರದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾಗಿದ್ದ ಅವಧಿಯಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಮತ್ತು ಶೋಷಿತ ಸಮುದಾಯಗಳ ಸ್ಥಿತಿಗತಿಯನ್ನು ಸಮೀಕ್ಷೆ ನಡೆಸಲು ಆಯೋಗವನ್ನು ರಚನೆ ಮಾಡಲಾಗಿತ್ತು. ಈ ಆಯೋಗವು ಹೆಚ್ಚು ಸಮರ್ಪಕವಾಗಿ, ವೈಜ್ಞಾನಿಕವಾಗಿ ಕೆಲಸ ಮಾಡಿ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ. ವರದಿಯನ್ನು ಸಂಪುಟದಲ್ಲಿ ಚರ್ಚಿಸುವ ಮುನ್ನವೇ ಕೆಲವರು ವಿರೋಧಿಸುವುದು ಸರಿಯಲ್ಲ ಎಂದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ "ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ" ನಡೆಯುತ್ತಿದ್ದು ಈ ಸಮಾವೇಶದಲ್ಲಿ ರಾಜ್ಯದ ಜನಪ್ರಿಯ ಧೀಮಂತ ನಾಯಕ, ಶೋಷಿತ ಸಮುದಾಯಗಳ ಧ್ವನಿಯಾದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಭಾಗವಹಿಸುತ್ತಿದ್ದು ರಾಜ್ಯದ ಮೂಲೆ ಮೂಲೆಯಿಂದ ಜನರು ಸಾಗರೋಪಾದಿಯಲ್ಲಿ ಈ ಸಮಾವೇಶಕ್ಕೆ ಭಾಗವಹಿಸುತ್ತಿದ್ದಾರೆ. ಆದ್ದರಿಂದ ಭರಮಸಾಗರ ಹೋಬಳಿಯಿಂದ ಅತಿ ಹೆಚ್ಚಿ‌ನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕರೆಕೊಟ್ಟರು.

ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ: ಸಚಿವ ಸಂತೋಷ್‌ ಲಾಡ್ ಸೂಚನೆ

ಈ ಸಭೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರು, ಮಾಜಿ ಜಿ.ಪಂ.ಸದಸ್ಯರಾದ ಕೃಷ್ಣಮೂರ್ತಿ, ಬಿ ಟಿ ಜಗದೀಶ್, ಲಿಂಗವ್ವ ನಾಗತಿಹಳ್ಳಿ ತಿಪ್ಪೇಸ್ವಾಮಿ, ಮಾಜಿ ನಗರಸಭಾ ಸದಸ್ಯರಾದ ಸಿ.ಟಿ.ಕೃಷ್ಣಮೂರ್ತಿ, ಶಮೀಮ್ ಪಾಷ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ , ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ದುರ್ಗೇಶ್ ಪೂಜಾರ್, ದಾದಾಪೀರ್, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಮುಬಾರಕ್, ಮುಖಂಡರಾದ ನಿರಂಜನ್ ಮೂರ್ತಿ ಶಿವಣ್ಣ, ಹನುಮಂತಪ್ಪ, ಶರಣಪ್ಪ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮುಖಂಡರು ಕಾರ್ಯಕರ್ತರು ಮುಂತಾದ ಮುಖಂಡರು ಹಾಜರಿದ್ದರು.

Follow Us:
Download App:
  • android
  • ios