ಸಿಎಂ ಬಿಎಸ್‌ವೈ ಆಪ್ತ  ರೇಣುಕಾಚಾರ್ಯ ದಿಲ್ಲಿ  ರೌಂಡ್ಸ್ ಕುತೂಹಲ ಮೂಡಿಸಿದ ರೇಣುಕಾಚಾರ್ಯ ನಡೆ ಹಲವು ಹೈಕಮಾಂಡ್‌ ನಾಯಕರನ್ನ ಭೇಟಿ ಮಾಡಿ ಮಹತ್ವದ ಚರ್ಚೆ

ಬೆಂಗಳೂರು, (ಜು.22): ಬಿಎಸ್ ಯಡಿಯೂರಪ್ಪನವರ ನಾಯಕತ್ವ ಬದಲಾವಣೆ ಖಚಿತ ಎನ್ನಲಾಗುತ್ತಿದ್ದಂತೆಯೇ ಸಿಎಂ ಆಪ್ತ ಎನ್ನಿಸಿಕೊಂಡಿರುವ ಎಂಪಿ ರೇಣುಕಾಚಾರ್ಯ ಅವರು ದಿಲ್ಲಿಗೆ ಹಾರಿದ್ದು, ಹಲವು ಹೈಕಮಾಂಡ್‌ ನಾಯಕರನ್ನ ಭೇಟಿ ಮಾಡಿ ಮಹತ್ವದ ಚರ್ಚೆಗಳ ಮಾಡುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಸಂಚನಲ ಮೂಡಿಸಿದೆ.

ಕ್ಯಾಬಿನೆಟ್ ಸಭೆ ಮುಗಿಯುತ್ತಿದ್ದಂತೆಯೇ ಪತ್ರ ಹಿಡಿದು ಸಿಎಂ ಕಚೇರಿಗೆ ಹೋದ ವಲಸಿಗ ಸಚಿವರು

ನಿನ್ನೆ (ಜು.21) ರಂದು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ನಾರಾಯಣಸ್ವಾಮಿ ಸೇರಿದಂತೆ ಹಲವು ನಾಯಕರ ಭೇಟಿ ಮಾಡಿದ್ದರು. ಇಂದು (ಜು.22) ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರನ್ನ ಭೇಟಿಯಾಗಿರುವುದು ಭಾರೀ ಕುತೂಹಲ ಮೂಡಿಸಿದೆ.

ಸಿಡಿ ಭಯದಿಂದಲೇ ರೇಣುಕಾಚಾರ್ಯ ಹೈಕಮಾಂಡ್‌ಗೆ ಸ್ಪಷ್ಟನೆ ನೀಡಲು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಸಿಎಂ ಬಿಎಸ್ ಯಡಿಯೂರಪ್ಪ ಬದಲಾವಣೆ ಹಿನ್ನೆಲೆಯಲ್ಲಿ ತಮ್ಮ ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ಕೇಂದ್ರ ನಾಯಕರ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.