ಮುಡಾ ಪ್ರಾಸಿಕ್ಯೂಷನ್ ನೊಟೀಸ್ ವಾಪಸಿಗೆ ಸಚಿವ ಸಂಪುಟ ನಿರ್ಧಾರ

ಮುಡಾ ಹಗರಣದ ಆರೋಪದ ಬೆನ್ನಲ್ಲಿಯೇ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದ ನೊಟೀಸ್ ವಾಪಸ್ ಪಡೆಯುವಂತೆ ಸಚಿವ ಸಂಪುಟದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ.

Karnataka Cabinet decision to withdraw Muda prosecution notice on CM Siddaramaiah sat

ಬೆಂಗಳೂರು (ಆ.01): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂದು ನೀಡಿದ ಬೆನ್ನಲ್ಲಿಯೇ ರಾಜ್ಯಪಾಲರಿಂದ ನೊಟೀಸ್ ಜಾರಿ ಮಾಡಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಎದುರಿಸಬೇಕಿದ್ದ ಹಿನ್ನೆಲೆಯಲ್ಲಿ ಅವರನ್ನು ಹೊರಗಿಟ್ಟು ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಈ ವೇಳೆ ರಾಜ್ಯಪಾಲರ ನೋಟಿಸ್ ಅನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನೊಟೀಸ್‌ಗೆ ಕಾನೂನು ಮೂಲಕ ಉತ್ತರ ನೀಡುವುದಕ್ಕೆ ನಿರ್ಧರಿಸಲಾಗಿದೆ. ಜೊತೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿರುವ ನೊಟೀಸ್ ಅನ್ನು ವಾಪಸ್ ಪಡೆಯುವಂತೆಯೂ ಒತ್ತಾಯೊಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಇನ್ನು ರಾಜ್ಯಪಾಲರಿಗೆ ದೂರು ಕೊಟ್ಟ ತಕ್ಷಣವೇ ನೊಟೀಸ್ ಜಾರಿ ಮಾಡಿರುವುದಕ್ಕೆ ಸಂಪುಟ ಸಭೆಯಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಮುಡಾ ಪ್ರಾಸಿಕ್ಯೂಷನ್ ಸಂಕಷ್ಟ; ಸಿಎಂ ಸಿದ್ದರಾಮಯ್ಯ ಹೊರಗಿಟ್ಟು ಸಚಿವ ಸಂಪುಟ ಸಭೆ ಆಯೋಜನೆ

ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೊಟೀಸ್ ನಲ್ಲಿ ಬಳಸಿದ ಪದ ಮತ್ತು ಒಕ್ಕಣಿಕೆಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ. ರಾಜ್ಯಪಾಲರ ಸ್ಥಾನ ರಾಜಕೀಯ ದುರುಪಯೋಗದ ಹಾದಿಯಲ್ಲಿ ಸಾಗಿತ್ತಿದೆ ಎಂಬ ಬಗ್ಗೆ ಅನುಮಾನ ಮೂಡಿದ್ದು, ಈ ಹಿನ್ನೆಲೆಯಲ್ಲಿಯೂ ಚರ್ಚೆ ಮಾಡಲಾಗಿದೆ. ಪದ ಮತ್ತು ಒಕ್ಕಣಿಕೆ ಸಹಿತ ನೊಟೀಸ್ ವಾಪಸ್ ಪಡೆಯಲು ಸಂಪುಟ ನಿರ್ಣಯ ಕೈಗೊಳ್ಳಲಾಗಿದೆ. ಒಂದು ವೇಳೆ ನೊಟೀಸ್ ವಾಪಸ್ ಪಡೆಯದಿದ್ದರೆ ಕಾನೂನು ಹೋರಾಟ ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

Latest Videos
Follow Us:
Download App:
  • android
  • ios