Asianet Suvarna News Asianet Suvarna News

ಬಿಜೆಪಿ-ಕಾಂಗ್ರೆಸ್ ಹಣದಿಂದ ಚುನಾವಣೆ ನಡೆಸಿವೆ; ಹಣವಿಲ್ಲದೆ 25 ಕಡೆ ನಮ್ಮ ಪಕ್ಷಕ್ಕೆ ಹಿನ್ನಡೆ: ಎಚ್‌ಡಿಕೆ

ಉತ್ತರ ಕರ್ನಾಟಕ ಸೇರಿದಂತೆ ಹಲವೆಡೆ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಆದರೆ, ಕೊನೇ ಹಂತದಲ್ಲಿ ಅಭ್ಯರ್ಥಿಗಳ ನಿರೀಕ್ಷೆ ಮುಟ್ಟಲಾಗಲಿಲ್ಲ. ಕನಿಷ್ಠ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಹಣದ ಕೊರತೆಯಿಂದಾಗಿ ಗೆಲ್ಲುವ ಕ್ಷೇತ್ರಗಳಲ್ಲಿ ಹಿನ್ನಡೆ ಅನು​ಭ​ವಿ​ಸು​ವಂತಾ​ಗಿದೆ ಎಂದು ಜೆಡಿಎಸ್‌ ನಾಯಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

karnataka assembly election without money, 25 assembly constituency face setback says HDK at ramanagara rav
Author
First Published May 12, 2023, 2:50 AM IST | Last Updated May 12, 2023, 2:52 AM IST

ರಾಮನಗರ (ಮೇ.12) : ಉತ್ತರ ಕರ್ನಾಟಕ ಸೇರಿದಂತೆ ಹಲವೆಡೆ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಆದರೆ, ಕೊನೇ ಹಂತದಲ್ಲಿ ಅಭ್ಯರ್ಥಿಗಳ ನಿರೀಕ್ಷೆ ಮುಟ್ಟಲಾಗಲಿಲ್ಲ. ಕನಿಷ್ಠ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಹಣದ ಕೊರತೆಯಿಂದಾಗಿ ಗೆಲ್ಲುವ ಕ್ಷೇತ್ರಗಳಲ್ಲಿ ಹಿನ್ನಡೆ ಅನು​ಭ​ವಿ​ಸು​ವಂತಾ​ಗಿದೆ ಎಂದು ಜೆಡಿಎಸ್‌ ನಾಯಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy)ಹೇಳಿದರು.

ವಿಧಾ​ನ​ಸಭಾ ಚುನಾ​ವ​ಣೆ​(Karnataka assembly election)ಯಲ್ಲಿ ತಮ್ಮ ಪಕ್ಷದಿಂದ ಸ್ಪರ್ಧಿಸಿದ್ದ ಹಲವು ಅಭ್ಯರ್ಥಿಗಳಿಗೆ ಆರ್ಥಿಕ ಸಂಪನ್ಮೂಲದ ಸಹಕಾರ ಒದಗಿಸಲು ಸಾಧ್ಯವಾಗಲಿಲ್ಲ ಎಂಬ ನೋವು ಕಾಡು​ತ್ತಿದೆ. ಈ ವಿಚಾರದಲ್ಲಿ ತಾವು ವಿಫಲರಾಗಿರುವುದು ನೋವಾಗಿದೆ. ಹಣದ ಕೊರತೆ ಇರುವ ಕ್ಷೇತ್ರಗಳ ಅಭ್ಯರ್ಥಿಗಳು ಅನ್ಯ ಪಕ್ಷಗಳಿಗೆ ಬುಕ್‌ ಆಗಿಬಿಟ್ಟರು ಎಂದು ತಪ್ಪು ತಿಳಿಯಬಾರದು. ಅಭ್ಯರ್ಥಿಗಳ ವಿರುದ್ಧ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಬಾರದು ಎಂದರು.

ಭಜರಂಗ ದಳ-ಪಿಎಫ್ಐ ನಿಷೇಧದಿಂದ ಏನು ಲಾಭ: ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ದ ಎಚ್‌ಡಿಕೆ ವ್ಯಂಗ್ಯ

ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಹಣದಿಂದ ಚುನಾವಣೆ ನಡೆಸಿವೆ. ಹಣದ ಕೊರತೆಯಿಂದಾಗಿ ಪಕ್ಷದ ಅಭ್ಯರ್ಥಿಗಳಿಗೆ ತೊಂದರೆಯಾಗಿರಬಹುದು. ಆದರೂ ಕಾಂಗ್ರೆಸ್‌ ಮತ್ತು ಬಿಜೆ​ಪಿ​ಗಿಂತ ಮುಂದೆ ಇರು​ತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಮನಗರ, ಚನ್ನಪಟ್ಟಣ ಮತ್ತು ಮಾಗಡಿ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ ಕುಮಾ​ರ​ಸ್ವಾ​ಮಿ, ಹಾಗೊಮ್ಮೆ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬಂದರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಅಂತಹ ಪರಿಸ್ಥಿತಿ ಎದುರಾದರೆ ಆಗ ಅದರ ಬಗ್ಗೆ ಮಾತನಾಡುವೆ ಎಂದರು.

Latest Videos
Follow Us:
Download App:
  • android
  • ios