ಕರ್ನಾಟಕದಲ್ಲಿ ಟಿಕೆಟ್ ಕೈ ತಪ್ಪಿದವರ ಕೋಲಾಹಲ; ಮುನಿಸು ಕೈಬಿಟ್ಟ ಸಿಂಹ, ಸಿಡಿದೇಳುತ್ತಾರಾ ಈಶ್ವರಪ್ಪ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, 9 ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಲಾಗಿದೆ.

Karnataka 20 Lok sabha constituency BJP ticket announce and Pratap simha tweet sat

ಬೆಂಗಳೂರು (ಮಾ.13): ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ನಿಂದ 2ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕರ್ನಾಟಕದ 20 ಲೋಕಸಭಾ ಕ್ಷೇತ್ರಗಳ ಟಿಕೆಟ್ ಹಂಚಿಕೆ ಮಾಡಲಾಗಿದ್ದು, 9 ಹಾಲಿ ಸಂಸದರಿಗೆ ಟಿಕೆಟ್ ನೀಡದೇ ಹೊರಗಿಡಲಾಗಿದೆ.

ಕರ್ನಾಟಕದ 20 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಹಾಲಿ ಸಂಸದರಾಗಿದ್ದ ನಳಿನ್ ಕುಮಾರವ ಕಟೀಲ್- ದಕ್ಷಿಣ ಕನ್ನಡ, ಪ್ರತಾಪ್ ಸಿಂಹ- ಮೈಸೂರು, ಕರಡಿ ಸಂಗಣ್ಣ- ಕೊಪ್ಪಳ, ಶಿವಕುಮಾರ್ ಉದಾಸಿ- ಹಾವೇರಿ, ಸದಾನಂದಗೌಡ- ಬೆಂಗಳೂರು ಉತ್ತರ, ಜಿ.ಎಸ್. ಬಸವರಾಜ- ತುಮಕೂರು, ದೇವೇಂದ್ರಪ್ಪ- ಬಳ್ಳಾರಿ, ಜಿ.ಎಂ. ಸಿದ್ದೇಶ್ವರ- ದಾವಣಗೆರೆ ಹಾಗೂ ಶ್ರೀನಿವಾಸ್ ಪ್ರಸಾದ್- ಚಾಮರಾಜನಗರ ಇವರಿಗೆ ಟಿಕೆಟ್ ನೀಡಲಾಗಿಲ್ಲ.

Breaking: ಬಿಜೆಪಿ 2ನೇ ಪಟ್ಟಿ ಪ್ರಕಟ, ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌, ಬೊಮ್ಮಾಯಿಗೆ ಹಾವೇರಿ ಟಿಕೆಟ್‌

ಇನ್ನು ಮೈಸೂರು-ಕೊಡಗು ಲೋಕಸಭಾಕ್ಷೇತ್ರದ ಹಾಲಿ ಸಂಸದರಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದ್ದರೂ, ಮೈಸೂರು ರಾಜ ಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಆದರೆ, ಈ ಬಗ್ಗೆ ಮೊದಲೇ ಸುಳಿವು ಸಿಕ್ಕಿದ್ದರಿಂದ ಪ್ರತಾಪ್ ಸಿಂಹ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ, ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದ ನಂತರ ಈಗ ಮುನಿಸನ್ನು ಶಮನ ಮಾಡಿಕೊಂಡಿದ್ದಾರೆ. ಜೊತೆಗೆ, ಅವರೇ ಟ್ವಿಟ್ ಮೂಲಕ ಮಹಾರಾಜ ಯದುವೀರ್ ಅವರಿಗೆ ಶುಭಾಶಯ ಕೋರಿದ್ದಾರೆ. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. #ದೇಶಕ್ಕಾಗಿ, ಮೋದಿಗಾಗಿ ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

ಕೆ.ಎಸ್. ಈಶ್ವರಪ್ಪ ಪುತ್ರನಿಗೆ ಟಿಕೆಟ್ ಮಿಸ್- ನಾಳೆ ಬೆಂಬಲಿಗರ ಸಭೆ ಆಯೋಜನೆ: 
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪಿಸಲಾಗಿತ್ತು. ಇದನ್ನು ಶಾಂತ ಸ್ವರೂಪದಿಂದಲೇ ಸ್ವೀಕರಿಸಿದ ಈಶ್ವರಪ್ಪ ಅವರು ಲೋಕಸಭೆ ಚುನಾವಣೆಗೆ ತಮ್ಮ ಪುತ್ರನಿಗೆ ಟಿಕೆಟ್ ಪಡೆಯುವ ಭರವಸೆ ಇಟ್ಟುಕೊಂಡಿದ್ದರು. ಇನ್ನು ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರೇ ಹಾವೇರಿ ಟಿಕೆಟ್ ಅನ್ನು ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರಿಗೆ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಬಿಜೆಪಿ ಹೈಕಮಾಂಡ್‌ನಿಂದ ಹಾವೇರಿ ಲೋಕಸಭೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ದರಿಂದ ಕೆ.ಎಸ್. ಈಶ್ವರಪ್ಪ ಅವರಿಗೆ ಭಾರಿ ಅಸಮಾಧಾನ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಹಾವೇರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರ ಸಭೆಯನ್ನು ಕರೆದಿದ್ದಾರೆ. ನಾಳೆ ನಡೆಯುವ ಸಭೆಯ ನಂತರ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಲೋಕಸಭಾ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಂಸದ ಡಿ.ವಿ. ಸದಾನಂದಗೌಡ!

15 ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಮಾಡಿದ್ದೇನೆ:
ಬಿಜೆಪಿ ಟಿಕೆಟ್ ವಂಚಿತರಾದ ಸಂಸದ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ದಕ್ಷಿಣ ಕನ್ನಡಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ 15 ವರ್ಷಗಳಿಂದ ಸಂಸದನಾಗಿ ಕೆಲಸ ಮಾಡಿದ್ದೇನೆ. ಕಾರ್ಯಕರ್ತರು ಅಹೋರಾತ್ರಿ ಕೆಲಸ ಮಾಡಿ ನನ್ನ ಗೆಲುವಿಗೆ ಶ್ರಮಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ 1 ಲಕ್ಷ ಕೋಟಿ ರೂ. ಅನುದಾನವನ್ನು ತರುವಲ್ಲಿ ಯಶಸ್ವಿ ಆಗಿದ್ದೇನೆ. ಯುಪಿಎ ಅವಧಿ ಹಾಗೂ ನರೇಂದ್ರ ಮೋದಿ ಅವರ 2 ಅವಧಿಯ ಆಡಳಿತದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಹೊಸ ಯುವಕರು ರಾಜಕಾರಣದಲ್ಲಿ ಬೆಳೆಯಬೇಕು ಎಂಬ ಉದ್ದೇಶದಿಂದ ಬಿಜೆಪಿ ಹೈಕಮಾಂಡ್ ಈ ನಿರ್ಣಯ ಕೈಗೊಂಡಿದೆ. ಈವರೆಗೆ 3 ಬಾರಿ ಸಂಸದನಾಗಿ, 4.5 ವರ್ಷಗಳ ಕಾಲ ರಾಜ್ಯಾಧ್ಯಕ್ಷನಾಗಿ, ಕೇರಳ ವಿಧಾನಸಭಾ ಚುನಾವಣೆಯ ಉಸ್ತುವಾರಿಯಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಎಲ್ಲ ಬಿಜೆಪಿ ನಾಯಕರ ಮಾರ್ಗದರ್ಶನದಲ್ಲಿ ಕೆಲಸ ಮಾಡಿದ್ದೇನೆ. ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳಿದರು. 

Latest Videos
Follow Us:
Download App:
  • android
  • ios