Asianet Suvarna News Asianet Suvarna News

ಜೆಡಿಎಸ್‌ ಪ್ರಣಾಳಿಕೆ ತಯಾರಿಗೆ ಫಾರೂಕ್‌ ಸಮಿತಿ ಸಭೆ: ಜನರಿಗೆ ಪರಿಹಾರ ಪತ್ರ ನೀಡುವ ಬಗ್ಗೆ ಚರ್ಚೆ

ವಿಧಾನಸಭೆ ಚುನಾವಣೆಗೆ ಜಾತ್ಯತೀತ ಜನತಾದಳದ ಪ್ರಣಾಳಿಕೆ ಸಿದ್ಧಪಡಿಸುವ ಸಂಬಂಧ ಪ್ರಣಾಳಿಕೆ ರಚನಾ ಸಮಿತಿ ಸಭೆ ನಡೆದಿದೆ.

Karnataka assembly election Farooq committee meeting to prepare JDS manifesto at bengaluru today rav
Author
First Published Apr 11, 2023, 9:03 PM IST | Last Updated Apr 11, 2023, 9:04 PM IST

ಬೆಂಗಳೂರು (ಏ.11) : ವಿಧಾನಸಭೆ ಚುನಾವಣೆಗೆ ಜಾತ್ಯತೀತ ಜನತಾದಳದ ಪ್ರಣಾಳಿಕೆ ಸಿದ್ಧಪಡಿಸುವ ಸಂಬಂಧ ಪ್ರಣಾಳಿಕೆ ರಚನಾ ಸಮಿತಿ ಸಭೆ ನಡೆದಿದೆ.

ಸೋಮವಾರ ಪಕ್ಷದ ಕಚೇರಿಯಲ್ಲಿ ವಿಧಾನಪರಿಷತ್‌ ಸದಸ್ಯ ಬಿ.ಎಂ.ಫಾರೂಕ್‌(BM Farooq) ಅಧ್ಯಕ್ಷತೆಯ ಸಮಿತಿ ಸಭೆ ನಡೆಸಿತು. ಸಮಿತಿಯ ಸದಸ್ಯರಾದ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ(Bandeppa Kashempur), ಮಾಜಿ ಸಂಸದ ಕುಪೇಂದ್ರ ರೆಡ್ಡಿ(Kupendra reddy), ವಿಧಾನಪರಿಷತ್‌ ಸದಸ್ಯ ಕೆ.ಎನ್‌.ತಿಪ್ಪೇಸ್ವಾಮಿ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಪ್ರಣಾಳಿಕೆಯ ಕರಡು ಪ್ರತಿಯನ್ನು ಪರಾಮರ್ಶೆ ನಡೆಸಿತು. ಅಲ್ಲದೆ, ಪಕ್ಷದ ವತಿಯಿಂದ ಜನತೆಗೆ ನೀಡಲು ಉದ್ದೇಶಿಸಿರುವ ಜೆಡಿಎಸ್‌ ಪರಿಹಾರ ಪತ್ರದ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

ಪಂಚರತ್ನ ಯೋಜನೆ ಜಾರಿಯಾದರೆ ರಾಜ್ಯ ಸ್ವರ್ಗ ಸದೃಶ್ಯವಾಗಲಿದೆ: ಎಚ್‌.ಡಿ.ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಮಹತ್ವಾಕಾಂಕ್ಷೆಯ ಪಂಚರತ್ನ ಯೋಜನೆ(Pancharatna rathayatre scheme)ಗಳು ಮತ್ತು ಅವರು ಪಂಚರತ್ನ ರಥಯಾತ್ರೆ ವೇಳೆ ಘೋಷಣೆ ಮಾಡಿರುವ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ಅಡಕಗೊಳಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳ ಕನಸಿನ ಕಾರ್ಯಕ್ರಮಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಲು ಸಭೆಯಲ್ಲಿ ನಿರ್ಣಯಿಸಲಾಯಿತು. ಪಂಚರತ್ನ ಯೋಜನೆಗಳಾದ ಆರೋಗ್ಯ, ಶಿಕ್ಷಣ, ಕೃಷಿ, ನೀರಾವರಿ, ವಸತಿ, ಉದ್ಯೋಗ ಕಾರ್ಯಕ್ರಮಗಳ ಬಗ್ಗೆ ಮತ್ತು ಅವುಗಳನ್ನು ಜಾರಿಗೊಳಿಸಲು ಅಗತ್ಯವಾದ ಆರ್ಥಿಕ ಸಂಪನ್ಮೂಲಗಳ ಬಗ್ಗೆಯೂ ಸಮಿತಿ ಅವಲೋಕನ ಮಾಡಿತು.

Belagavi Politics: ಕೈ ಟಿಕೆಟ್‌ ವಂಚಿತ ಸೌರಭ್‌ ಚೋಪ್ರಾಗೆ ಜೆಡಿಎಸ್‌ ಗಾಳ

ಶೀಘ್ರವೇ ಪ್ರಣಾಳಿಕೆಗೆ ಅಂತಿಮ ಸ್ಪರ್ಶ ನೀಡಲಾಗುವುದು. ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ಪ್ರಣಾಳಿಕ ಬಿಡುಗಡೆ ಮಾಡಲಾಗುವುದು ಎಂದು ಸಮಿತಿ ಅಧ್ಯಕ್ಷ ಫಾರೂಕ್‌ ಹೇಳಿದ್ದಾರೆ.

Latest Videos
Follow Us:
Download App:
  • android
  • ios