Asianet Suvarna News Asianet Suvarna News

ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆದ ದಿನೇಶ್, ಕಾಂಗ್ರೆಸ್‌ ಮುಂದಿನ ಆಯ್ಕೆ!

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ರಾಜೀನಾಮೆ/ ಉಪಚುನಾವಣೆ ಫಲಿತಾಂಶದ ನಂತರ ಖಾಲಿಖಾಲಿಯಾದ ಕಾಂಗ್ರೆಸ್/ ಸೋನಿಯಾ ಗಾಂಧಿ ಬಳಿ ಮುಂದಿನ ಆಯ್ಕೆ/ ಕೆಪಿಸಿಸಿ ಪಟ್ಟ ಯಾರಿಗೆ ಸಿಗಲಿದೆ.

Karnataka By poll Result 2019 Dinesh gundurao resigns KPCC President post
Author
Bengaluru, First Published Dec 9, 2019, 4:51 PM IST

ಬೆಂಗಳೂರು(ಡಿ. 09)  ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಪ್ರತಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟ ಕೆಲ ಹೊತ್ತಿನಲ್ಲಿಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ಒಂದೂವರೆ ವರ್ಷದಿಂದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಗುಂಡೂರಾವ್ ಸ್ಥಾನ ತೊರೆದಿದ್ದಾರೆ.

"

ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ಮೇಲೆ ಗಂಭೀರ ಪರಿಣಾಮ ಉಂಟುಮಾಡಿದೆ. ಕಾಂಗ್ರೆಸ್ ಪದಾಧಿಕಾರಿಗಳೆಲ್ಲ ಒಬ್ಬೊಬ್ಬರಾಗಿ ಸ್ಥಾನ ತ್ಯಾಗ ಮಾಡಿದ್ದಾರೆ. ಉಪಚುನಾವಣೆ ಸೋಲು ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ.

ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನದಲ್ಲಿ ಗೆಲುವಿನ ನಗೆ ಬೀರಿದ್ರೆ, ಕಾಂಗ್ರೆಸ್ ಕೇವಲ 2 ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದರ ಹೊಣೆಹೊತ್ತು ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಕಲೆವೇ ಹೊತ್ತಿನಲ್ಲಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. 

ಬೈ ಎಲೆಕ್ಷನ್ ರಿಸಲ್ಟ್: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿ

ಇಡೀ ಕಾಂಗ್ರೆಸ್ ಪಾಳಯ ಇದೀಗ ಖಾಲಿ ಖಾಲಿಯಾಗಿದೆ. ದಿನೇಶ್ ಗುಂಡೂರಾವ್ ಅಧಿಕಾರ ವಹಿಸಿಕೊಂಡ ನಂತರ ಪದಾಧಿಕಾರಿಗಳ ಪಟ್ಟಿಯಲ್ಲಿ ಕೆಲ ಬದಲಾವಣೆ ಆಗಿತ್ತು. ನಿರೀಕ್ಷಿತ ಫಲಿತಾಂಶ ದಾಖಲಿಸಲು ಸಾಧ್ಯವಾಗದ ಕಾರಣ ಇಬ್ಬರು ನಾಯಕರು ಸ್ಥಾನ ತೊರೆದೊದ್ದು ಸೋನಿಯಾ ಗಾಂಧಿ ಮುಂದೆ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ  ಎಂಬುದನ್ನು ಕಾದು ನೋಡಬೇಕಿದೆ.

ಡಿಸೆಂಬರ್ 09ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us:
Download App:
  • android
  • ios