ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ, ಪಟ್ಟಿಯಲ್ಲಿ ಮತ್ತಷ್ಟು ಅಚ್ಚರಿ
* ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ
* ಪಟ್ಟಿಯಲ್ಲಿ ಮತ್ತಷ್ಟು ಅಚ್ಚರಿ
* ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ಕೊಟ್ಟ ಹೈಕಮಾಂಡ್
ಬೆಂಗಳೂರು, (ಮೇ.24): ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಇಂದು(ಮಂಗಳವಾರ) ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು, ಕೊನೇ ಕ್ಷಣದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನ ಅಧಿಕಥವಾಗಿ ಘೋಷಣೆ ಮಾಡಿದೆ. ಪಟ್ಟಿ ಮತ್ತಷ್ಟು ಅಚ್ಚರಿ ಮೂಡಿಸಿದೆ.
ಹೌದು....ಬಿಜೆಪಿ ಕೊನೇ ಕ್ಷಣದಲ್ಲಿ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಊಹಿಸದ ಹೆಸರು ಪಟ್ಟಿಯಲ್ಲಿರುವುದು ಬಿಜೆಪಿ ನಾಯಕರ ಅಚ್ಚರಿಗೆ ಕಾರಣವಾಗಿದೆ. ಅಚ್ಚರಿ ಅಂದ್ರೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಮೂಲತಃ ಕೊಪ್ಪಳ ಜಿಲ್ಲೆಯವರಾದ ಹೇಮಲತಾ ನಾಯಕ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕೇಶವ ಪ್ರಸಾದ್ ಹಾಗೂ ಚಲುವಾದಿ ನಾರಾಯಣಸ್ವಾಮಿ ಅವರಿಗೆ ಮಣೆ ಹಾಕಲಾಗಿದೆ.
ಕೊನೆ ಕ್ಷಣದಲ್ಲಿ ವಿಜಯೇಂದ್ರಗೆ ಬಿಗ್ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್
ಈ ಮೊದಲ ಮಹಿಳಾ ಕೋಟಾದಲ್ಲಿ ಮಂಜುಳಾ ಅವರ ಹೆಸರು ಮುಂಚೂಣಿಯಲ್ಲಿತ್ತು. ಅಲ್ಲದೇ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರ ಹೆಸರು ಸಹ ಅಂತಿಮವಾಗಿತ್ತು ಎನ್ನಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಬಿಜೆಪಿ ಇವರಿಬ್ಬರನ್ನು ಕೈಬಿಟ್ಟು ಬೇರೆಯವರಿಗೆ ಟಿಕೆ ನೀಡಿದೆ.