ಬೆಂಗಳೂರು, (ಮಾ.26): ಮಾಜಿ ಸಚಿವರಿಂದ ತನಗೆ ಮೋಸ ಆಗಿದೆ ಎಂದು ಆರೋಪಿಸಿರುವ CD ಯುವತಿ ಸ್ವತಃ ಬರೆದಿದ್ದ ದೂರಿನ ಅನ್ವಯ ಸದ್ಯ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದೂರು ದಾಖಲಾಗಿದೆ.

 ಇದರ ನಡುವೆಯೇ ಯುವತಿಯದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಈ ಆಡಿಯೋನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಮವಾಗಿದೆ.

ಈ ಹಿನ್ನೆಲೆಯಲ್ಲಿ CD ಪ್ರಕರಣದಲ್ಲಿ ಮುಂದಿಟ್ಟುಕೊಂಡು ಸದನದಲ್ಲಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್​​​ ನಾಯಕರಿಗೆ ಬಿಜೆಪಿ ಟಾಂಗ್ ನೀಡಿದ್ದು, ಸದನದಲ್ಲಿ ಬೊಬ್ಬಿರಿದ ಮಹಾಶೂರರು ಈಗೇನು ಹೇಳುತ್ತಾರೆ? ಎಂದು ಪ್ರಶ್ನೆ ಮಾಡಿದೆ.

CD ಲೇಡಿಯ ಆಡಿಯೋದಲ್ಲಿ ಡಿಕೆಶಿ ಹೆಸ್ರು, ಇದಕ್ಕಿಂತ ದೊಡ್ಡ ಬಾಂಬ್ ಇದೆ ಎಂದ ಜಾರಕಿಹೊಳಿ

ಸರಣಿ ಟ್ವೀಟ್​​ ಮಾಡಿ ಡಿಕೆ ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿರುದ ಬಿಜೆಪಿ, ಆ ಪ್ರಕರಣದ ʼಸಂತ್ರಸ್ಥೆʼ ನೇರವಾಗಿ ಮಹಾನಾಯಕನ ಹೆಸರು ಪ್ರಸ್ತಾಪ ಮಾಡಿದ್ದಾಳೆ. ಮಹಾನಾಯಕ ನಮ್ಮ ಜೊತೆ ಇದ್ದಾನೆ ಎಂಬ ಮಾತುಗಳನ್ನಾಡಿದ್ದಾಳೆ. ಸದನದಲ್ಲಿ ಬೊಬ್ಬಿರಿದ ಮಹಾಶೂರರು ಈಗೇನು ಹೇಳುತ್ತಾರೆ? ಕಾಂಗ್ರೆಸ್‌ ಕಚೇರಿಯಲ್ಲೇ ಷಡ್ಯಂತ್ರ ನಡೆದಿದೆಯೇ!? ಎಂದು ಪ್ರಶ್ನಿಸಿದೆ.

ಅಲ್ಲದೇ ಆರಂಭದಿಂದಲೂ ಮಹಾನಾಯಕನ ಸುತ್ತಲೂ ಪ್ರಕರಣ ಗಿರಕಿ ಹೊಡೆಯುತ್ತಿತ್ತು. ಮಹಾನಾಯಕನ ಮನೆಯ ಬಳಿಗೆ ನಾನು ಬಂದಿದ್ದೇನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಮಹಾನಾಯಕನಿಗೂ ಪ್ರಕರಣದ ಮಾಸ್ಟರ್‌ ಮೈಂಡ್‌ಗಳಿಗೂ ಇರುವ ಸಂಬಂಧವವನ್ನು ಕಾಂಗ್ರೆಸ್ ಬಹಿರಂಗಗೊಳಿಸಬೇಕು ಎಂದು ಆಗ್ರಹಿಸಿದೆ.

ಸಿ.ಡಿ.ಕೇಸ್: ಯುವತಿಯ ಮತ್ತೊಂದು ಆಡಿಯೋ ಬಹಿರಂಗ, ಮಹಾನಾಯಕನ ಹೆಸ್ರು ಪ್ರಸ್ತಾಪ!

ಸಿಡಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ಹೆಸರು ಪ್ರಸ್ತಾಪವಾಗಿದೆ. ಅನೈತಿಕ, ಅಧರ್ಮ ರಾಜಕಾರಣಕ್ಕೆ ಮುನ್ನುಡಿ ಬರೆದ ಮಹಾನಾಯಕನ ರಾಜೀನಾಮೆಯನ್ನು ರಾಷ್ಟ್ರೀಯ ಮಹಾನಾಯಕಿ ತಕ್ಷಣವೇ ಪಡೆಯಬೇಕು. ಒಬ್ಬ ಹೆಣ್ಣನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರ ಪಡೆಯಲು ಷಡ್ಯಂತ್ರ ರೂಪಿಸಿದ ಕಾಂಗ್ರೆಸ್ ಜನತೆಯ ಕ್ಷಮಾಪಣೆ ಕೇಳಬೇಕು.

ಭ್ರಷ್ಟಾಚಾರ ಪ್ರಕರಣದಲ್ಲಿ ED ಮೂಲಕ ತಿಹಾರ್ ಜೈಲಿನಲ್ಲಿ ಮುದ್ದೆ ಮುರಿದಿದ್ದ ಡಿಕೆ ಶಿವಕುಮಾರ್ CD ಪ್ರಕರಣದಲ್ಲೂ ತಿಹಾರ್ ಜೈಲಿಗೆ ಕಳುಹಿಸಬೇಕಿದೆ. ದ್ವೇಷ ಸಾಧಿಸಲು ರಾಜಕಾರಣದಲ್ಲಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ನಿರ್ಮಾಪಕ ಮಹಾನಾಯಕನ ಕುತಂತ್ರಕ್ಕೆ ಅಂತ್ಯ ಹಾಡಬೇಕಿದೆ ಎಂದು ಬಿಜೆಪಿ ಸರಣಿ ಟ್ವೀಟ್​ ಮಾಡಿ ಆಗ್ರಹಿಸಿದೆ.