ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಮಂಗಳೂರು, (ಮೇ.2): ಪಂಚರಾಜ್ಯ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಪ್ರಮುಖವಾಗಿ ಪಶ್ಚಿಮ ಬಂಗಾಳದಲ್ಲಿ ಮತ್ತೆ ಮಮತಾ ದೀದಿ ಅಧಿಕಾರಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಬಿಜೆಪಿಗೆ ಮುಖಂಗವಾಗಿದೆ.

YouTube video player

ಇನ್ನು ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಪ್ರದರ್ಶನ ನೀಡಿದ್ದು, ಪಂಚ ರಾಜ್ಯದಲ್ಲೂ ಬಿಜೆಪಿ ಸಾಧನೆ ಮಹತ್ತರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೈ ಎಲೆಕ್ಷನ್ ರಿಸಲ್ಟ್ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪರ ಜನ ಒಲವು ತೋರಿಸಿದ್ದು, ಸೀಟು ಕಡಿಮೆ ಬಂದಿದ್ದರೂ ಮತ ಗಳಿಗೆಯಲ್ಲಿ ಬಿಜೆಪಿ ಅಗ್ರಸ್ಥಾನದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ದೀದಿಯ ಪ್ರಭಾವ ಕಡಿಮೆಯಾಗಿರೋದು ಬಹಳ ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇನ್ನು ಪುದುಚೇರಿ ಮತ್ತು ಅಸ್ಸಾಂನಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ಅನ್ನು ಜನದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿರುವುದು ಫಲಿತಾಂಶದಲ್ಲಿ ಗೊತ್ತಾಗಿದೆ. ಕೇರಳದಲ್ಲೂ ಬಿಜೆಪಿ ಸಾಧನೆ ಉತ್ತಮವಾಗಿದೆ. ಕಳೆದ ಬಾರಿ ಒಂದು ಸೀಟ್ ಗೆದ್ದುಗೊಂಡಿದ್ದು, ಈ ಭಾರಿ ಮೂರರಲ್ಲಿ ಮುನ್ನಡೆ ಸಾಧಿಸಿದ್ದೇವೆ. ಕೇರಳದಲ್ಲೂ ಜನ ಕಾಂಗ್ರೆಸ್ ಅನ್ನು ತಿರಸ್ಕಾರ ಮಾಡಿದ್ದಾರೆಂದು ಕಟೀಲ್ ಲೇವಡಿ ಮಾಡಿದ್ದಾರೆ.

ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯ ವಿಚಾರವಾಗಿ, ಮಸ್ಕಿಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರುವುದು ನಿಜ. ಆದರೆ, ಬಸವಕಲ್ಯಾಣದಲ್ಲಿ ಅಮೋಘ ಗೆಲುವಾಗಿದೆ. ಬೆಳಗಾವಿಯಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.

"