Asianet Suvarna News Asianet Suvarna News

‘ಕೈ’ ಹೈಕಮಾಂಡ್‌ ಮುಂದೆ ಸಿಎಂ ಆಯ್ಕೆ ಸವಾಲು: ಮೂವರು ವೀಕ್ಷಕರನ್ನು ನೇಮಿಸಿದ ಎಐಸಿಸಿ

ರಾಜ್ಯದ ವೀಕ್ಷಕರಾಗಿ ಮಹಾರಾಷ್ಟ್ರ ಮಾಜಿ ಸಿಎಂ ಸುಶೀಲ್ ಕುಮಾರ್ ಶಿಂಧೆ ಅವರನ್ನು ನೇಮಕ ಮಾಡಲಾಗಿದೆ.

karnataka assembly election results 2023 former maharashtra cm sushil kumar shinde appointed as observer ash
Author
First Published May 14, 2023, 1:48 PM IST

ಬೆಂಗಳೂರು (ಮೇ 14, 2023): ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿದ ಕಾಂಗ್ರೆಸ್‌ ಈಗ ಸರ್ಕಾರ ರಚಿಸುವ ಕಸರತ್ತು ಮಾಡುತ್ತಿದೆ. ಪ್ರಮುಖವಾಗಿ ಮುಂದಿನ ಸಿಎಂ ಅನ್ನು ಆಯ್ಕೆ ಮಾಡುವ ಸವಾಲು ಕಾಂಗ್ರೆಸ್‌ ಹೈಕಾಂಡ್‌ಗೆ ಎದುರಾಗಿದೆ. ಈ ಹಿನ್ನೆಲೆ ವೀಕ್ಷಕರಾಗಿ ಮೂವರನ್ನು ಆಯ್ಕೆ ಮಾಡಲಾಗಿದೆ. ಎಐಸಿಸಿ ಇವರನ್ನು ನೇಮಕ ಮಾಡಿದ್ದು, ಮುಂದಿನ ಸಿಎಂ ಆಯ್ಕೆ ಮಾಡಲು ಇವರ ಸಲಹೆ ಕೋರಿದೆ.  

ಈ ಸಂಬಂಧ ಟ್ವೀಟ್‌ ಮಾಡಿದ ಕಾಂಗ್ರೆಸ್‌ ನಾಯಕ ಕೆ.ಸಿ. ವೇಣುಗೋಪಾಲ್‌, ಕರ್ನಾಟಕದ ಸಿಎಲ್‌ಪಿ ನಾಯಕರ ಆಯ್ಕೆಗೆ ವೀಕ್ಷಕರಾಗಿ ಶ್ರೀ ಸುಶೀಲ್‌ಕುಮಾರ್ ಶಿಂಧೆ (ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರ), ಶ್ರೀ ಜಿತೇಂದ್ರ ಸಿಂಗ್ (ಎಐಸಿಸಿ ಜಿಎಸ್) ಮತ್ತು ಶ್ರೀ ದೀಪಕ್ ಬಬಾರಿಯಾ (ಮಾಜಿ ಎಐಸಿಸಿ ಜಿಎಸ್) ಅವರನ್ನು ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ನಿಯೋಜಿಸಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನು ಓದಿ: ಇಂದು ಕಾಂಗ್ರೆಸ್‌ ಶಾಸಕಾಂಗ ಸಭೆ: ಸಿಎಂ ಆಗಲು ಡಿಕೆಶಿ - ಸಿದ್ದರಾಮಯ್ಯ ಮಾಸ್ಟರ್‌ ಪ್ಲ್ಯಾನ್‌ ಹೀಗಿದೆ..

ರಾಜ್ಯ ಸರ್ಕಾರ ರಚನೆ ಮಾಡಲು ಎಐಸಿಸಿ ಕಸರತ್ತು ನಡೆಸುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರೂ ಸಹ ಮುಖ್ಯಮಂತ್ರಿಗಾದಿಗೇರುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಎಐಸಿಸಿ ವೀಕ್ಷಕರಾಗಿ ಮೂವರನ್ನು ನೇಮಕ ಮಾಡಿದೆ. ಇವರು ರಾಜ್ಯದ ಪ್ರಸ್ತುತ ಸ್ಥಿತಿಗತಿಯನ್ನು ಹಾಗೂಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ. ಈ ವೇಳೆ, ಡಿಕೆಶಿ ಪರ ಹೆಚ್ಚು ಶಾಸಕರ ಬೆಂಬಲವಿದೆಯೋ ಅಥವಾ ಸಿದ್ದರಾಮಯ್ಯ ಪರ ಹೆಚ್ಚು ಶಾಸಕರ ಬೆಂಬಲವಿದೆಯೋ ಎಂಬುದನ್ನು ಈ ಮೂವರು ವೀಕ್ಷಕರು ಗಮನಿಸಿ, ಬಳಿಕ ಎಐಸಿಸಿ ನಾಐಕರಿಗೆ ತಮ್ಮ ವರದಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. . 

ಇಂದು ಸಂಜೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕಾಂಗ್ರೆಸ್‌ನ ಎಲ್ಲ ನೂತನ ಶಾಸಕರ ಅಭಿಪ್ರಾಯ ಪಡೆದು ಮುಂದಿನ ಸಿಎಂ ಆಯ್ಕೆಯಾಗುತ್ತೆ ಎಂದು ಹೇಳಲಾಗ್ತಿದೆ. ಅಲ್ಲದೆ, ಲಕೋಟೆಯ ಮೂಲಕ ಸಿಎಂ ಆಯ್ಕೆಯಾಗಬಹುದು ಎಂದೂ ವರದಿಗಳು ಕೇಳಿಬರುತ್ತಿವೆ. ಎಐಸಿಸಿ ನಾಯಕರು ಲಕೋಟೆ ಮೂಲಕ ಕಾಂಗ್ರೆಸ್‌ ಸರ್ಕಾರದ ನೂತನ ಸಿಎಂ ಅನ್ನು ಆಯ್ಕೆ ಮಾಡಲಿದ್ದಾರೆ ಎಂದೂ ತಿಳಿದುಬಂದಿದೆ. 

ಇದನ್ನೂ ಓದಿ: Karnataka Assembly Election 2023: ಜನರ ಆಶೋತ್ತರಗಳನ್ನು ಕಾಂಗ್ರೆಸ್‌ ಈಡೇರಿಸಲಿಎಂದ ಮೋದಿ

16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು. 

ಇದನ್ನೂ ಓದಿ: ಜಯನಗರದಲ್ಲಿ ಹಾವು ಏಣಿ ಆಟ ಅಂತ್ಯ: 16 ಮತಗಳಿಂದ ಗೆದ್ದ ಸಿ.ಕೆ. ರಾಮ ಮೂರ್ತಿ; ಕಣ್ಣೀರಿಟ್ಟ ಸೌಮ್ಯಾರೆಡ್ಡಿ

Follow Us:
Download App:
  • android
  • ios