ನವದೆಹಲಿ, (ಸೆ.29): ಕರ್ನಾಟಕ ವಿಧಾನ‌ಪರಿಷತ್‌ನ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರದ ಸ್ಥಾನಗಳಿಗೆ ಚುನಾವಣೆ‌ ಘೋಷಣೆಯಾಗಿದೆ.‌

ಆಗ್ನೇಯ ಪದವೀಧರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು‌ ಶಿಕ್ಷಕರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಕೇಂದ್ರ ಚುನಾವಣೆ ಆಯೋಗ ಚುನಾವಣೆ ಘೋಷಿಸಿದೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಯ ಅಧಿಸೂಚನೆ‌ ಅಕ್ಟೋಬರ್ 1ರಂದು ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ತಿಳಿಸಿದೆ.

 ಪದವೀಧರ ಕ್ಷೇತ್ರದ ಸದಸ್ಯರಾದ ಆರ್.ಚೌಡರೆಡ್ಡಿ, ಎಸ್.ವಿ. ಸಂಕನೂರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಶರಣಪ್ಪ ಮಟ್ಟೂರ ಹಾಗೂ ಪುಟ್ಟಣ್ಣ ಸದಸ್ಯರಾಗಿದ್ದರು. ಆದ್ರೆ, ಇದೀಗ ಇವರ ಅವಧಿ ದಿನಾಂಕ 30-06-2020ರಂದು ಕೊನೆಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆ ಮಾಡಲಾಗಿದೆ.