ಶೀಘ್ರದಲ್ಲೇ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಈ ವೇಳೆ ಕಾಂಗ್ರೆಸ್ ನ ಈ ಶಾಸಕಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. 

 ಹಾವೇರಿ :  ಡಿ.3ರಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಶಾಸಕ ಬಿ.ಸಿ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ನಾನೂ ಮನವಿ ಮಾಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಹೇಳಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಜಿಲ್ಲೆಯ ಏಕೈಕ ಕಾಂಗ್ರೆಸ್‌ ಶಾಸಕ ಬಿ.ಸಿ. ಪಾಟೀಲರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಅವರು ನನಗಿಂತ ಒಂದು ವರ್ಷ ಮೊದಲು ಶಾಸಕರಾಗಿದ್ದಾರೆ. 

ಈ ನಿಟ್ಟಿನಲ್ಲಿ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ವೈಯಕ್ತಿಕವಾಗಿ ನಾನೂ ಮನವಿ ಮಾಡಿದ್ದೇನೆ ಎಂದರು.