ಸಿದ್ದರಾಮಯ್ಯ ವರ್ಸಸ್ ಬಿಜೆಪಿ ನಡುವೆ ಟ್ವೀಟ್ ವಾರ್
* ಎರಡು ಬೈ ಎಲೆಕ್ಷನ್ ಮಧ್ಯೆ ತಾರಕಕ್ಕೇರಿದ ನಾಯಕ ಆರೋಪ-ಪ್ರತ್ಯಾರೋಪ
* ಸಿದ್ದರಾಮಯ್ಯ ಹಾಗೂ ಕರ್ನಾಟಕ ಬಿಜೆಪಿ ನಡುವೆ ಟ್ವಿಟ್ಟರ್ ವಾರ್
* ಸಿದ್ದರಾಮಯ್ಯ ಟ್ವೀಟ್‌ಗೆ ಬಿಜೆಪಿ ತಿರುಗೇಟು
ಬೆಂಗಳೂರು, (ಅ.17): ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (By Elections) ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಸಹ ಜೋರಾಗಿವೆ.
ಅದರಲ್ಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಾಗೂ ಕರ್ನಾಟಕ ಬಿಜೆಪಿ (Karnataka BJP) ನಡುವೆ ಟ್ವಿಟ್ಟರ್ (Twitter) ವಾರ್ ನಡೆದಿದೆ.
ಪೊಲೀಸರ ನ್ಯೂ ಗೆಟಪ್: ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ 'ತ್ರಿಶೂಲಾ'ಸ್ತ್ರ ಪ್ರಯೋಗ
ಪ್ರಧಾನಿ ನರೇಂದ್ರ ಮೋದಿಯನ್ನು (Narendra Modi) ಏಕವಚನದಲ್ಲಿ ನಿಂದಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಗರಂ ಆಗಿದೆ. ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಪ್ರಧಾನ ಸೇವಕ ಹುದ್ದೆಯಲ್ಲಿರುವ ಗಣ್ಯರ ಬಗ್ಗೆ ಮಾತನಾಡುವ ಮುನ್ನ ಎಚ್ಚರ ವಹಿಸಿ. ಪ್ರಧಾನಿ ಬಗ್ಗೆ ಮಾತನಾಡಿ ನಿಮ್ಮ ಕೀಳು ಮಟ್ಟ ಅನಾವರಣ ಮಾಡಿದ್ದೀರಿ ಎಂದು ಕಿಡಿಕಾರಿದೆ.
ನಿರಂತರ 20 ವರ್ಷಗಳಿಂದ ಜನರಿಂದ ಆಯ್ಕೆಯಾಗಿ ಸಾಂವಿಧಾನಿಕಯಲ್ಲಿದ್ದಾರೆ. ಪ್ರಧಾನಿಯವರ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ. ಸರ್ಕಾರಿ ಬಂಗಲೆಯಲ್ಲೇ ಉಳಿಯಬೇಕೆಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ವಾಗ್ದಾಳಿ ನಡೆಸಿದೆ.
ನೈತಿಕ ಪೊಲೀಸ್ಗಿರಿ ಪ್ರಕರಣ
ಮಂಗಳೂರಿನಲ್ಲಿ ಈಚೆಗೆ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ನೀಡಿದ ತ್ರಿಶೂಲ ದೀಕ್ಷೆಯ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಸಲೀ ಹಾಗೂ ಉಗ್ರಪ್ಪ ನಡುವಣ ಮಾತುಕತೆಯಲ್ಲಿ ಕೇಳಿಬಂದದ್ದ ಭ್ರಷ್ಟಾಚಾರ ಆರೋಪವನ್ನು ಪ್ರಸ್ತಾಪಿಸಿ ಬಿಜೆಪಿ ತಿರುಗೇಟು ನೀಡಿದೆ.
ನಿಮ್ಮ ದುರಹಂಕಾರ, ದಾರ್ಷ್ಟ್ಯಕ್ಕಾಗಿ ಮಾಜಿ ಮುಖ್ಯಮಂತ್ರಿಯೊಬ್ಬರಿಂದ ನಿಮ್ಮ ಸಾಂವಿಧಾನಿಕ ಹುದ್ದೆಯ ಮೇಲೆ ಪ್ರಯೋಗವಾದ ಪದವನ್ನು ಹೇಗೆ ಅರಗಿಸಿಕೊಂಡಿರಿ? ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ 'ಹೆಬ್ಬೆಟ್ಟು' ಗಿರಾಕಿ ಕನಸು ಕಾಣುತ್ತಿದ್ದಾನೆ. ಸಿದ್ದರಾಮಯ್ಯನವರೇ, ಆತನ ಯೋಗ್ಯತೆ, ಅರ್ಹತೆ ಏನು ಎಂದು ವಿಚಾರಿಸಿ. ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ ನೀವು? ಎಂದು ಪ್ರಶ್ನೆ ಮಾಡಿದೆ.
ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ. ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ 'ಮನೆಮುರುಕರು' ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.