Asianet Suvarna News Asianet Suvarna News

ಕಾಂಗ್ರೆಸ್ ಉಚಿತ ಭಾಗ್ಯಗಳ ಸುನಾಮಿಗೆ ಕೊಚ್ಚಿ‌ಹೊದ ಬಿಜೆಪಿ ಸರ್ಕಾರದ ಕೆಲಸಗಳು : ಜೆ.ಸಿ ಮಾಧುಸ್ವಾಮಿ

ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿ ಸರ್ಕಾರ ಮಾಡಿದ ಎಲ್ಲ ಕೆಲಸಗಳೂ ಕೂಡ ಕಾಂಗ್ರೆಸ್‌ನ ಉಚಿತ ಗ್ಯಾರಂಟಿಗಳ ಸುನಾಮಿಗೆ ಕೊಚ್ಚಿಕೊಂಡು ಹೋಗಿವೆ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. 

Karnataka BJP All works was wasted in front of Congress free guarantees JC Madhuswamy sat
Author
First Published Jul 3, 2023, 11:17 PM IST

ವರದಿ : ಮಹಂತೇಶ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್
ತುಮಕೂರು (ಜು.03): ಇಡೀ ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿ ಸರ್ಕಾರ ಮಾಡಿದ ಎಲ್ಲ ಕೆಲಸಗಳೂ ಕೂಡ ಕಾಂಗ್ರೆಸ್‌ನ ಉಚಿತ ಗ್ಯಾರಂಟಿಗಳ ಸುನಾಮಿಗೆ ಕೊಚ್ಚಿಕೊಂಡು ಹೋಗಿವೆ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. 

ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದ ಬಳಿಕ ಮೊದಲ ಬಾರಿ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ  ಮೌನ ಮುರಿದಿದ್ದಾರೆ. ಚಿಕ್ಕನಾಯಕನಹಳ್ಳಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬೇಸರ ವ್ಯಕ್ತಪಡಿಸಿದ ಮಾಧುಸ್ವಾಮಿ, ಕೆಲಸ ಮಾಡಿದಕ್ಕೆ ಪ್ರತಿಫಲ ಕೊಡುತ್ತಾರೆ ಎಂದುಕೊಂಡಿದ್ದೆ, ಆದರೆ ಜನ ಕಡೆಗಣಿಸಿದ್ದಾರೆ ಎಂದಿದ್ದಾರೆ.‌ಕೆಲಸ ಮಾಡಿದಕ್ಕೆ ಪ್ರತಿಫಲ ಸಿಗದೇ ಇರೋದು ಕೇವಲ ಚಿಕ್ಕನಾಯಕನಹಳ್ಳಿಗೆ ಮಾತ್ರ ಸೀಮಿತವಲ್ಲ, ಇಡೀ ರಾಜ್ಯದಲ್ಲಿ ನನ್ನಂತೆ ಕೆಲಸ  ಮಾಡಿದ ಹಲವು ನಾಯಕರು ಸೋತಿದ್ದಾರೆ. ಯಾಕಂದರೆ ಜನರಿಗೆ ಊರಿನ ಕೆಲಸ, ಕ್ಷೇತ್ರದ ತಮ್ಮ ಕೆಲಸ ಅನಿಸಲೇ ಇಲ್ಲ, ಅವರು ಕೊಡುವ ಅಕ್ಕಿ, ಅವರು ಕೊಡುವ ದುಡ್ಡೇ ಶ್ರೇಷ್ಠ ಅನಿಸಿತು.  ಅವರ‌ ಉಚಿತ ಭಾಗ್ಯಗಳ ಮುಂದೆ ನಮ್ಮ ಎಲ್ಲಾ ಕೆಲಸ ಕೊಚ್ಚಿಕೊಂಡು ಹೋಯಿತು ಎಂದರು.

ಟಗರು ಕಾಳಗದ ಕಲಿ ಕಮಲಾಪುರದ ಜಂಗ್ಲಿ ಇನ್ನಿಲ್ಲ: ಪದಕಗಳ ರಣಬೇಟೆಗಾರ

ಕಾಂಗ್ರೆಸ್‌ ಉಚಿತ ಭಾಗ್ಯದ ವಿರುದ್ಧ ಹೋರಾಟ: ನಾವು ಯಾವ ನೀರು ಕುಡಿದಿದ್ದಿವಿ, ಯಾವ ರಸ್ತೆಯಲ್ಲಿ ಓಡಾಡುತಿದ್ದೀವಿ ಅನ್ನೋದನ್ನು ಜನರು ಮರೆತರು. ಇದೇ ರೀತಿ ಉಚಿತ ಭಾಗ್ಯ ಮುಂದುವರೆದರೆ ಮುಂದೆ ಚುನಾವಣೆ ಮಾಡೋದು ತುಂಬಾ ಕಷ್ಟವಾಗುತ್ತದೆ.  ತೆರಿಗೆದಾರರ ದುಡ್ಡನ್ನು ನಮಗೆ ಇಷ್ಟ ಬಂದಹಾಗೆ ಮನೆಯಲ್ಲಿ ಕುಂತವರಿಗೆ ಇಷ್ಟ ಬಂದಹಾಗೆ ಹಂಚುತ್ತೇನೆ ಎಂದರೆ ರಾಜ್ಯದ ಪರಿಸ್ಥಿತಿ ಏನಾಗಬೇಡ. ಕೆಲ ವಿದ್ಯಾವಂತ ಉದ್ಯೋಗಸ್ಥ ಯುವಕರು ನನ್ನ ಬಳಿ ಬಂದು ಕೇಳಿದ್ರು. ನಾವು ತೆರಿಗೆ ಕಟ್ಟೋರು ಉಚಿತ ಭಾಗ್ಯದ ವಿರುದ್ಧ ಹೋರಾಟ ಮಾಡಿದ್ರೆ ಮಾತ್ರ ಇದು ನಿಲ್ಲಬಹುದೇನೋ ಎಂದು ಚರ್ಚೆ ಮಾಡಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗಲೂ ಹೆಚ್ಚುವರಿ ಅಕ್ಕಿ ಕೊಟ್ಟಿಲ್ಲ:  ಈಗ ಮೋದಿ ಅಕ್ಕಿ ಕೊಟ್ಟಿಲ್ಲ ಎಂದು ಸುಮ್ಮನೆ ದೂಷಣೆ ಮಾಡುತ್ತಾರೆ.‌ ನಾವೂ ಕೂಡ ರಾಜ್ಯದಲ್ಲಿ ಕನಿಷ್ಠ 7ಕೆ.ಜಿ.ಅಕ್ಕಿ ಕೊಡಬೇಕು ಎಂದು 10 ಬಾರಿ ಪ್ರಯತ್ನ ಪಟ್ವಿದ್ದೇವೆ. ಆದರೆ ಹೆಚ್ಚುವರಿ ಅಕ್ಕಿ ಕೊಡಲು ಪ್ರಧಾನಿ ಮೋದಿ ಒಪ್ಪಿಲ್ಲ, ಬಿಜೆಪಿ ಆಡಳಿತದ ಸಮಯದಲ್ಲೂ ರಾಜ್ಯಕ್ಕೂ ಕೇಂದ್ರ ಹೆಚ್ಚುವರಿ ಅಕ್ಕಿ ಕೊಟ್ಟಿಲ್ಲ, ಆಹಾರ ಭದ್ರತಾ ಕಾಯಿದೆ ಪ್ರಕಾರ ಒಬ್ಬರಿಗೆ ದಿನಕ್ಕೆ 150-200 ಗ್ರಾಂ ಅಕ್ಕಿ ಸಾಕು ಎಂದು ವೈಜ್ಞಾನಿಕವಾಗಿ ಅಂದಾಜಿಸಲಾಗಿದೆ.

ಅವಿವಾಹಿತರಿಗೆ ಕಂಕಣ ಭಾಗ್ಯ ಕರುಣಿಸುವ ಚಾಮರಾಜೇಶ್ವರ ಜಾತ್ರೆ

ಈ ಆಧಾರದ ಮೇಲೆ  ತಿಂಗಳಿಗೆ 5ಕೆ.ಜಿ. ಅಕ್ಕಿ ಕೊಡಲಾಗುತ್ತಿದೆ. ನಮ್ಮಲ್ಲಿ ದಾಸ್ತಾನು ಇರುವ ಅಕ್ಕಿ ಬರಗಾಲ, ಅತಿವೃಷ್ಟಿ  ಸಂಕಷ್ಟ ಕಾಲದಲ್ಲಿ ಕೊಡಲು ಇಡಲಾಗಿದೆ. ನಮ್ಮಲ್ಲಿ ಅಕ್ಕಿ ಇದೆ ಎಂದೇಳಿ ಬೇಕಾಬಿಟ್ಟಿ ಹಂಚೋಕಾಗುತ್ತಾ?. ಕರ್ನಾಟಕಕ್ಕೆ ಅಂತಹ ಪರಿಸ್ಥಿತಿ ಬಂದರೇ ಮೋದಿ ಅಕ್ಕಿ ಕೊಟ್ಟೆಕೊಡುತ್ತಾರೆ. ಮನೆಯಲ್ಲಿ ಸಂಸಾರ ನಡೆಸೋರು ಕಷ್ಟ ಕಾಲಕ್ಕೆ ಆಗಲಿ ಎಂದೇಳಿ ದುಡ್ಡು ಕೂಡಿಡುತ್ತಾರೆ. ಅದನ್ನು ನಾನು ಸಿನೆಮಾ ನೋಡೋಕೆ ಹೋಗ್ಬೇಕು, ಸ್ವೀಟ್ ತಿನ್ನೋಕೆ ಹೋಗ್ಬೇಕು ಕೊಡು ಅಂದರೆ ಕೊಡಕಾಗುತ್ತಾ? ಎಂದು ರಾಜ್ಯ ಸರ್ಕಾರದ ಉಚಿತ ಭಾಗ್ಯಗಳನ್ನು ಟೀಕಿಸಿದರು. 

Follow Us:
Download App:
  • android
  • ios