ಕಳೆದ ನಾಲ್ಕು ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗೆ (ಎಸ್‌ಸಿಪಿ/ಟಿಎಸ್‌ಪಿ) ಮೀಸಲಿಟ್ಟ ಹಣವನ್ನು ಕಾನೂನಿಗೆ ವಿರುದ್ಧವಾಗಿ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರು (ಏ.22): ಕಳೆದ ನಾಲ್ಕು ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗೆ (ಎಸ್‌ಸಿಪಿ/ಟಿಎಸ್‌ಪಿ) ಮೀಸಲಿಟ್ಟ ಹಣವನ್ನು ಕಾನೂನಿಗೆ ವಿರುದ್ಧವಾಗಿ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ (BJP Govt) ದಲಿತ ಸಮುದಾಯಕ್ಕೆ (Dalit Community) ದ್ರೋಹ ಬಗೆದಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಆರೋಪಿಸಿದ್ದಾರೆ. 2021-22ರ ರಾಜ್ಯ ಬಜೆಟ್‌ನಲ್ಲಿ ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯನ್ವಯ ಯೋಜನಾ ವೆಚ್ಚದ ಶೇಕಡಾ 24.1ರಷ್ಟು(26,695.64 ಕೋಟಿ ರು.) ಹಣವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣಕ್ಕೆ ಮೀಸಲಿಡಲಾಗಿತ್ತು.
ಆದರೆ ರಾಜ್ಯ ಸರ್ಕಾರ ಕಾಯ್ದೆಯನ್ನು ಉಲ್ಲಂಘಿಸಿ ಒಟ್ಟು ಹಣದಲ್ಲಿ 7885.32 ಕೋಟಿ ರು.ಗಳನ್ನು ನೀರಾವರಿ, ನಗರಾಭಿವೃದ್ದಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮೂಲಸೌಕರ್ಯದ ಯೋಜನೆಗಳಿಗೆ ವ್ಯಯ ಮಾಡಿದೆ. ಇದು ಸಂಪೂರ್ಣವಾಗಿ ಕಾನೂನು ವಿರೋಧಿ ನಡೆಯಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ದ ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ಸರ್ಕಾರ ಜಾರಿಗೆ ತಂದಿರುವ ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯ ಪ್ರಕಾರ ಒಟ್ಟು ಬಜೆಟ್‌ನ ಶೇ.24.1ರಷ್ಟು ಭಾಗವನ್ನು ಎಸ್‌ಸಿ, ಎಸ್‌ಟಿ ಜನರ ಕಲ್ಯಾಣ ಕಾರ್ಯಕ್ರಮಗಳಿಗಷ್ಟೇ ಬಳಸಬೇಕು.
ಆಣೆ ಮಾಡು ಎನ್ನೋಕೆ ಅವನು ಯಾವೂರ ದಾಸಯ್ಯ?: ಸಿದ್ದು ವಿರುದ್ಧ ಎಚ್‌ಡಿಕೆ ಕಿಡಿ
ಆ ವರ್ಷ ಉಳಿಕೆಯಾದರೆ ಅದನ್ನು ನಂತರದ ವರ್ಷ ಖರ್ಚು ಮಾಡಬೇಕು. ನಿಗದಿತ ಪ್ರಮಾಣದಲ್ಲಿ ನಿಗದಿತ ಉದ್ದೇಶಕ್ಕಾಗಿಯೇ ಖರ್ಚು ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೂಡಾ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. 2018ರಿಂದ 2021ರವರೆಗೆ 4 ವರ್ಷದಲ್ಲಿ ಈ ರೀತಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣದಲ್ಲಿ 7885.32 ಕೋಟಿ ರುಪಾಯಿಗಳನ್ನು ಮೂಲ ಸೌಕರ್ಯಗಳಿಗೆ ಬಳಸಿಕೊಂಡು ಎಸ್‌ಸಿ, ಎಸ್‌ಟಿ ಜನರು ನೇರ ಫಲಾನುಭವಿಗಳಾಗಿರುವ ಯೋಜನೆಗಳಿಗೆ ಹಣವನ್ನು ಕಡಿತಗೊಳಿಸಲಾಗಿದೆ ಎಂದಿದ್ದಾರೆ.
ಎಸ್‌ಸಿಪಿ/ಟಿಎಸ್‌ಪಿ ಹಣದ ಸ್ವಲ್ಪ ಭಾಗವನ್ನು ಸಾಮಾನ್ಯ ಮೂಲಸೌಕರ್ಯಗಳಿಗೆ ಬಳಸಲು ಕಾಯ್ದೆಯಲ್ಲಿ ಅವಕಾಶವಿದ್ದರೂ, ಇಷ್ಟೊಂದು ಪ್ರಮಾಣದ ಹಣವನ್ನು ಎಸ್‌ಸಿ,ಎಸ್‌ಟಿ ಸಮುದಾಯದವರು ನೇರ ಫಲಾನುಭವಿಗಳಲ್ಲದ ಯೋಜನೆಗಳಿಗೆ ಬಳಸುವುದು ಆ ಸಮುದಾಯಕ್ಕೆ ಬಗೆಯುವ ದ್ರೋಹ ಮಾತ್ರವಲ್ಲ, ಕಾನೂನಿನ ಉಲ್ಲಂಘನೆಯೂ ಹೌದು ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
2012-13ರಲ್ಲಿ ಎಸ್‌ಸಿ,ಎಸ್‌ಟಿಗೆ ಕೇವಲ 7,200 ಕೋಟಿ ರು.ಗಳನ್ನು ಮೀಸಲಿರಿಸಲಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ 2014-15ರ ವೇಳೆಗೆ 15834 ಕೋಟಿಗಳಿಗೆ ಏರಿಕೆಯಾಯಿತು. 2018ರ ಫೆಬ್ರವರಿಯಲ್ಲಿ ನಾನು ಬಜೆಟ್ ಮಂಡಿಸಿದಾಗ 29691.5 ಕೋಟಿಗಳನ್ನು ಈ ಯೋಜನೆಗೆ ಮೀಸಲಿರಿಸಿದ್ದೆ. ಆದರೆ ಕಳೆದ 3 ವರ್ಷಗಳಿಂದ ರಾಜ್ಯದ ಬಿಜೆಪಿ ಸರ್ಕಾರವು ಈ ವರ್ಗಗಳಿಗೆ ಖರ್ಚು ಮಾಡುವ ಅನುದಾನವನ್ನು ಒಂದೇ ಸಮನೆ ಕಡಿಮೆ ಮಾಡುತ್ತಿದೆ. ಬಜೆಟ್ ಗಾತ್ರ ಮಾತ್ರ ದೊಡ್ಡದಾಗುತ್ತಿದೆಯೇ ಹೊರತು, ಜನರ ಕಲ್ಯಾಣಕ್ಕಾಗಿ ಖರ್ಚು ಮಾಡುವ ಅನುದಾನ ಕಡಿಮೆಯಾಗುತ್ತಿದೆ ಎಂದು ಟೀಕಿಸಿದರು.
ನಿಮಗೆ ತಾಕತ್ ಇದ್ರೆ 40% ಸರ್ಕಾರದ ವಿರುದ್ಧ ತನಿಖೆ ಮಾಡಿಸಿ: ಆಧಾರ ರಹಿತವಾಗಿ ನನ್ನ ಸರ್ಕಾರವನ್ನು ಅಂದು ಪ್ರಧಾನಿ ನರೇಂದ್ರ ಮೋದಿ (Narendra Modi) 10% ಕಮಿಷನ್ ಸರ್ಕಾರ ಎಂದು ಟೀಕಿಸಿದ್ದರು. ಆದರೆ, ಈಗ ಈ ಬಿಜೆಪಿ ಸರ್ಕಾರ 40% ಕಮಿಷನ್ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘವೇ ಪ್ರಧಾನಿಗೆ 8 ತಿಂಗಳ ಹಿಂದೆ ಪತ್ರ ಬರೆದಿದೆ, ನಾನು ತಿನ್ನಲ್ಲ, ತಿನ್ನಲೂ ಬಿಡಲ್ಲ ಎನ್ನುವ ನಿಮಗೆ ತಾಕತ್ ಇದ್ದರೇ 40% ಸರ್ಕಾರದ ವಿರುದ್ಧ ತನಿಖೆ ಮಾಡಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸವಾಲು ಹಾಕಿದರು.
Karnataka Politics: ಬಿಜೆಪಿ ಜತೆ ಸೇರಲ್ಲವೆಂದು ತಂದೆ ಮೇಲೆ ಎಚ್ಡಿಕೆ ಆಣೆ ಮಾಡಲಿ: ಸಿದ್ದು
ಈಶ್ವರಪ್ಪ (KS Eshwarappa) ಬಂಧನಕ್ಕೆ ಆಗ್ರಹಿಸಿ ಚಾಮರಾಜನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ (Protest) ಮಾತನಾಡಿದ ಅವರು, ಎಲ್ಲಾ ಏಜೆನ್ಸಿಗಳು ಅವರ ಬಳಿಯೇ ಇದೆಯಲ್ಲಾ ಏಕೆ ತನಿಖೆ ನಡೆಸುತ್ತಿಲ್ಲ ಎಂದು ಕಿಡಿಕಾರಿದರು. ಸ್ವಪಕ್ಷದ ಕಾರ್ಯಕರ್ತನಿಂದ ಕಾಮಗಾರಿ ಮಾಡಿಸಿ ಬಳಿಕ 40% ಕಮಿಷನ್‌ಗಾಗಿ ಗುತ್ತಿಗೆದಾರನನ್ನು ಈಶ್ವರಪ್ಪ ಬಲಿ ಪಡೆದಿದ್ದಾರೆ. ಬಡವನ ಹಣಕ್ಕೆ ಕತ್ತರಿ ಹಾಕಿರುವ ಈಶ್ವರಪ್ಪ ಮನುಷ್ಯನಾ, ರಾಕ್ಷಸನಾ, ಆತನನ್ನು ಕೊಲೆಗಡುಕ ಅನ್ನದೇ ಏನನ್ನಬೇಕು ಎಂದು ಸಿದ್ದರಾಮಯ್ಯ ಕಿಡಿಕಾರಿದರು.
