Asianet Suvarna News Asianet Suvarna News

ಇಂದು ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜತೆ ಸಭೆ: ಬಿ.ವೈ. ವಿಜಯೇಂದ್ರ ದೆಹಲಿಗೆ

ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಅಸಮಾಧಾನ ಹೊರಹಾಕಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಕೂಡ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರೂ ತೆರಳಿದ್ದಾರೆ ಎನ್ನಲಾಗುತ್ತಿದ್ದರೂ ಖಚಿತವಾಗಿಲ್ಲ.
 

karnataka bjp state president by vijayendra will be go to delhi for attending meeting grg
Author
First Published Aug 17, 2024, 7:32 AM IST | Last Updated Aug 17, 2024, 7:32 AM IST

ಬೆಂಗಳೂರು(ಆ.17): ದೇಶಾದ್ಯಂತ ಆರಂಭಿಸಲು ಉದ್ದೇಶಿಸಿರುವ ಬಿಜೆಪಿಯ ಸದಸ್ಯತ್ವ ಅಭಿಯಾನ ಸೇರಿದಂತೆ ಪಕ್ಷದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸುವ ಸಂಬಂಧ ಇಂದು(ಶನಿವಾರ) ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಎಲ್ಲ ರಾಜ್ಯಗಳ ರಾಜ್ಯಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಲಿದೆ. ಈ ಸಂಬಂಧ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರು ದೆಹಲಿಗೆ ತೆರಳಿದ್ದಾರೆ. ಇದೇ ವೇಳೆ ಸಮಯಾವಕಾಶ ಸಿಕ್ಕಲ್ಲಿ ವಿಜಯೇಂದ್ರ ಅವರು ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಜಾರಕಿಹೊಳಿ, ಪ್ರತಾಪ್‌ ಕೂಡ ದೆಹಲಿಗೆ?:
ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಅಸಮಾಧಾನ ಹೊರಹಾಕಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಕೂಡ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರೂ ತೆರಳಿದ್ದಾರೆ  ಎನ್ನಲಾಗುತ್ತಿದ್ದರೂ ಖಚಿತವಾಗಿಲ್ಲ.

ಸಂಘ, ವರಿಷ್ಠರ ಮಧ್ಯಸ್ಥಿಕೇಲಿ ವಿಜಯೇಂದ್ರ ಜೊತೆಗೆ ಮಾತುಕತೆ ಸಿದ್ಧ: ಯತ್ನಾಳ್‌

ರಾಜ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಸಭೆ

ರಮೇಶ್ ಜಾರಕಿಹೊಳಿ ಅವರು ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ತೆರಳಿದ್ದಾರೆ ಎಂದು ಅವರ ಆಪ್ತರು ಸಮಜಾಯಿಷಿ ನೀಡಿದ್ದಾರೆ.

Latest Videos
Follow Us:
Download App:
  • android
  • ios