Karnataka Assembly Election ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾದ ಚುನಾವಣಾ ಅಧಿಕಾರಿ ಸಸ್ಪೆಂಡ್!

ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾದ ಇಬ್ಬರು ಚುನಾವಣಾ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮದ್ಯಪಾನ ಮಾಡಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Karnataka Assembly Election 2023 Polling officer suspended after drinking alcohol on duty ckm

ಶಿವಮೊಗ್ಗ(ಮೇ.09): ಕರ್ನಾಟಕ ವಿಧಾನಸಭಾ ಚುನಾವಣೆ ನಾಳೆ(ಮೇ.10) ನಡೆಯಲಿದೆ. ಚುನಾವಣಾ ಆಯೋಗ ಎಲ್ಲಾ ತಯಾರಿ ಮಾಡಿಕೊಂಡಿದೆ. ಸುಗಮ ಮತದಾನಕ್ಕೆ ಈಗಾಗಲೇ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಆದರೆ ನಿಯೋಜಿತ ಚುನಾವಣಾ ಅಧಿಕಾರಿಗಳು ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಇಬ್ಬರು ಚುನಾವಣಾ ಅಧಿಕಾರಿಗಳನ್ನು ವಜಾ ಮಾಡಿದ ಘಟನೆ ಶಿವಮೊಗ್ಗ ಗ್ರಾಮಾಂತರ ಮತಗಟ್ಟೆಯಲ್ಲಿ ನಡೆದಿದೆ.

ಭದ್ರಾವತಿ ತಾಲೂಕು ಬಿ.ಆರ್.ಪಿ.ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ ನೌಕರ ಬಿ.ರಮೇಶ್ ಹಾಗೂ ಸೊರಬ ತಾಲೂಕು ಹುರುಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾದ ಮಾಲತೇಶ್ ಎನ್ ಚುನಾವಣಾ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಬೇಕಿತ್ತು. ಶಿವಮೊಗ್ಗ ಗ್ರಾಮಾಂತರ  ವಿಧಾನಸಭಾ ಕ್ಷೇತ್ರದಲ್ಲಿ ಮತಗಟ್ಟೆ ಸಿಬ್ಬಂದಿಯಾಗಿ ಕಾರ್ಯನಿರ್ವಹಣೆಗೆ ನಿಯೋಜನೆಯಾಗಿದ್ದ ಈ ಅಧಿಕಾರಿಗಳು ಕಂಠಪೂರ್ತಿ ಕುಡಿದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. 

Karnataka assembly election 2023:ಮತದಾನದ ದಿನ ಮಧ್ಯರಾತ್ರಿವರೆಗೆ ರೈಲು ಸೇವೆ ವಿಸ್ತರಿಸಿದ ನಮ್ಮ ಮೆಟ್ರೋ

ಇಂದು ಬೆಳಗ್ಗೆ ಶಿವಮೊಗ್ಗದ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದ ವೇಳೆ ಮದ್ಯಪಾನ ಮಾಡಿರುವುದು ಪತ್ತೆಯಾಗಿತ್ತು. ಹೀಗಾಗಿ ಹಿರಿಯ ಚುನಾವಣಾ ಅಧಿಕಾರಿಗಳು ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿತ್ತು. ಇದೀಗ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಇಬ್ಬರೂ ಅಧಿಕಾರಿಗಳು ಮದ್ಯಪಾನ ಮಾಡಿರುವುದು ಧೃಢಪಟ್ಟಿದೆ. ಹೀಗಾಗಿ ಇಬ್ಬರನ್ನೂ ಕರ್ತವ್ಯದಿಂದ ವಜಾ ಮಾಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.  

ಮೇ.10 ರಂದು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಮೇ.13ಕ್ಕೆ ಫಲಿತಾಂಶ ಹೊರಬೀಳಲಿದೆ. 58,282 ಮತಗಟ್ಟೆ ಸ್ಥಾಪಿಸಲಾಗಿದ್ದು, ಸುಗಮ ಮತಕ್ಕಾಗಿ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಪ್ರಜಾಪ್ರಭುತ್ವ ಹಬ್ಬಕ್ಕೆ ಇಡೀ ಕರುನಾಡು ಸಜ್ಜಾಗಿದೆ.ಕರ್ನಾಟಕದಲ್ಲಿ ಒಟ್ಟು 5.3 ಕೋಟಿ ಮತದಾರರಿದ್ದರೆ, ಈ ಪೈಕಿ ಬೆಂಗಳೂರಿನಲ್ಲಿ ಸರಿಸುಮಾರು 1 ಕೋಟಿ ಮತದಾರರಿದ್ದಾರೆ. ಉದ್ಯಾನ ನಗರಿಯಲ್ಲಿ 95,13,830 ಮತದಾರರಿದ್ದಾರೆ. 2018ರಲ್ಲಿ 55 ಶೇಕಡಾ ಮತದಾನವಾಗಿತ್ತು. 2013ರಲ್ಲಿ ಶೇಕಡಾ 52.83 ರಷ್ಟು ಮತದಾನವಾಗಿತ್ತು.

Karnataka Assembly Election ಚುನಾವಣೆಗೂ ಮೊದಲು ಕನ್ನಡಿಗರಿಗೆ ಪ್ರಧಾನಿ ಮೋದಿ ಮಹತ್ವದ ಸಂದೇಶ!

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಪಕ್ಷ ಯಾವುದು? ಈ ಬಾರಿ ಗೆಲ್ಲುವ ನಾಯಕರು ಯಾರು? ಪ್ರತಿ ಪಕ್ಷ, ನಾಯಕರ ಮೇಲೂ ಇದೀಗ ಬೆಟ್ಟಿಂಗ್ ಭರಾಟೆ ಜೋರಾಗಿ ನಡೆಯುತ್ತಿದೆ. ಕೋಟಿ ಕೋಟಿ ರೂಪಾಯಿಯಲ್ಲಿ ಬೆಟ್ಟಿಂಗ್ ನಡೆಯುತ್ತಿದೆ.ಇತ್ತ ಮತದಾನಕ್ಕೂ ಮೊದಲು ಬಹುತೇಕ ನಾಯಕರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಬಿಜೆಪಿ ನಾಯಕರು ಪೂಜೆ ಜೊತೆ ಹನುಮಾನ್ ಚಾಲೀಸಾ ಪಠಣ ಮಾಡಿದ್ದಾರೆ. ಇತ್ತ ಡಿಕೆ ಸಿದ್ದರಾಮಯ್ಯ ಹಾಗೂ ಸಿದ್ದರಾಮಯ್ಯ ಜೊತೆಯಾಗಿ ಚಾಮಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದರು.
 

Latest Videos
Follow Us:
Download App:
  • android
  • ios