Asianet Suvarna News Asianet Suvarna News

ಆಪಾದನೆ ಮಾಡುವ ಮೊದಲು ಶುದ್ಧಹಸ್ತರಿರಬೇಕು; ಕಾಂಗ್ರೆಸ್‌ ಪಕ್ಷವೇ ಭ್ರಷ್ಟಾಚಾರದ ಕೂಪ: ಸಿಎಂ

ಆಪಾದನೆ  ಮಾಡುವವರು ಮೊದಲು ತಾವು ಶುದ್ಧ ಹಸ್ತರಿರಬೇಕು. ಆಗ ಅದಕ್ಕೆ ಬೆಲೆ ಬರುತ್ತದೆ. ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸ್ ನ ಕೈ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿ ಜನ ಈ ಬಂದ್ ಕರೆಗೆ ಬೆಂಬಲ ನೀಡುವುದಿಲ್ಲ.  ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Karnataka Bandh issue CM Basavaraja Bommai's statement in Hubli rav
Author
First Published Mar 6, 2023, 12:32 PM IST

ಹುಬ್ಬಳ್ಳಿ (ಮಾ.6) : ಆಪಾದನೆ  ಮಾಡುವವರು ಮೊದಲು ತಾವು ಶುದ್ಧ ಹಸ್ತರಿರಬೇಕು. ಆಗ ಅದಕ್ಕೆ ಬೆಲೆ ಬರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಿಂದ ಮಾರ್ಚ್ 9 ರಂದು ಕರ್ನಾಟಕ ಬಂದ್ ಕರೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸ್ ನ ಕೈ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿ ಜನ ಈ ಬಂದ್ ಕರೆಗೆ ಬೆಂಬಲ ನೀಡುವುದಿಲ್ಲ. ಆಪಾದನೆ  ಮಾಡುವವರು ಮೊದಲು ಶುದ್ಧ ಹಸ್ತರಿರಬೇಕು. ಆಗ ಅದಕ್ಕೆ ಬೆಲೆ ಬರುತ್ತದೆ ಎಂದರು.

ತಪ್ಪು ಮುಚ್ಚಿ ಹಾಕುವುದು ಕಾಂಗ್ರೆಸ್‌ ನೈತಿಕತೆ: ಸಿಎಂ ಬೊಮ್ಮಾ​ಯಿ

ಕಾಂಗ್ರೆಸ್(Karnataka congress) ನವರು ದಿಂಬು ಹಾಸಿಗೆಯನ್ನೂ ಬಿಟ್ಟಿಲ್ಲ. ಬಿಸ್ಕೇಟ್, ಕಾಫಿಯಲ್ಲೂ ಭ್ರಷ್ಟಾಚಾರ ಬಿಟ್ಟಿಲ್ಲ. ಕಾಂಗ್ರೆಸ್ ಎಲ್ಲದರಲ್ಲೂ ಭ್ರಷ್ಟಾಚಾರ ಮಾಡಿದೆ. ಎಂ.ಬಿ.ಪಾಟೀಲ್, ಜಾರ್ಜ್, ಮಹದೇವಪ್ಪಗೆ ಕೇಳಬೇಕು ಸಿದ್ಧರಾಮಯ್ಯ(Siddaramaiah) ಎಷ್ಟೆಲ್ಲ ಟಾರ್ಗೆಟ್ ಕೊಟ್ಟಿದ್ದರು ಎಂದು ತಿಳಿಯಲು. ಭ್ರಷ್ಟಾಚಾರದ ಕೂಪದಲ್ಲಿ ಇರುವವರು ಆಪಾದನೆ ಮಾಡಿದರೆ ನಡೆಯಲ್ಲ. ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ಬಂದ್ ಆಗುತ್ತಿದೆ, ಹೀಗಾಗಿ ರಾಜ್ಯ ಬಂದ್ ಮಾಡುವುದರಲ್ಲಿ ಅರ್ಥವಿಲ್ಲ. ಕಾಂಗ್ರೆಸ್ ಮಾಡಿದ ಕರ್ಮಕಾಂಡ ಒಂದಾ ಎರಡಾ..? ಬಂದ್ ಮೂಲಕ ತಮ್ಮ ರಾಜಕೀಯ ಭವಿಷ್ಯ ಬರೆದುಕೊಳ್ಳಬಹುದು ಅನ್ನುವುದು ಮೂರ್ಖತನ. ಚುನಾವಣಾ ಅಖಾಡವಿದೆ ಜನರೇ ತೀರ್ಮಾನ ಮಾಡುತ್ತಾರೆ ಎಂದರು.

ಬೆಳಗಾವಿ(Belgum) ರಾಜಹಂಸಗಡ(Rajahamsagadh)ದಲ್ಲಿ ಕಾಂಗ್ರೆಸ್(Congress) ನಿಂದ ಶಿವಾಜಿ ಪ್ರತಿಮೆ(Shivaji statue) ಮರು ಉದ್ಘಾಟನೆ ಪ್ರಕರಣ, ಇದೊಂದು ಹಾಸ್ಯಾಸ್ಪದ ಸಂಗತಿ. ಸರ್ಕಾರವೇ ಬಂದು ಮೂರ್ತಿ ಉದ್ಘಾಟನೆ ಮಾಡಿದ ಮೇಲೆ ಈ ರೀತಿ ಮಾಡೋದು ಸರಿಯಲ್ಲ. ಸರ್ಕಾರದಿಂದ ಉದ್ಘಾಟನೆ ಮಾಡಿದ ನಂತರ ಒಣ ಪ್ರತಿಷ್ಠೆಗಾಗಿ ಈ ರೀತಿ ಮಾಡಲಾಗಿದೆ. ರಾಷ್ಟ್ರನಾಯಕರ ಹೆಸರಲ್ಲಿ ಈ ರೀತಿ ರಾಜಕೀಯ ಮಾಡೋದು ಸರಿಯಲ್ಲ.

ಐಫೋನ್‌ ಘಟಕದ ಹೆಸರಲ್ಲಿ ಕಿವಿ ಮೇಲೆ ಬಿಜೆಪಿ ಹೂ: ಕಾಂಗ್ರೆಸ್‌ ಟೀಕೆ

 ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ(Mangaluru coocker blast case)ಕ್ಕೆ ಐಸಿಸ್  ಹೊಣೆಹೊತ್ತ ವಿಚಾರ. ಈಗ ಡಿಕೆಶಿ(DK Shivakumar) ಏನು ಹೇಳುತ್ತಾರೆ ಕೇಳಬೇಕು. ಬರೀ ಸಾದಾ ಕುಕ್ಕರ್ ಅಂತಾ ಡಿಕೆಶಿ ಹೇಳಿದ್ದರು. ಬಿಜೆಪಿಯವರು ಇದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಅಂತಾ ಹೇಳಿದ್ದರು. ಈಗ ಈ ವಿಚಾರಕ್ಕೆ ಡಿಕೆಶಿ ಏನು ಹೇಳುತ್ತಾರೆ ಪ್ರಶ್ನೆ ಕೇಳಿ ಎಂದ ಸಿಎಂ.

Follow Us:
Download App:
  • android
  • ios