ಬಿಜೆಪಿ ಮೊದಲ ಪಟ್ಟಿಬಿಡುಗಡೆ ವಿಳಂಬ: ಟಿಕೆಟ್ ಕೈತಪ್ಪುವ ಆತಂಕದಲ್ಲಿ ಹಾಲಿ ಶಾಸಕರು!

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಏ.8ರಂದೇ ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಬಿಡುಗಡೆ ಆಗಬೇಕಿತ್ತು. ಆದರೆ, ಅದು ಮೂರ್ನಾಲ್ಕು ದಿನಗಳಿಂದ ವಿಳಂಬವಾಗುತ್ತ ಸಾಗಿದೆ. ಇದರಿಂದ ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ತಳಮಳ ಹೆಚ್ಚಿದ್ದು, ಕೆಲವರಲ್ಲಿ ಟಿಕೆಟ್‌ ಕೈತಪ್ಪುವುದೇನೋ ಎಂಬ ಆತಂಕವೂ ಮೂಡಿದೆ.

Karnataka assembly election Delay in release of BJP's first list Senior leaders may miss tickets rav

ರುದ್ರಪ್ಪ ಆಸಂಗಿ

ವಿಜಯಪುರ (ಏ.11) : ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಏ.8ರಂದೇ ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಬಿಡುಗಡೆ ಆಗಬೇಕಿತ್ತು. ಆದರೆ, ಅದು ಮೂರ್ನಾಲ್ಕು ದಿನಗಳಿಂದ ವಿಳಂಬವಾಗುತ್ತ ಸಾಗಿದೆ. ಇದರಿಂದ ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ತಳಮಳ ಹೆಚ್ಚಿದ್ದು, ಕೆಲವರಲ್ಲಿ ಟಿಕೆಟ್‌ ಕೈತಪ್ಪುವುದೇನೋ ಎಂಬ ಆತಂಕವೂ ಮೂಡಿದೆ.

ಜಿಲ್ಲೆಯ ಬಹಳಷ್ಟುಬಿಜೆಪಿ ನಾಯಕರು ಟಿಕೆಟ್‌ಗಾಗಿ ಬೆಂಗಳೂರು, ದೆಹಲಿಯಲ್ಲಿಯೇ ಠಿಕಾಣಿ ಹೂಡಿ ಟಿಕೆಟ್‌ ಪಡೆಯಲು ಸಾಕಷ್ಟುಲಾಬಿ ಮಾಡಿದ್ದರು. ಆದರೆ, ಬೇಗನೆ ಟಿಕೆಟ್‌ ಘೋಷಣೆ ಆಗದೇ ಇದ್ದುದರಿಂದ ಟಿಕೆಟ್‌ ಆಕಾಂಕ್ಷಿಗಳು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಮತದಾನ ಬಹಿಷ್ಕಾರ..!

ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಈಗಾಗಲೇ ಎರಡು ಹಂತದಲ್ಲಿ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆæ. ಇನ್ನು ಮೂರನೇ ಹಂತದ ಅಭ್ಯರ್ಥಿಗಳ ಪಟ್ಟಿಬಿಡುಗಡೆಗೆ ಸಿದ್ದತೆ ಮಾಡಿಕೊಳ್ಳುತ್ತಿವೆ.

ಈಗಾಗಲೇ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಲ್ಲಿ ಟಿಕೆಟ್‌ ಫೈನಲ್‌(Assembly ticket) ಆಗಿರುವ ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳು ಕಳೆದ ಒಂದು ವಾರದಿಂದ ಭರ್ಜರಿಯಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಬಿಜೆಪಿಯಲ್ಲಿ ಅಭ್ಯರ್ಥಿಗಳ ಪಟ್ಟಿಬಿಡುಗಡೆ ಬರೀ ಟಿಕೆಟ್‌ ಆಕಾಂಕ್ಷಿಗಳಿಗಷ್ಟೇ ಅಲ್ಲ. ಬಿಜೆಪಿ(Karnataka BJP) ಕಾರ್ಯಕರ್ತರಿಗೂ ಗೊಂದಲ ಉಂಟಾಗಿದೆ. ಕಾಂಗ್ರೆಸ್‌, ಜೆಡಿಎಸ್‌ (Congress and JDS)ಪಕ್ಷಗಳ ಕಾರ್ಯಕರ್ತರು ಅಧಿಕೃತ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಬಿಜೆಪಿ ಕಾರ್ಯಕರ್ತರಿಗೆ ಟಿಕೆಟ್‌ ಫೈನಲ್‌ ಆಗುವ ತನಕ ಯಾರ ಪರವಾಗಿ ಪÜ್ರಚಾರ ಮಾಡಬೇಕು ಎಂದು ತಿಳಿಯದೇ ಗೊಂದಲಕ್ಕೆ ಈಡಾಗಿದ್ದಾರೆ.

ವಿಜಯಪುರ ನಗರ ಮತಕ್ಷೇತ್ರ(Vijayapur assembly constituency)ದಲ್ಲಿ ಕಾಂಗ್ರೆಸ್‌ ಈಗಾಗಲೇ ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದ ಅಬ್ದುಲ್‌ಹಮೀದ್‌ ಮುಶ್ರೀಫ್‌ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ. ಬಿಜೆಪಿ ಟಿಕೆಟ್‌ ಹಾಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagowda Patil Yatnal MLA) ಅವರಿಗೆ ಸಿಗುವ ಸಾಧ್ಯತೆ ಒಂದು ಕಡೆ ಇದೆಯಾದರೂ ಬಿಜೆಪಿಯಲ್ಲಿಯೇ ಕೆಲ ಟಿಕೆಟ್‌ ಆಕಾಂಕ್ಷಿಗಳು ಯತ್ನಾಳ ಅವರನ್ನು ಬಬಲೇಶ್ವರ ಕ್ಷೇತ್ರಕ್ಕೆ ಕಳುಹಿಸುವಂತೆ ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ.

ಆದರೆ, ವರಿಷ್ಠರು ಈ ಬಗ್ಗೆ ದುಡುಕಿನ ತೀರ್ಮಾನ ತಗೆದುಕೊಂಡಿಲ್ಲ. ಇತ್ತ ಯತ್ನಾಳ ವಿಜಯಪುರ ನಗರ ಕ್ಷೇತ್ರದಿಂದಲೇ ಸ್ಪರ್ಧಿಸಲು ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ನಾಮಪತ್ರ ಸಲ್ಲಿಕೆಗೆ ಅಧಿಕೃತ ಅಧಿಸೂಚನೆ ಹೊರಡಿಸುವ ದಿನ ಏ.13ರಂದೇ ಶಾಸಕ ಯತ್ನಾಳ ಅವರು ನಾಮಪತ್ರ ಸಲ್ಲಿಸಲು ಸನ್ನದ್ಧ ಸ್ಥಿತಿಯಲ್ಲಿ ಇದ್ದಾರೆ ಎನ್ನಲಾಗಿದೆ. ವಿಜಯಪುರ ನಗರ ಮತ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಸುರೇಶ ಬಿರಾದಾರ ಅವರು ತೀವ್ರ ಪೈಪೋಟಿ ನಡೆಸಿದ್ದಾರೆ. ಟಿಕೆಟ್‌ ಯಾರಿಗೆ ಫೈನಲ್‌ ಆಗುತ್ತದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ನಗರ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ಇನ್ನೂ ಫೈನಲ್‌ ಆಗಿಲ್ಲ.

ನಾಗಠಾಣ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ ಪಕ್ಷ ಮಾಜಿ ಶಾಸಕ ವಿಠಲ ಕಟಕದೊಂಡ ಅವರಿಗೆ ಟಿಕೆಟ್‌ ಫೈನಲ್‌ ಮಾಡಿದೆ. ಜೆಡಿಎಸ್‌ ಟಿಕೆಟ್‌ ಹಾಲಿ ಶಾಸಕ ಡಾ.ದೇವಾನಂದ ಚವ್ಹಾಣ ಅವರಿಗೆ ಫೈನಲ್‌ ಮಾಡಲಾಗಿದೆ. ಆದರೆ, ಬಿಜೆಪಿಯಲ್ಲಿ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ ಅವರು ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಈ ಬಾರಿಯೂ ಅವರು ಟಿಕೆಟ್‌ ಪಡೆಯಲು ತೀವ್ರ ಪೈಪೋಟಿ ನಡೆಸಿದ್ದಾರೆ. ಸಂಸದ ರಮೇಶ ಜಿಗಜಿಣಗಿ ಅವರ ಹೆಸರೂ ಟಿಕೆಟ್‌ ಆಕಾಂಕ್ಷಿಗಳ ಸಾಲಿನಲ್ಲಿ ಕೇಳಿ ಬರುತ್ತಿದೆ. ನಿವೃತ್ತ ಪೊಲೀಸ್‌ ಅಧಿಕಾರಿ ಮಹೇಂದ್ರಕುಮಾರ ನಾಯಕ ಅವರೂ ಕೂಡಾ ಬಿಜೆಪಿ ಟಿಕೆಟ್‌ ಗಿಟ್ಟಿಸಿಕೊಳ್ಳಲು ಭಾರಿ ಕಸರತ್ತು ನಡೆಸಿದ್ದಾರೆ. ಕೊನೆಯಲ್ಲಿ ಟಿಕೆಟ್‌ ಯಾರಿಗೆ ಫೈನಲ್‌ ಆಗುತ್ತದೆ ಎಂಬ ಚಿತ್ರಣ ಇನ್ನೂ ಸ್ಪÜ್ಪಷ್ಟವಾಗಬೇಕಿದೆ.

ಬಬಲೇಶ್ವರ ಮತಕ್ಷೇತ್ರದಲ್ಲಿ ಹಾಲಿ ಶಾಸಕ ಎಂ.ಬಿ.ಪಾಟೀಲ(MB Patil MLA) ಅವರಿಗೆ ಕಾಂಗ್ರೆಸ್‌ ಟಿಕೆಟ್‌(Congress Ticket) ಫೈನಲ್‌ ಆಗಿದೆ. ಜೆಡಿಎಸ್‌ ಬಸವರಾಜ ಹೊನವಾಡ ಅವರಿಗೆ ಟಿಕೆಟ್‌ ಫೈನಲ್‌ ಆಗಿದೆ. ಬಿಜೆಪಿ ಟಿಕೆಟ್‌ಗಾಗಿ ವಿಜುಗೌಡ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ಉಮೇಶ ಕೋಳಕೂರ ಅವರು ಪೈಪೋಟಿ ನಡೆಸಿದ್ದಾರೆ.

ಬಸವನಬಾಗೇವಾಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಲಿ ಶಾಸಕ ಶಿವಾನಂದ ಪಾಟೀಲ(Shivananda Patil MLA) ಅವರಿಗೆ ಟಿಕೆಟ್‌ ಫೈನಲ್‌ ಮಾಡಿದೆ. ಜೆಡಿಎಸ್‌ ಪಕ್ಷದ ಅಭ್ಯರ್ಥಿ ಪರಮಾನಂದ ತನಕೆದಾರ ಹೆಸರು ಫೈನಲ್‌ ಮಾಡಲಾಗಿದೆ. ಬಿಜೆಪಿ ಮಾತ್ರ ಇನ್ನೂ ಅಭ್ಯರ್ಥಿಗಳ ಹುಡುಕಾಟ ನಡೆಸಿದೆ. ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿ, ಅಪ್ಪುಗೌಡ ಪಾಟೀಲ ಮನಗೂಳಿ ಅವರು ತೀವ್ರ ಪೈಪೋಟಿ ನಡೆಸಿದ್ದಾರೆ.

ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಮಾಜಿ ಸಚಿವ ಸಿ.ಎಸ್‌.ನಾಡಗೌಡ ಅಪ್ಪಾಜಿ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ. ಬಿಜೆಪಿ ಪಕ್ಷದಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ತೀರ್ಮಾನ ಹಿನ್ನೆಲೆಯಲ್ಲಿ ಹಾಲಿ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಅವರಿಗೆ ಟಿಕೆಟ್‌ ಸಿಗುವ ಸಾಧ್ಯತೆ ಹೆಚ್ಚಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್‌.ಎಸ್‌.ಪಾಟೀಲ ಕೂಚಬಾಳ ಅವರು ಯುವಕರ ಕೋಟಾದಡಿ ಟಿಕೆಟ್‌ ಕೇಳುತ್ತಿದ್ದಾರೆ. ಜೆಡಿಎಸ್‌ ಪಕ್ಷದ ಅಭ್ಯರ್ಥಿ ಸಿ.ಎಸ್‌.ಸೋಲಾಪುರ ಘೋಷಣೆಯಾಗಿದೆ.

ದೇವರಹಿಪ್ಪರಗಿ ಮತ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಇನ್ನೂ ಘೋಷಣೆಯಾಗಿಲ್ಲ. ಕಾಂಗ್ರೆಸ್‌ ಪಕ್ಷದಲ್ಲಿ 9 ಮಂದಿ ಟಿಕೆಟ್‌ ಆಕಾಂಕ್ಷಿಗಳು ತೀವ್ರ ಪೈಪೋಟಿ ಒಡ್ಡಿದ್ದರಿಂದಾಗಿ ಟಿಕೆಟ್‌ ಫೈನಲ್‌ ಮಾಡುವಲ್ಲಿ ವರಿಷ್ಠರಿಗೆ ತಲೆ ನೋವಾಗಿದೆ. ಬೀಳಗಿಯ ಮಾಜಿ ಸಚಿವ ಎಸ್‌.ಆರ್‌.ಪಾಟೀಲ ಬಾಡಗಂಡಿ ಅವರಿಗೆ ದೇವರ ಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ನೀಡುವ ಬಗ್ಗೆ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಸ್ಥಳೀಯ 9 ಮಂದಿ ಪ್ರಬಲ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಟಿಕೆಟ್‌ ಫೈನಲ್‌ ಮಾಡಲು ಕಾಂಗ್ರೆಸ್‌ ಕಸರತ್ತು ನಡೆಸಬೇಕಿದೆ. ಬಿಜೆಪಿ ಹಾಲಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರಿಗೆ ಸಿಗುವ ಛಾನ್ಸ್‌ ಹೆಚ್ಚಿದೆ. ಕಳೆದ ಬಾರಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋತಿದ್ದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರಿಗೆ ಜೆಡಿಎಸ್‌ ಟಿಕೆಟ್‌ ಫೈನಲ್‌ ಮಾಡಿದೆ,

ಸಿಂದಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಘೋಷಣೆಯಾಗಿಲ್ಲ. ಉಭಯ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಭಾರೀ ಲಾಬಿ ನಡೆದಿದೆ. ಕಾಂಗ್ರೆಸ್ಸಿನಲ್ಲಿ ಅಶೋಕ ಮನಗೂಳಿ, ಶರಣಪ್ಪ ಸುಣಗಾರ, ಅಶೋಕ ಶಾಬಾದಿ ಅವರ ಹೆಸರುಗಳು ಪ್ರಬಲವಾಗಿ ಕೇಳಿ ಬರುತ್ತಿವೆ. ಬಿಜೆಪಿ ಪಕ್ಷದಲ್ಲಿ ಹಾಲಿ ಶಾಸಕ ರಮೇಶ ಭೂಸನೂರ ಅವರಿಗೆ ಟಿಕೆಟ್‌ ಫೈನಲ್‌ ಆಗುವ ಸಾಧ್ಯತೆ ಇದೆ. ಜೆಡಿಎಸ್‌ ಟಿಕೆಟ್‌ ಈಗಾಗಲೇ ವಿಶಾಲಾಕ್ಷಿ ಶಿವಾನಂದ ಪಾಟೀಲ ಅÊರಿಗೆ ಘೋಷಣೆ ಮಾಡಲಾಗಿದೆ.

Karnataka Assembly Elections 2023: ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ..!

ಇಂಡಿ ಕ್ಷೇತ್ರದಲ್ಲಿ ಹಾಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಲಾಗಿದೆ. ಜೆಡಿಎಸ್‌ ಪಕ್ಷ ಕೂಡಾ ಬಿ.ಡಿ.ಪಾಟೀಲ ಹಂಜಗಿ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ. ಈಗ ಬಿಜೆಪಿ ಟಿಕೆಟ್‌ ಮಾತ್ರ ಘೋಷಣೆ ಆಗಬೇಕಿದೆ. ರವಿಕಾಂತ ಪಾಟೀಲ, ದಯಾಸಾಗರ ಪಾಟೀಲ ಪ್ರಬಲ ಪೈಪೋಟಿ ನಡೆಸುತ್ತಿದ್ದಾರೆ.

Latest Videos
Follow Us:
Download App:
  • android
  • ios