Mekedaatu Padayatra ನದಿ ದಡದಲ್ಲಿ ಜಾರಿದ ಡಿಕೆಶಿ, ವಿಡಿಯೋ ಹರಿಬಿಟ್ಟು ಅಣಕವಾಡಿದ ಬಿಜೆಪಿ

* ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಚಾಲನೆ
* ಸಂಗಮದಲ್ಲಿ ಪೂಜೆ ವೇಳೆ ಜಾರಿದ ಡಿಕೆ ಶಿವಕುಮಾರ್
* ವಿಡಿಯೋ ಹರಿಬಿಟ್ಟು ಅಣಕವಾಡಿದ ಬಿಜೆಪಿ

Karnataka BjP Trolled  DK Shivakumar slips during pooja at Sangama

ಬೆಂಗಳೂರು, 09): ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ (Congress Mekedaatu Padayatra) ಇಂದು(ಭಾನುವಾರ) ಚಾಲನೆ ಸಿಕ್ಕಿದ್ದು, ಪಾದಯಾತ್ರೆ ಸಾಗಿದೆ.

ಇದಕ್ಕೂ ಮುನ್ನ ಇಂದು (ಜ.9) ಕನಕಪುರ ತಾಲ್ಲೂಕಿನ ಸಂಗಮದಲ್ಲಿ ಬೆಳ್ಳಂಬೆಳಗ್ಗೆಯೇ ಕಾವೇರಿ ನದಿಗೆ ತೆಪ್ಪದ ಮೂಲಕ ಸಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ನಾನ ಮಾಡಿ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸುವ ವೇಳೆ ಡಿಕೆ ಶಿವಕುಮಾರ್ ಸ್ವಲ್ಪ ಜಾರಿದ್ದಾರೆ. ಇದರಿಂದ ಅವರ ಬ್ಯಾಲೆನ್ಸ್ ತಪ್ಪಿದೆ.  ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. ಅಲ್ಲದೇ ತಮಗೆ ಬಂದಂತೆ ಟ್ರಾಲ್ ಮಾಡುತ್ತಿದ್ದಾರೆ.

Mekedatu Padaytre: ಪಾದಯಾತ್ರೆ ವೇಳೆ ಸುಸ್ತು, ಕಾರನ್ನೇರಿದ ಸಿದ್ದರಾಮಯ್ಯ

ಇನ್ನು ಬಿಜೆಪಿ(BJP) ಸಹ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು,  ಡಿ ಕೆ ಶಿವಕುಮಾರ್ ದಾಟಲಿಲ್ಲ, ಮೇಕೆಯಾದರೂ ದಾಟಲಿ ಎಂದು ಅಣಕವಾಡಿದೆ. 

ಕಾಂಗ್ರೆಸ್ ವಿರುದ್ಧ ಸಿಎಂ ವಾಗ್ದಾಳಿ
ಜನರನ್ನು ಮರುಳು ಮಾಡಲು ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ ಕೈಗೊಂಡಿದೆ. ಆದರೆ ಜನರನ್ನು ಪದೇ ಪದೇ ಮರುಳು ಮಾಡಲು ಸಾಧ್ಯವಿಲ್ಲ. ತನ್ನ ಐದು ವರ್ಷದ ಅವಧಿಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕೂಡಾ ಕಾಂಗ್ರೆಸ್ ಸಮರ್ಪಕವಾಗಿ ಸಲ್ಲಿಸಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಬದ್ಧತೆ ಇಲ್ಲ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿಕೆ ಶಿವಕುಮಾರ್ ನೀರಾವರಿ ಸಚಿವರಾಗಿದ್ದರು, ಆಗಲೂ ಈ ಯೋಜನೆಗೆ ಬಗ್ಗೆ ಕ್ರಮ ವಹಿಸಲಿಲ್ಲ. ಕಳೆದ ಮೂರು ವರ್ಷಗಳಿಂದಲೂ ಇದರ ಬಗ್ಗೆ ಚಕಾರವೆತ್ತಿರಲಿಲ್ಲ. ಈಗ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯ ಪಾದಯಾತ್ರೆ ಕೈಗೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ಸಿಗರಿಗೆ ತಮ್ಮ ಅವಧಿಯಲ್ಲಿ ಮೇಕೆದಾಟು ಯೋಜನೆಗಾಗಿ ಯಾವುದೇ ಕೆಲಸ ಮಾಡಿಲ್ಲವೆನ್ನುವ ಅಪರಾಧ ಕಾಡುತ್ತಿದೆ. ಕಾಂಗ್ರೆಸ್ ಪಕ್ಷ ಯಾವುದೇ ನೀರಾವರಿ ಯೋಜನೆಗಳ ಬಗ್ಗೆ ಬದ್ಧತೆಯಿಂದ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios