Asianet Suvarna News Asianet Suvarna News

ಯತ್ನಾಳ್ ವಿರುದ್ಧ ಕ್ರಮ ಆಗಿದೆ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಫೋಟಕ ಹೇಳಿಕೆ

* ಸಚಿವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್
* ಶಾಸಕ ಬಸನಗೌಡ ಯತ್ನಾಳ್ ಅವರ ವಿರೋಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್
* ಯತ್ನಾಳ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ರಾಜ್ಯ ಬಿಜೆಪಿ ಉಸ್ತುವಾರಿ

Karnataka BJP In charge Arun Singh Reacts On His Party MLA Basangowda Patil Yatnal rbj
Author
Bengaluru, First Published Jun 16, 2021, 10:12 PM IST

ಬೆಂಗಳೂರು, (ಜೂನ್.16): ನಾಯಕತ್ವ ಗೊಂದಲ ನಿವಾರಣೆಗೆ ಅಂತಲೇ ಖುದ್ದು  ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದಾರೆ. 

ಆದ್ರೆ, ಬಿಎಸ್‌ವೈ ವಿರೋಧಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತ್ರ ಇನ್ನೂ ಕಾಣಿಸಿಕೊಂಡಿಲ್ಲ. ಆದರೂ ಅವರ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯಿಸಿದ್ದು, ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಅರುಣ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯ ಪಿನ್ ಟು ಪಿನ್ ಮಾಹಿತಿ

ಸಚಿವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್ ಮಾತನಾಡಿದರು. ಈ ವೇಳೆ ಶಾಸಕ ಬಸನಗೌಡ ಯತ್ನಾಳ್ ಅವರ ವಿರೋಧಿ ಹೇಳಿಕೆಗೆ ಪ್ರತಿಕ್ರಿಯಿಸಿ, ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಎರಡು ತಿಂಗಳ ಹಿಂದೆಯೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮಾಧ್ಯಮದವರು ಪ್ರಶ್ನಿಸಿದ್ರೆ, ಅವರನ್ನೇ ಕೇಳಿ ಎಂದು ಹೇಳಿ ಹೋದರು. ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಹಾಗೂ ಅವರ ಕುಟುಂಬದ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗ ಹೇಳಿಕೆ ಕೊಡುತ್ತಾರೆ. ಹಾಗಾದ್ರೆ,  ಯತ್ನಾಳ್ ವಿರುದ್ಧ ಹೈಕಮಾಂಡ್ ಏನು ಕ್ರಮಕೈಗೊಂಡಿದೆ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಉಳಿದಿದೆ. ಇನ್ನು ಈ ಬಗ್ಗೆ ಯತ್ನಾಳ್ ಏನಾದ್ರೂ ಪ್ರತಿಕ್ರಿಯೆ ಕೊಡುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

Follow Us:
Download App:
  • android
  • ios