ಬೆಂಗಳೂರು, [ನ.16]: ಒಂದು ಕಡೆ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಕಾವೇರುತ್ತಿರುವುದ ಮಧ್ಯೆ ಬಿಜೆಪಿ ನಾಯಕರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿದೆ.

ಬೈ ಎಲೆಕ್ಷನ್: ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸದೇ 'ಕೈ' ಉಸ್ತುವಾರಿಗಳ ನೇಮಕ

ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಬಿಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ವಿರುದ್ಧ ಮಾಜಿ ಸಂಸದ ಉಗ್ರಪ್ಪ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು [ಶನಿವಾರ] ಚುನಾವಣೆ ಆಯೋಗಕ್ಕೆ ದೂರು ನೀಡಿದೆ.

ಬೆಂಗಳೂರಿನ ಶಿವಾಜಿನಗರದಲ್ಲಿ ತಮಿಳು ಭಾಷಿಕರನ್ನು ಓಲೈಸಲು, ನಿಮ್ಮದೇ ಭಾಷಿಕರೊಬ್ಬರಿಗೆ ಟಿಕೆಟ್ ಕೊಟ್ಟಿದ್ದು, ಅವರನ್ನು ಗೆಲ್ಲಿಸಿ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

 ಅಷ್ಟೇ ಅಲ್ಲದೇ ಅನರ್ಹ ಶಾಸಕರನ್ನು ಸಚಿವರನ್ನಾಗಿ ಮಾಡುತ್ತೇವೆಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಿಎಸ್ ವೈ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ. 

ಯೋಗೇಶ್ವರ್ ಸೀರೆ ಕಂಟಕ 
ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿದ್ದ ಸೀರೆಗಳು ಸಿಕ್ಕಿದ್ದು,  ಪ್ರತಿ ಸೀರೆಯ ಜೊತೆ ಸಿ.ಪಿ ಯೋಗೇಶ್ವರ್ ಗೆ ಮತ ನೀಡಿ ಎನ್ನುವ ಕರಪತ್ರಗಳಿವೆ. ಮತದಾರರಿಗೆ ಹಂಚಲು ಯೋಗೇಶ್ವರ್ ಕೂಡಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕಾಂಗ್ರೆಸ್ ನಿಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ಆಗ್ರಹಿಸಿದೆ.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.