ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೂ ಕೊರೋನಾ: ಆಸ್ಪತ್ರೆಗೆ ದಾಖಲು
ಈಗಾಗಲೇ ರಾಜ್ಯದ ಹಲವು ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಇದೀಗ ಬಿಜೆಪಿ ರಾಜ್ಯಾಧ್ಯಕ್ಷರಿಗೂ ಕೊರೋನಾ ಶಾಕ್ ಕೊಟ್ಟಿದೆ.
ಬೆಂಗಳೂರು, (ಆ.30): ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ನಾನು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಸ್ಪಷ್ಟಪಡಿಸಿದ್ದಾರೆ.
ಗಾಲಿ ಜನಾರ್ಧನ ರೆಡ್ಡಿಗೂ ವಕ್ಕರಿಸಿದ ಕೊರೋನಾ: ಆಸ್ಪತ್ರೆಗೆ ದಾಖಲು
ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡಿದ್ದಾರೆ.
ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯುರಪ್ಪ ಅವರು, ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಆತ್ಮೀಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಪೂರ್ಣವಾಗಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಸಂಘಟನೆಯ ಕಾರ್ಯಗಳಲ್ಲಿ ನಿರತರಾಗಲಿ, ಪಕ್ಷವನ್ನು ಮುನ್ನಡೆಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್ ಬಿಚ್ಚಿಟ್ರು ವಿಷ್ಯ.
"