* ಡಿಕೆಶಿ ಅವರೇ ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ?* ಸಾರ್ವಜನಿಕವಾಗಿ ಹಲ್ಲೆ ಮಾಡುವ ಡಿಕೆಶಿ ಬಳಿ ಜನಸಾಮಾನ್ಯರು ಹೋದರೆ ಗತಿಯೇನು?* ಕಾರ್ಯಕರ್ತನೋರ್ವ ಹೆಗಲ ಮೇಲೆ ಕೈ ಹಾಕಿದಕ್ಕೆ ರಪಾರನೆ ತಲೆಗೆ ಬಾರಿಸಿದ್ದ ಡಿಕೆಶಿ  

ಬೆಂಗಳೂರು(ಜು.10): ಕೆಪಿಸಿಸಿ ಅಧ್ಯಕ್ಷರ ಹದ್ದು ಮೀರಿದ ವರ್ತನೆಗಳು ಇತ್ತೀಚೆಗೆ ಮಿತಿ ಮೀರುತ್ತಿದೆ. ನಾನು ಮಾತಾಡುವಾಗ ಮಧ್ಯ ಮಾತಾಡಿದ್ರೆ ಒದ್ದು ಹೊರಹಾಕುವೆ ಎಂದು ಇತ್ತೀಚೆಗೆ ಡಿ.ಕೆ. ಶಿವಕುಮಾರ್‌ ಗದರಿಸಿದ್ದರು. ಸಾರ್ವಜನಿಕವಾಗಿ ಹೊಡೆಯುವುದು, ಒದೆಯೋದು, ಕಾರ್ಯಕರ್ತರ ಮೊಬೈಲ್‌ ಕಿತ್ತೆಸೆಯುವುದು ಇದೆಲ್ಲ ರೌಡಿ ಲಕ್ಷಣ ಅಲ್ಲದೆ ಮತ್ತೇನು? ಎಂದು ಬಿಜೆಪಿ ಖಾರವಾಗಿ ಪ್ರತಿಕ್ರಿಯೆಸಿದೆ.

"

Scroll to load tweet…

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ ಎಂ ದೊಡ್ಡಿಗೆ ಡಿಕೆ ಶಿವಕುಮಾರ್ ಭೇಟಿ ಕೊಟ್ಟಾಗ, ಕಾಂಗ್ರೆಸ್ ಕಾರ್ಯಕರ್ತನೊಬ್ಬ ಡಿಕೆಶಿ ಹಿಂದೆ ಬರುತ್ತಿದ್ದರು. ಡಿಕೆಶಿ ಹೆಗಲ ಮೇಲೆ ಕೈ ಹಾಕಿದ ಎಂದು ಸಿಟ್ಟಿಗೆದ್ದ ಡಿಕೆಶಿ, ರಪಾರನೆ ತಲೆಗೆ ಬಾರಿಸಿದ್ದಾರೆ. ತಬ್ಬಿಬ್ಬಾದ ಕಾರ್ಯಕರ್ತ ಅಲ್ಲಿಂದ ಹೊರಟು ಹೋಗಿದ್ದರು. 

ಮಂಡ್ಯ: ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಬೆಂಬಲಿಗನಿಗೆ ಡಿಕೆಶಿ ಏಟು

Scroll to load tweet…

ಈ ಘಟನೆಗೆ ಸಂಬಂಧಿಸಿದಂತೆ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ ಘಟಕ ಕಾರ್ಯಕರ್ತ ಹತ್ತಿರ ಬಂದ ಎಂಬ ಕಾರಣಕ್ಕೆ ಸಾರ್ವಜನಿಕವಾಗಿ ಹಲ್ಲೆ ಮಾಡುವ ಡಿಕೆಶಿ ಅವರ ಬಳಿ ಜನಸಾಮಾನ್ಯರು ಹೋದರೆ ಗತಿಯೇನು?. ಕೆಪಿಸಿಸಿ ಅಧ್ಯಕ್ಷರೇ, ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ? ಎಂದು ಪ್ರಶ್ನಿಸಿದೆ.