ಬಿಜೆಪಿ ನಾಯಕರ ಕಚ್ಚಾಟ ಬಹಿರಂಗ: ಬುದ್ಧಿ ಹೇಳಿದ ಯತ್ನಾಳ್‌ಗೆ ತಿರುಗೇಟು ಕೊಟ್ಟ ಬೊಮ್ಮಾಯಿ
ಮನೆಗೆ ಬಂದವರನ್ನು ಸ್ವಾಗತಿಸುವುದು ನಮ್ಮ ಪರಂಪರೆ, ಕಾಂಗ್ರೆಸ್ ನಾಯಕರೊಂದಿಗೆ ಎಲ್ಲವನ್ನೂ ಬಹಿರಂಗವಾಗಿಯೇ ಮಾತುಕತೆ ಮಾಡಿದ್ದೇನೆ ಎಂದು ಶಾಸಕ ಯತ್ನಾಳ್‌ಗೆ ಮಾಜಿ ಸಿಎಂ ಬಿಮ್ಮಾಯಿ ತಿರುಗೇಟು ನೀಡಿದ್ದಾರೆ.
ಬೆಳಗಾವಿ (ಜೂ.25): ಮೂವತ್ತು ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. ಯಾರ ಜೊತೆಗೂ ನಾನು ರಾಜೀ ಮಾಡಿಕೊಂಡು ರಾಜಕಾರಣ ಮಾಡಿಲ್ಲ. ಮನೆಗೆ ಬಂದವರನ್ನು ಸ್ವಾಗತ ಮಾಡುವುದು ನಮ್ಮ ಪರಂಪರೆಯಾಗಿದೆ. ನಾನೇನೂ ಯಾರನ್ನೂ ಮನೆಯೊಳಗಿನ ರೂಮಿಗೆ ಕರೆದುಕೊಂಡು ಹೋಗಿ ಮಾತನಾಡಿಲ್ಲ. ಕಾಂಗ್ರೆಸ್ ನಾಯಕರು ಜೊತೆಗಿನ ಎಲ್ಲ ಮಾತುಕತೆಗಳು ಬಹಿರಂಗವಾಗಿಯೇ ನಡೆಯುತ್ತವೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಬೆಳಗಾವಿಯ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮೊದಲು ಭಾಷಣ ಆರಂಭಿಸಿದ ಬಸವನಗೌಡ ಪಾಟೀಲ ಯತ್ನಾಳ ಅವರು, ಕಾಂಗ್ರೆಸ್ ನಾಯಕರನ್ನು ಮನೆಗೆ ಕರೆಯಿಸಿಕೊಳ್ಳಬೇಡಿ ಎಂದು ಹೇಳಿದ್ದರು. ನಂತರ, ಭಾಷಣಕ್ಕೆ ಆಗಮಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನಾನು ಕಳೆದ 30 ವರ್ಷಗಳಿಂದ ರಾಜಕಾರಣ ಮಾಡುತ್ತಿದ್ದು, ಯಾರೊಂದಿಗೂ ರಾಜಿ ಮಾಡಿಕೊಂಡಿಲ್ಲ. ಮನೆಗೆ ಬಂದವರನ್ನು ಸ್ವಾಗತ ಮಾಡುವುದು ನಮ್ಮ ಪರಂಪರೆಯಾಗಿದೆ. ಅದರಂತೆ ಯಾರೇ ಬಂದರೂ ಸ್ವಾಗತಿಸಿ ಮಾತನಾಡುತ್ತೇನೆ. ಹಾಗಂತ, ನಾನೇನೂ ಯಾರನ್ನೂ ಮನೆಯೊಳಗಿನ ರೂಮಿಗೆ ಕರೆದುಕೊಂಡು ಹೋಗಿ ಮಾತನಾಡಿಲ್ಲ. ಕಾಂಗ್ರೆಸ್ ನಾಯಕರು ಜೊತೆಗಿನ ಎಲ್ಲ ಮಾತುಕತೆಗಳು ಬಹಿರಂಗವಾಗಿಯೇ ನಡೆಯುತ್ತವೆ ಎಂದು ಹೇಳಿದರು.
ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ: ನಳಿನ್ ಕುಮಾರ್ ಕಟೀಲ್
ಬಿಜೆಪಿ ಕಾರ್ಯಕರ್ತರು ನನ್ನ ಸಹೋದರರು: ಬಿಜೆಪಿಯೇ ನನ್ನ ತಂದೆ-ತಾಯಿ, ಬಿಜೆಪಿ ಕಾರ್ಯಕರ್ತರು ನನ್ನ ಸಹೋದರ-ಸಹೋದರಿಯರು. ನಾನು ಮುಖ್ಯಮಂತ್ರಿ ಆಗಿದ್ದಾಗ ಪಕ್ಷ, ಕಾರ್ಯಕರ್ತರ ಆಶಯದಂತೆ ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದ್ದೇನೆ. ಸಿಎಂ ಆಗಿದ್ದಾಗ ಕಾರ್ಯಕರ್ತರ ಹಿತ ಕಾದಿದ್ದೇನೆ, ಮುಂದೆಯೂ ಕಾರ್ಯಕರ್ತರ ಹಿತ ಕಾಯುವೆ. ದೇಶ, ಧರ್ಮ ರಕ್ಷಣೆಗೆ ನಾನು ಸದಾ ಜಾಗೃತನಾಗಿ ಕೆಲಸ ಮಾಡುತ್ತೇನೆ. ಚುನಾವಣೆ ಸೋಲನ್ನು ಮರೆತು
ವೇದಿಕೆ ಮೇಲಿನ ಎಲ್ಲ ನಾಯಕರು ಒಂದಾಗೋಣ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇನ್ನೊಂದು ಅವಧಿಗೆ ಪ್ರಧಾನಿ ಮಾಡೋಣ. ಇದಕ್ಕಾಗಿ ಎಲ್ಲ ಪಕ್ಷಗಳ ನಾಯಕರು, ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡೋಣ ಎಂದು ಬೊಮ್ಮಾಯಿ ಮನವಿ ಮಾಡಿದರು.
ಪಾಕಿಸ್ತಾನದ ಸೊಕ್ಕಡಗಿಸಿದ ಪ್ರಧಾನಿ ಮೋದಿ: ಲೋಕಸಭೆ, ವಿಧಾನಸಭೆಯೇ ಬೇರೆ ಬೇರೆ ಆಗಿದೆ. ಮತ್ತೆ ಪ್ರಧಾನಿ ಮೋದಿಯವರನ್ನ ಮಾಡಲು ಕಾರ್ಯಕರ್ತರು ಸಂಕಲ್ಪ ಮಾಡಬೇಕು. ನರೇಂದ್ರ ಮೋದಿ ಬಂದ ಮೇಲೆ ಸ್ವಚ್ಛ, ದಕ್ಷ ಆಡಳಿತ ನೀಡಿದ್ದಾರೆ. ದೇಶದಲ್ಲಿ 12 ಕೋಟಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಪ್ರತಿ ಮನೆಗೆ ನೀರನ್ನು ಕೊಡುವ ಬಗ್ಗೆ ಪ್ರಧಾನಿ ಹೇಳಿದ್ದಾರೆ. 40 ಲಕ್ಷ ಮನೆಗಳಿಗೆ ರಾಜ್ಯದಲ್ಲಿ ನೀರು ಕೊಡಲಾಗಿದೆ. ರೈತರು, ವಿದ್ಯಾರ್ಥಿಗಳಿಗೆ ಹಲವು ಕಾರ್ಯ ಮಾಡಿದೇವೆ. ದೇಶ ನರೇಂದ್ರ ಮೋದಿ ಆಡಳಿತದಲ್ಲಿ ಸುರಕ್ಷಿತವಾಗಿದೆ. ಪಾಕಿಸ್ತಾನದ ಸೊಕ್ಕು ಅಡಗಿಸಿದ್ದು ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದರು.
ಕಲಬುರಗಿ ರೈತರ ಜಮೀನಿನಲ್ಲಿ ಲ್ಯಾಂಡ್ ಆದ ತರಬೇತಿ ವಿಮಾನ: ಪೈಲಟ್ಸ್ ಸೇಫ್
ನೀವು ಕಾಂಗ್ರೆಸ್ಸಿನವರವನ್ನು ಮನೆಗೆ ಬಿಟ್ಟುಕೊಳ್ಳಬೇಡಿ:
ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಅವರು ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಹೋಗಿ ಸೌಜನ್ಯ ಭೇಟಿ ಅಂತಾರೆ. ಇವರು ಸೌಜನ್ಯ ಭೇಟಿ ಕೊಡ್ತಿಲ್ಲ ಸೋನಿಯಾ ಗಾಂಧಿಗೆ ಅಂಜಿಸುವ ಕೆಲಸ ಮಾಡ್ತಾರೆ. ಬಸವರಾಜ ಬೊಮ್ಮಾಯಿಯವರೇ ಅವರನ್ನ ನೀವು ಮನೆವರೆಗೂ ಬಿಟ್ಟುಕೊಳ್ಳಬೇಡಿ. ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ. ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲ ಅಂತಾ ಹೇಳಿ. ಅವರನ್ನ ಸ್ವಾಗತಿಸಿಕೊಂಡ್ರೇ ನಮ್ಮ ಕಾರ್ಯಕರ್ತರು ಮಲಗಿ ಬಿಡ್ತಾರೆ ಎಂದು ಬಸವರಾಜ ಬೊಮ್ಮಾಯಿಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬುದ್ಧಿ ಹೇಳಿದ್ದರು.