ಡಿಕೆಶಿ ಬಂಡೆಗೆ ಡೈನಾಮೈಟ್‌ ಇಡಲು ಸಿದ್ದು ಸಜ್ಜು: ಬಿಜೆಪಿ

*   ಡಿಕೆಶಿ ರಾಜಕೀಯ ಬೆಳವಣಿಗೆಯ ಗುಂಡಿ ಸಿದ್ದರಾಮೋತ್ಸವ
*  ಸಿದ್ದರಾಮೋತ್ಸವದ ಬಳಿಕ ಕನಕಪುರ ಬಂಡೆ ಛಿದ್ರವಾಗಲಿದೆಯೇ?
*  ತಾವೇ ನಿರ್ದೇಶಿಸುತ್ತಿರುವ ಚಲನಚಿತ್ರಕ್ಕೆ ಸಿದ್ದರಾಮಯ್ಯ ನಾಯಕರಾಗಲು ಹೊರಟಿದ್ದಾರೆ

Karnataka BJP Talks Over Siddaramaiah and DK Shivakumar grg

ಬೆಂಗಳೂರು(ಜು.05):  ಪಕ್ಷ ಪೂಜೆಯೇ ಅಂತಿಮ, ವ್ಯಕ್ತಿಯಲ್ಲ ಎಂದು ಗುಡುತ್ತಿರುವ ಕನಕಪುರದ ಬಂಡೆಗೆ ಡೈನಾಮೈಟ್‌ ಇಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಸಿದ್ದರಾಮೋತ್ಸವದ ಬಳಿಕ ಕನಕಪುರ ಬಂಡೆ ಛಿದ್ರವಾಗಲಿದೆಯೇ? ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಕೆಪಿಸಿಸಿ ಅಧ್ಯಕ್ಷರ ವಿರೋಧದ ನಡುವೆಯೂ ಸಿದ್ದರಾಮೋತ್ಸವ ನಡೆಯಲಿದೆ ಎಂದಾದರೆ, ಡಿ.ಕೆ.ಶಿವಕುಮಾರ್‌ ಇದ್ದೂ ಇಲ್ಲದಂತಾಗಿದ್ದಾರೆ. ಸಿದ್ದರಾಮೋತ್ಸವ ಕೇವಲ ಸಿದ್ದರಾಮಯ್ಯ ಅವರ ಜನ್ಮದಿನೋತ್ಸವವಲ್ಲ. ಅದು ಡಿ.ಕೆ.ಶಿವಕುಮಾರ್‌ ಅವರ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್‌ ಹಲ್ಲಿಲ್ಲದ ಹಾವು ಎಂದು ಲೇವಡಿ ಮಾಡಿದೆ.

ಪರಿಷ್ಕೃತ ಪಠ್ಯ ಪುಸ್ತಕವನ್ನು ವೇದಿಕೆಯಲ್ಲೇ ಹರಿದ ಡಿಕೆ ಶಿವಕುಮಾರ್‌!

ಚುನಾವಣೆ ಸಮೀಪಿಸುತ್ತಿದ್ದಂತೆ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಕುರ್ಚಿಯ ಕನಸು ಹೆಚ್ಚಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರು ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುತ್ತಿದ್ದಾರೆ. ನಾನಿಲ್ಲದೆ ಕಾಂಗ್ರೆಸ್‌ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ, ರಾಜ್ಯದ ಜನತೆ ಕಾಂಗ್ರೆಸ್‌ ಪಕ್ಷವನ್ನೇ ತಿರಸ್ಕರಿಸಿದ್ದಾರೆ. ಈವರೆಗೆ ತಮ್ಮ ಪಟಾಲಂ ಮೂಲಕ ಸಿದ್ದರಾಮಯ್ಯ ತಾನೇ ಮುಂದಿನ ಮುಖ್ಯಮಂತ್ರಿ ಎಂಬ ಹೇಳಿಕೆ ಕೊಡಿಸುತ್ತಿದ್ದರು. ಈಗ ನೇರವಾಗಿ ತಾವೇ ಮುಖ್ಯಮಂತ್ರಿಯಾಗಬೇಕೆಂದು ನನ್ನ ರಾಜಕೀಯ ಗುರುಗಳು ಆಶಿಸಿದ್ದರು ಎಂದು ಹೇಳುವ ಮೂಲಕ ಕುರ್ಚಿಯ ಆಸೆ ಬಿಚ್ಚಿಟ್ಟಿದ್ದಾರೆ. ಹಾಗಾದರೆ ಬೆವರು, ಬಂಡವಾಳ ಹೂಡುತ್ತಿರುವ ಶಿವಕುಮಾರ್‌ ಏನು ಮಾಡಬೇಕು ಎಂದು ಕೆಣಕಿದೆ.

ತಾವೇ ನಿರ್ದೇಶಿಸುತ್ತಿರುವ ಚಲನಚಿತ್ರಕ್ಕೆ ಸಿದ್ದರಾಮಯ್ಯ ನಾಯಕರಾಗಲು ಹೊರಟಿದ್ದಾರೆ. ಸಿದ್ದರಾಮೋತ್ಸವ ಎನ್ನುವುದು ಸಿದ್ದರಾಮಯ್ಯ ಬ್ಯಾನರ್‌ ಆಡಿ ತಯಾರಾಗುತ್ತಿರುವ ಚಿತ್ರ. ಈ ಚಿತ್ರದ ಮೂಲಕ ತಾವೇ ಮುಂದಿನ ಮುಖ್ಯಮಂತ್ರಿ ಎಂಬ ಸಂದೇಶ ನೀಡುವುದು ಖಚಿತ. ಶ್ರಮ ಡಿ.ಕೆ.ಶಿವಕುಮಾರ್‌ ಅವರದ್ದು, ಅಧಿಕಾರ ಮಾತ್ರ ಸಿದ್ದರಾಮಯ್ಯಗೆ ಎಂದು ಕುಟುಕಿದೆ.
 

Latest Videos
Follow Us:
Download App:
  • android
  • ios