ಮೇ 2ರಂದು ಸಿಂಧನೂರಿಗೆ ಮೋದಿ: ಪ್ರಧಾನಿಯೊಬ್ಬರು ಆಗಮಿಸುತ್ತಿರುವುದು ಇದೇ ಮೊದಲು!
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ನಿಮಿತ್ತ ಮೇ 2ರಂದು ಪ್ರಧಾನಿ ನರೇಂದ್ರ ಮೋದಿ ಸಿಂಧನೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ರಾಜೇಶ ಹಿರೇಮಠ ಹೇಳಿದರು.
ಸಿಂಧನೂರು (ಏ.27) : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ನಿಮಿತ್ತ ಮೇ 2ರಂದು ಪ್ರಧಾನಿ ನರೇಂದ್ರ ಮೋದಿ ಸಿಂಧನೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ರಾಜೇಶ ಹಿರೇಮಠ ಹೇಳಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಧ್ಯಾಹ್ನ 2.30ಕ್ಕೆ ವಿಶೇಷ ಹೆಲಿಕಾಪ್ಟರ್‌ನಲ್ಲಿ ತಾಲೂಕಿನ ಶ್ರೀಪುರಂಜಂಕ್ಷನ್ ಬಳಿಯ ಕೈಗಾರಿಕಾ ಪ್ರದೇಶದ ಎದುರುಗಡೆ ಇರುವ 25 ಎಕರೆ ಜಮೀನಿನ ಬೃಹತ್ ವೇದಿಕೆಗೆ ಆಗಮಿಸಲಿದ್ದಾರೆ. ನಂತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Karnataka election 2023: ಮಾನ್ವಿಗಿಂದು ಮಾಜಿ ಸಿಎಂ ಸಿದ್ದರಾಮಯ್ಯ: ಬೋಸರಾಜು
ರಾಯಚೂರು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳು(Raichur assembly constituency) ಸೇರಿದಂತೆ ಸಿರಗುಪ್ಪ, ಕುಷ್ಟಗಿ ಮತ್ತು ಕನಕಗಿರಿ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಎಲ್ಲರಿಗೂ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗುವುದು ಎಂದರು.
ಸಿಂಧನೂರು (Sindhanur)ತಾಲೂಕಿನ ಇತಿಹಾಸದಲ್ಲಿ ಇದೊಂದು ದಾಖಲೆಯ ಕಾರ್ಯಕ್ರಮವಾಗಿದ್ದು, ಪ್ರಧಾನಿಯೊಬ್ಬರು (PM Narendra Modi)ಪ್ರಪ್ರಥಮ ಬಾರಿಗೆ ಸಿಂಧನೂರಿಗೆ ಆಗಮಿಸುತ್ತಿದ್ದಾರೆ. ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ ಕಟೀಲ್ ಬರಲಿದ್ದಾರೆ. ಖ್ಯಾತ ಚಿತ್ರನಟ ಕಿಚ್ಚ ಸುದೀಪ್(Kichcha sudeep)ಬರುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕ್ರಪ್ಪ, ಕೆಪೆಕ್ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ, ಪ್ರಭಾರಿ ನರಸಿಂಗರಾವ್ ಕುಲಕರ್ಣಿ ಸೇರಿ ಅನೇಕರು ಇದ್ದರು.
ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ: ನಳಿನ್ ಕುಮಾರ್ ಕಟೀಲ್