Asianet Suvarna News Asianet Suvarna News

Karnataka Assembly Election 2023: 1989ರಲ್ಲಿ 178 ಸ್ಥಾನ ಗೆದ್ದಿದ್ದ ಕಾಂಗ್ರೆಸ್: 34 ವರ್ಷಗಳ ಬಳಿಕ ಕೈಗೆ ಭರ್ಜರಿ ಗೆಲುವು

ರಾಜ್ಯ ಕಾಂಗ್ರೆಸ್‌ ಪಕ್ಷದ ತನ್ನ ಇತಿಹಾಸದ ಪುಟದಲ್ಲಿ 34 ವರ್ಷಗಳ ನಂತರ 136 ವಿಧಾನಸಭಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ದಾಖಲೆ ಸೃಷ್ಟಿಸಿದೆ.

Karnataka Assembly Election 2023 Result After Virendra Patil, Congress has the highest position under DK shivakumar Sidhus leadership akb
Author
First Published May 14, 2023, 6:16 AM IST

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದ ತನ್ನ ಇತಿಹಾಸದ ಪುಟದಲ್ಲಿ 34 ವರ್ಷಗಳ ನಂತರ 136 ವಿಧಾನಸಭಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ದಾಖಲೆ ಸೃಷ್ಟಿಸಿದೆ. ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 224ಕ್ಕೆ ಏರಿಕೆಯಾಗಿದ್ದು 1978ರಲ್ಲಿ. ಆ ವರ್ಷ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 149 ಸ್ಥಾನಗಳಲ್ಲಿ ಜಯಗಳಿಸಿತ್ತು. ಇದಾದ ನಂತರ 1989ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 178 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲುವ ಮೂಲಕ ಸೃಷ್ಟಿಸಿದ್ದ ಹೊಸ ದಾಖಲೆ ಈವರೆಗೆ ಹಾಗೆಯೇ ಇದೆ. ವೀರೇಂದ್ರ ಪಾಟೀಲ್‌ ನೇತೃತ್ವದಲ್ಲಿ ಆ ಚುನಾವಣೆ ನಡೆದಿತ್ತು.

ಆದಾದ ನಂತರ 1999ರಲ್ಲಿ ಎಸ್‌.ಎಂ. ಕೃಷ್ಣ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ 132 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಆದರೆ 2004, 2008ರ ಚುನಾವಣೆಯಲ್ಲಿ ಕ್ರಮವಾಗಿ 65 ಹಾಗೂ 80 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್‌ 2013ರಲ್ಲಿ ನಡೆದ ಚುನಾವಣೆಯಲ್ಲಿ 122 ಕ್ಷೇತ್ರಗಳಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿತ್ತು. ಆದರೆ 2018ರಲ್ಲಿ ಪುನಃ 80 ಸ್ಥಾನಕ್ಕೆ ಕುಸಿದ ಕಾಂಗ್ರೆಸ್‌ ಜೆಡಿಎಸ್‌ ಜೊತೆ ಸೇರಿಕೊಂಡು ಸಮ್ಮಿಶ್ರ ಸರ್ಕಾರ ರಚಿಸಿತ್ತು. ಪ್ರಸ್ತುತ 2023ರಲ್ಲಿ ನಡೆದ ಚುನಾವಣೆಯಲ್ಲಿ 136 ಸ್ಥಾನ ಗೆಲ್ಲುವ ಮೂಲಕ ಹೊಸ ದಾಖಲೆ ಸಾಧಿಸಿದೆ.

Follow Us:
Download App:
  • android
  • ios