ಬೆಂಗಳೂರು, (ಮೇ.22): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹಾಗೂ ಬ್ಲ್ಯಾಕ್ ಫಂಗಸ್ ಆತಂಕ ಮೂಡಿಸಿದೆ. ಇದರ ಮಧ್ಯೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ.

ವಿಪಕ್ಷನಾಯಕ ಸಿದ್ದರಾಮಯ್ಯ ಮತ್ತೊಂದು ಮಹಾವಲಸೆಗೆ ಸಿದ್ಧತೆ ನಡೆಸಿರುವ ಸೂಚನೆ ಕಂಡುಬರುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

ಅತ್ತ ಎಚ್‌ಡಿಕೆ ಕಿಡಿ, ಇತ್ತ ಸಿದ್ದರಾಮಯ್ಯ ಪರ ರೇವಣ್ಣ ಬ್ಯಾಟಿಂಗ್

ಸಿದ್ದರಾಮಯ್ಯ ವಲಸೆನಾಯಕರಾಗುತ್ತಿದ್ದಾರೆ. ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ‌ ಸೋತು, ಬಾದಾಮಿ ಕ್ಷೇತ್ರದ ಶಾಸಕರಾಗಿದ್ದರೂ ಚಾಮರಾಜಪೇಟೆ ಕ್ಷೇತ್ರದ ಮೇಲೆ ವಿಶೇಷ ಒಲವು ತೋರುತ್ತಿರುವುದರ ಹಿಂದಿನ ಉದ್ದೇಶವಾದರೂ ಏನು? ಕೋವಿಡ್ ಸಂದರ್ಭದಲ್ಲಿ ಮತ್ತೊಂದು ಮಹಾವಲಸೆಗೆ ಸಿದ್ದರಾಮಯ್ಯ ಸಿದ್ಧವಾಗುತ್ತಿರುವ ಸೂಚನೆ ಕಂಡುಬರುತ್ತಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

ಕೋವಿಡ್ ಬಂದ ನಂತರ ಬಾದಾಮಿ ಕ್ಷೇತ್ರಕ್ಕೆ ಎಷ್ಟು ಬಾರಿ ಭೇಟಿ ಕೊಟ್ಟಿದ್ದೀರಿ, ಎಷ್ಟು ಲಸಿಕೆ ಹಾಕಿಸಿದ್ದೀರಿ ಎಂದು ಜನರು ಪ್ರಶ್ನೆ ಕೇಳಿದರೆ ಸಿದ್ದರಾಮಯ್ಯನವರಿಗೆ ಸರ್ವಾಂಗವೂ ಉರಿಯುತ್ತದೆ. ಆದರೆ ಚಾಮರಾಜಪೇಟೆ ಕ್ಷೇತ್ರಕ್ಕೆ ಪದೇ ಪದೇ ಭೇಟಿ ನೀಡುವ ಉದ್ದೇಶವನ್ನಾದರೂ ಸ್ಪಷ್ಟಪಡಿಸಲಿ ಎಂದು ಬಿಜೆಪಿ ಆಗ್ರಹಿಸಿದೆ.

ಸಿದ್ದರಾಮಯ್ಯ ಸಿಎಂ‌ ಆಗಿದ್ದಾಗ ಟಿಪ್ಪು ಜಯಂತಿ ಆಚರಣೆ, ಶಾದಿಭಾಗ್ಯ ಯೋಜನೆಯನ್ನು ಏಕೆ ಜಾರಿಗೆ ತಂದಿದ್ದು ಎಂಬುದಕ್ಕೆ ಈಗ ಉತ್ತರ ಸಿಗುತ್ತಿದೆ. ಚಾಮರಾಜಪೇಟೆಯಂಥ ಕ್ಷೇತ್ರವನ್ನು ಸಮಯ ಬಂದಾಗ ಅಪ್ಪಿಕೊಳ್ಳುವ ಉದ್ದೇಶಕ್ಕಾಗಿ ಅಲ್ಲವೇ ಎಂದು ಪ್ರಶ್ನಿಸಿದೆ.