Asianet Suvarna News

ಕೊರೋನಾ ಗೆದ್ದ ನಳಿನ್ ಕುಮಾರ್ ಕಟೀಲ್ , ಆದ್ರೂ ಕೆಲವು ದಿನ ಆಚೆ ಬರಲ್ಲ

ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೊರೋನಾದಿಂದ ಗೆದ್ದು ಬಂದಿದ್ದಾರೆ. ಆದ್ರೂ ಸ್ವಲ್ಪದಿನ ಆಚೆ ಬರಲ್ಲ.

Karnataka BJP president Nalin Kumar Kateel recovers from Covid19
Author
Bengaluru, First Published Sep 7, 2020, 5:34 PM IST
  • Facebook
  • Twitter
  • Whatsapp

ಬೆಂಗಳೂರು, (ಸೆ.07): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೊರೋನಾದಿಂದ ಗುಣಮುಖರಾಗಿದ್ದು, ಸದ್ಯ ಕ್ವಾರಂಟೈನ್‍ನಲ್ಲಿದ್ದಾರೆ.

ನಳಿನ್ ಕುಮಾರ್ ಅವರಿಗೆ ಆಗಸ್ಟ್ 30 ರಂದು ಕೊರೊನಾ ಪಾಸಿಟಿವ್ ದೃಢವಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಕೊರೊನಾದಿಂದ ಗುಣಮುಖರಾಗಿದ್ದು, ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೂ ಕೊರೋನಾ: ಆಸ್ಪತ್ರೆಗೆ ದಾಖಲು

 ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್‍ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ” ಎಂದು ವೈದ್ಯರು, ದಾದಿಯರಿಗೆ ಧನ್ಯವಾದ ಎಂದು ಟ್ವೀಟ್ ಮಾಡಿದ್ದಾರೆ.

Follow Us:
Download App:
  • android
  • ios