ಬೆಂಗಳೂರು, (ಆ.19): ನಾಳೆ ಅಂದ್ರೆ ಆ.20ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದ್ದು,  ಹಲವು ಮಹತ್ವದ ನಿರ್ಣಯಗಳಿಗೆ ಒಪ್ಪಿಗೆ ನೀಡುವ ಸಾಧ್ಯತೆಗಳಿವೆ.

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ ವಿಚಾರವೂ ಚರ್ಚೆಯಾಗಲಿದೆ ಎನ್ನಲಾಗುತ್ತಿದೆ. ಜೊತೆಗೆ ಈಗಾಗಲೇ ಅನೇಕ ಸಚಿವರು ತಿಳಿಸಿರುವಂತೆ SDPI ಹಾಗೂ PFI ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವ ನಿರ್ಧಾರವನ್ನು ಸಹ ಕೈಗೊಳ್ಳುವ ಸಾಧ್ಯತೆಗಳಿವೆ. ಮತ್ತೊಂದೆಡೆ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಕುರಿತು ಚರ್ಚೆಗಳು ನಡೆಯಲಿವೆ.

ಕೊರೋನಾದಿಂದ ಗುಣಮುಖರಾಗಿ ಪ್ಲಾಸ್ಮಾ ದಾನ ಮಾಡಿದ ದೇಶದ ಮೊದಲ ಕರ್ನಾಟಕದ ಶಾಸಕ

ಮುಂಗಾರು ಅಧಿವೇಶನಕ್ಕೆ ಚಿಂತನೆ 
ಸೆಪ್ಟಂಬರ್ ಅಂತ್ಯದೊಳಗೆ ಪೂರ್ಣ ಪ್ರಮಾಣದ ಬಜೆಟ್‌ಗೆ ಅನುಮೋದನೆ ಪಡೆದುಕೊಳ್ಳುವ ಅನಿವಾರ್ಯತೆ ರಾಜ್ಯ ಸರ್ಕಾರಕ್ಕಿದೆ. ಹೀಗಾಗಿ ಸೆಪ್ಟಂಬರ್ ಮುಗಿಯುವುದರೊಳಗೆ ವಿಧಾನಮಂಡಲ ಅಧಿವೇಶನ ನಡೆಸಬೇಕು.

ಹೀಗಾಗಿ 10 ದಿನಗಳ ಕಾಲ ವಿಧಾನ ಮಂಡಲ ಮಳೆಗಾಲದ ಅಧಿವೇಶ ನಡೆಸಲು ರಾಜ್ಯ ಸರ್ಕಾರ ಚಿಂತನೆ  ನಡೆಸಿದ್ದು, ಸೆಪ್ಟೆಂಬರ್ 3ನೇ ವಾರದಲ್ಲಿ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅಧಿವೇಶನ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.  ಈ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರವಾಗಲಿದೆ.