Karnataka Assembly Election 2023: ಜನರ ಆಶೋತ್ತರಗಳನ್ನು ಕಾಂಗ್ರೆಸ್‌ ಈಡೇರಿಸಲಿ ಎಂದ ಮೋದಿ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಅವರಿಗೆ ನನ್ನ ಶುಭ ಹಾರೈಕೆಗಳು ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

karnataka assembly election results 2023 congratulations to the congress party for their victory in the karnataka assembly polls ash

ನವದೆಹಲಿ (ಮೇ 13, 2023): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಅಲ್ಲದೆ, ಪಕ್ಷದ ಪ್ರಚಾರದಲ್ಲಿ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.ಕಾಂಗ್ರೆಸ್  130 ಕ್ಕೂ ಹೆಚ್ಚು ಸ್ಥಾನಗಳನ್ನು ದಾಟಿದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಲನ್ನು ಒಪ್ಪಿಕೊಂಡಿದ್ದು,  ದಕ್ಷಿಣ ಭಾರತದಲ್ಲಿ ಬಿಜೆಪಿ ತನ್ನ ಏಕೈಕ ಕೋಟೆಯನ್ನು ಕಳೆದುಕೊಂಡಿದೆ. ಇನ್ನೊಂದೆಡೆ, ಬಿಜೆಪಿ 60ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಜನತಾ ದಳ (ಜಾತ್ಯತೀತ) ಸುಮಾರು 20 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುತ್ತಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಅವರಿಗೆ ನನ್ನ ಶುಭ ಹಾರೈಕೆಗಳು ಎಂದು ಮೋದಿ ಸರಣಿ ಟ್ವೀಟ್‌ ಮಾಡಿದ್ದಾರೆ. ಇನ್ನೊಂದೆಡೆ, ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದೂ ಪ್ರಧಾನಿ ಮೋದಿ ಶನಿವಾರ ಟ್ವೀಟ್‌ ಮಾಡಿದ್ದಾರೆ.

ಇದನ್ನು ಓದಿ: Karnataka Election Result 2023: ಸರಳತೆ ಮೆರೆದ ರಾಹುಲ್‌, ಪ್ರಿಯಾಂಕಾ ಗಾಂಧಿಗೆ ಜೈ ಎಂದ ಕರ್ನಾಟಕ ಮತದಾರ

ಬಿಜೆಪಿ ಪರ ಪ್ರಧಾನಿ ಮೋದಿ ಕರ್ನಾಟಕದಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದರು. ಬೆಂಗಳೂರಲ್ಲಿ 2 ದಿನ ಸುಮಾರು 35 ಕಿ.ಮೀ. ಭರ್ಜರಿ ರೋಡ್‌ ಶೋ ನಡೆಸಿದ್ದರು. ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಧಾನಿ ಮೋದಿ ಅವರ ಪ್ರಚಾರಗಳು ತಮಗೆ ಅಗತ್ಯವಾದ ಉತ್ತೇಜನವನ್ನು ನೀಡುತ್ತವೆ ಎಂದು ರಾಜ್ಯದ ಪಕ್ಷದ ನಾಯಕರು ವಿಶ್ವಾಸ ಹೊಂದಿದ್ದರು. ಇನ್ನೊಂದೆಡೆ, ಕರ್ನಾಟಕದ ಜನತೆಗೆ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಆ ಗಂಧಿ ಸಹ ರಾಜ್ಯದ ಜನತೆಗೆ ಹಾಘೂ ಪಕ್ಷದ ಕಾರ್ಯಕರ್ತರು, ನಾಐಕರಿಗೆ ಧನ್ಯವಾದ ತಿಳಿಸಿದ್ದಾರೆ.

16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19 ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು.

ಇದನ್ನೂ ಓದಿ: ಪ್ರಗತಿಯ ಕಲ್ಪನೆಗೆ ಆದ್ಯತೆ ನೀಡಿದ ಕರ್ನಾಟಕಕ್ಕೆ ಸಂದ ಜಯ: ಪ್ರಿಯಾಂಕಾ ಗಾಂಧಿ

Latest Videos
Follow Us:
Download App:
  • android
  • ios