ಹತ್ತು ತಿಂಗಳ ಹಿಂದೆ ರಾಜ್ಯದ ಜನ ಕಾಂಗ್ರೆಸ್‌ ಪಕ್ಷದ ಮೇಲೆ ಭರವಸೆ ಇರಿಸಿ ಮತ ನೀಡಿ ಅಧಿಕಾರಕ್ಕೆ ತಂದಿದ್ದಾರೆ. ಆದರೆ, ರಾಜ್ಯದಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ. ದಲಿತರಿಗೆ ಅನ್ಯಾವಾಗುತ್ತಿದೆ. ರೈತರಿಗೆ ಬರಪರಿಹಾರ ಸಿಗುತ್ತಿಲ್ಲ. ಬಡವರಿಗೆ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು(ಏ.03): ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 10 ತಿಂಗಳು ಕಳೆದರೂ ಅಭಿವೃದ್ಧಿ ಶೂನ್ಯವಾಗಿದೆ. ಮತ ಹಾಕಿದ್ದ ಮತದಾರರು ಈಗ ಕಾಂಗ್ರೆಸ್‌ಗೆ ಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಹತ್ತು ತಿಂಗಳ ಹಿಂದೆ ರಾಜ್ಯದ ಜನ ಕಾಂಗ್ರೆಸ್‌ ಪಕ್ಷದ ಮೇಲೆ ಭರವಸೆ ಇರಿಸಿ ಮತ ನೀಡಿ ಅಧಿಕಾರಕ್ಕೆ ತಂದಿದ್ದಾರೆ. ಆದರೆ, ರಾಜ್ಯದಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ. ದಲಿತರಿಗೆ ಅನ್ಯಾವಾಗುತ್ತಿದೆ. ರೈತರಿಗೆ ಬರಪರಿಹಾರ ಸಿಗುತ್ತಿಲ್ಲ. ಬಡವರಿಗೆ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ದೇಶವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿ ಪರವರ್ತಿಸುವ ಸಂಕಲ್ಪ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕಳೆದ 10 ವರ್ಷಗಳಿಂದ ಹಗಲು-ರಾತ್ರಿ ವಿಶ್ರಾಂತಿ ಇಲ್ಲದೆ ದುಡಿಯುತ್ತಿದ್ದಾರೆ. ನಾನು ಈ ದೇಶದ ಪ್ರಧಾನಿ ಅಲ್ಲ. ಬದಲಾಗಿ ಈ ದೇಶದ ಪ್ರಧಾನ ಸೇವಕ ಎಂದು ಶ್ರಮ ಹಾಕುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಭಷ್ಟಾಚಾರದ ಆರೋಪವಿಲ್ಲ. ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಯುಪಿಎ ಅವಧಿಯಲ್ಲಿ ಭಾರತ ಜಗತ್ತಿನ ಆರ್ಥಿಕ ಶಕ್ತಿಯಲ್ಲಿ 12 ಸ್ಥಾನದಲ್ಲಿತ್ತು. ಪ್ರಧಾನಿ ಮೋದಿ ಅವಧಿಯಲ್ಲಿ 5ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಶ್ಲಾಘಿಸಿದರು.

ದೇಶದ ಸುರಕ್ಷತೆ, ಸರ್ವಾಂಗೀಣ ಅಭಿವೃದ್ಧಿ ಕೆಲಸಗಳು ಮುಂದುವರೆಯುವ ನಿಟ್ಟಿನಲ್ಲಿ ಮತ್ತೊಮ್ಮೆ ಕೇಂದ್ರ ಸರ್ಕಾರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಮೋರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. 2047ಕ್ಕೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಬೇಕು ಎಂದು ಹೇಳಿದರು.

ಸಂಸದ ಡಿ.ಕೆ.ಸುರೇಶ್‌ಗೆ ಪ್ರಧಾನಿ ಮೋದಿ ತರಾಟೆ

ಕೇಂದ್ರ ಜನಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಬೇಕು. ಪ್ರತಿ ಬೂತ್‌ವಾರು ಕೆಲಸ ಮಾಡಬೇಕು. ಕಳೆದ ಬಾರಿಗಿಂತ ಹೆಚ್ಚಿನ ಮತಗಳು ಬೀಳುವಂತೆ ನೋಡಿಕೊಳ್ಳಬೇಕು. ಬೂತ್‌ ಗೆದ್ದಾಗ ವಿಧಾನಸಭೆ, ಲೋಕಸಭೆ ಗೆಲ್ಲಲು ಸಾಧ್ಯವಾಗುತ್ತದೆ. ಹೀಗಾಗಿ ಬೂತ್‌ಗಳಿಗೆ ಶಕ್ತಿ ಕೊಡಬೇಕು ಎಂದರು.

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಒಂದೇ ವೇದಿಕೆಗೆ ಬಂದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ತತ್ತರಿಸಿದೆ. ಮುಖ್ಯಮಂತ್ರಿಗಳ ಹೇಳಿಕೆ ಗಮನಿಸಿದರೆ ಅದು ಗೊತ್ತಾಗಲಿದೆ. ಲೋಕಸಭಾ ಚುನಾವಣೆಗೆ 15ಕ್ಕೂ ಅಧಿಕ ಮಂತ್ರಿಗಳು ಅಭ್ಯರ್ಥಿಗಳಾಗಲು ಧೈರ್ಯ ಮಾಡಲಿಲ್ಲ. ಇದಕ್ಕೆ ದೇಶ ಮತ್ತು ರಾಜ್ಯದಲ್ಲಿ ಮೋದಿ ಪರ ಅಲೆ ಇರುವುದೇ ಕಾರಣ. ರಾಜ್ಯದಲ್ಲಿ 28 ಸ್ಥಾನ ಗೆಲ್ಲುವ ವಾತಾವರಣವಿದೆ. ಗೆದ್ದು ಮೋದಿ ಅವರ ಕೈ ಬಲಪಡಿಸೋಣ ಎಂದು ವಿಜಯೇಂದ್ರ ಕರೆ ನೀಡಿದರು.