ರಾಜ್ಯದಲ್ಲಿ ಚುನಾವಣೆ ಅಬ್ಬರ ಜೋರಾಗಿದೆ. ನವೆಂಬರ್ 3 ರಂದು ಉಪ ಚುನಾವಣೆ ನಡೆಯಲಿದ್ದು ಚುನಾವಣೆಗೆ 48 ನಾಮಪತ್ರಗಳು ಊರ್ಜಿತವಾಗಿವೆ. 

ಬೆಂಗಳೂರು (ಅ.18): ಆರ್‌.ಆರ್‌.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು, ಒಟ್ಟು ನಾಲ್ಕು ನಾಮಪತ್ರಗಳು ತಿರಸ್ಕೃತಗೊಂಡಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು 25 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದು, ಒಂದು ನಾಮಪತ್ರ ತಿರಸ್ಕೃತಗೊಂಡಿದೆ. ಆರ್‌.ಆರ್‌.ನಗರ ವಿಧಾನಸಭಾಕ್ಷೇತ್ರದಲ್ಲಿ 23 ಅಭ್ಯರ್ಥಿಗಳು 27 ನಾಮಪತ್ರಗಳನ್ನು ಸಲ್ಲಿಕೆ ಮಾಡಲಾಗಿದ್ದು, ಮೂರು ನಾಮಪತ್ರಗಳು ಅನೂರ್ಜಿತಗೊಂಡಿವೆ. 

RR ನಗರ ಉಪಕದನ: ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ವಿರುದ್ಧ ಕೇಸ್‌ ಖಂಡಿಸಿ ಕಾಂಗ್ರೆಸ್‌ ಧರಣಿ ..

ಎಚ್‌.ಎಂ.ಕಿಶೋರ್‌ ಗೌಡ, ಶಿವಲಿಂಗಯ್ಯ, ಸಂಪತ್‌ ಎಂಬುವರ ನಾಮಪತ್ರ ತಿರಸ್ಕಾರಗೊಂಡಿವೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ಅ.19 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ನ.3ರಂದು ಮತದಾನ ನಡೆಯಲಿದ್ದು, ನ.10 ರಂದು ಮತ ಎಣಿಕೆ ನಡೆಯಲಿದೆ. ನ.12ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.