ನನ್ನ ನಾಯಕತ್ವ ಒಪ್ಪಲ್ಲ ಎನ್ನುವ ಈಶ್ವರಪ್ಪ ಬಿಜೆಪಿಗರಲ್ಲ: ವಿಜಯೇಂದ್ರ
ಈಶ್ವರಪ್ಪ ಬಗ್ಗೆ ಮಾತನಾಡುವುದು ಬೇಡ ಎಂದುಕೊಂಡಿದ್ದೆ. ಇತ್ತೀಚೆಗೆ ಅವರ ಮಾತುಗಳನ್ನು ಗಮನಿಸಿದ್ದೇನೆ. ಬಿಜೆಪಿ ಬಗ್ಗೆ ಬಹಳ ಕಾಳಜಿಯಿಂದ ಮಾತನಾಡಿ ದ್ದಾರೆ. ವಿಜಯೇಂದ್ರ ನಾಯಕತ್ವ ಒಪ್ಪುವು ದಿಲ್ಲ ಎಂದು ಬಿಜೆಪಿ ಕಾರ್ಯಕರ್ತನ ರೀತಿ ಮಾತನಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಕ್ಕೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು(ಸೆ.26): ಕೆ.ಎಸ್.ಈಶ್ವರಪ್ಪ ಅವರು ಲೋಕಸಭಾ ಚುನಾವಣೆಯಲ್ಲಿ ಮೋದಿ ಕೈ ಬಲಪಡಿಸುವುದಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿದ್ದಾರೆ. ಮಗನ ಸ್ವಾರ್ಥಕ್ಕಾಗಿ ಸ್ಪರ್ಧಿಸಿದ್ದರೆ ಹೊರತು ಪಕ್ಷಕ್ಕಾಗಿ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಬಗ್ಗೆ ಮಾತನಾಡುವುದು ಬೇಡ ಎಂದುಕೊಂಡಿದ್ದೆ. ಇತ್ತೀಚೆಗೆ ಅವರ ಮಾತುಗಳನ್ನು ಗಮನಿಸಿದ್ದೇನೆ. ಬಿಜೆಪಿ ಬಗ್ಗೆ ಬಹಳ ಕಾಳಜಿಯಿಂದ ಮಾತನಾಡಿ ದ್ದಾರೆ. ವಿಜಯೇಂದ್ರ ನಾಯಕತ್ವ ಒಪ್ಪುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತನ ರೀತಿ ಮಾತನಾಡಿದ್ದಾರೆ. ಪಕ್ಷ ವಿರೋಧಿ ಚಟು ವಟಿಕೆಯಲ್ಲಿ ಭಾಗಿಯಾಗಿದ್ದಕ್ಕೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದರು.
ಗೌರವದಿಂದ ಸಿಎಂ ಹುದ್ದೆ ತೊರೆಯಿರಿ: ವಿಜಯೇಂದ್ರ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇ ದ್ರ, ಯತ್ನಾಳ್, ಪ್ರತಾಪ್ ಸಿಂಹ ಸೇರಿ ಇತರೆ ನಾಯಕರು ಕೆ. ಎಸ್.ಈಶ್ವರಪ್ಪ ಮನೆಗೆ ಏಕ ಹೋಗಿದ್ದರು ಎಂಬುದನ್ನು ಅವರನ್ನೇ ಕೇಳಬೇಕು. ನನಗ ಮಾಹಿತಿ ಇಲ್ಲ. ಈಶ್ವರಪ್ಪಗ ಬಿಜೆಪಿ ಬಗ್ಗೆ ಎಷ್ಟು ಕಾಳಜಿ ಇದ ಎಂಬುದು ನಮಗೆ ಗೊತ್ತಿದೆ ಎಂದರು.
'ಈಶ್ವರಪ್ಪ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ರಾಷ್ಟ್ರ ಮಟ್ಟದ ನಾಯಕರು ಚರ್ಚಿಸಬೇಕು. ರಾಜ್ಯ ನಾಯಕರ ಅಭಿಪ್ರಾಯ ಕೇಳಿದಾಗಿ ಅಭಿಪ್ರಾಯ ಕೊಡುತ್ತೇವೆ. ಆ ಸಂದರ್ಭ ಇನ್ನೂ ಬಂದಿಲ 'ಎಂದರು.