ನಮಗೆ ವಿಪಕ್ಷಗಳಿಂದ ಕಲಿಯಬೇಕಾದ್ದು ಏನು ಇಲ್ಲ CM Basavaraj Bommai

ರಾಜ್ಯದ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಮೌನಿಯಾಗಿದ್ದಾರೆ, ನಾಲಿಗೆ ಕಳೆದುಕೊಂಡಿದ್ದಾರೆ ಎಂಬ ಟೀಕೆಗೆ ಉಡುಪಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಖಡಕ್ ಆಗಿಯೇ ಪ್ರತಿಕ್ರಿಯಿಸಿದ್ದಾರೆ.

Karnataka CM Basavaraj Bommai in Udupi gow

ವರದಿ: ಶಶಿಧರ ಮಾಸ್ತಿಬೈಲು, ಏಷ್ಯಾನೆಟ್ ಸುವರ್ಣ ನ್ಯೂಸ್ 

ಉಡುಪಿ (ಎ.11): ನಾವು ಮಾತನಾಡುವುದಿಲ್ಲ ನಮ್ಮ ಆಕ್ಷನ್ ಮಾತನಾಡುತ್ತದೆ. ನಾವು ಮಾತನಾಡಲೂ ಬಾರದು ನಮ್ಮ ಕೆಲಸ ಮಾತನಾಡಬೇಕು. ನಮಗೆ ವಿಪಕ್ಷಗಳಿಂದ ಕಲಿಯಬೇಕಾದ್ದು ಏನು ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ತಿರುಗೇಟು ನೀಡಿದ್ದಾರೆ. ಉಡುಪಿ (Udupi) ಜಿಲ್ಲಾ ಪ್ರವಾಸದಲ್ಲಿರುವ ಸಿಎಂ, ರಾಜ್ಯದ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಮೌನಿಯಾಗಿದ್ದಾರೆ, ನಾಲಿಗೆ ಕಳೆದುಕೊಂಡಿದ್ದಾರೆ ಎಂಬ ಟೀಕೆಗೆ ಖಡಕ್ ಆಗಿಯೇ ಉತ್ತರಿಸಿದರು.

ಯಾವ ಸಂದರ್ಭದಲ್ಲಿ ಏನು ನಿರ್ಧಾರ ತೆಗೆದುಕೊಳ್ಳಬೇಕು, ಏನು ಕ್ರಮ ಕೈಗೊಳ್ಳಬೇಕು ನಮಗೆ ಚೆನ್ಬಾಗಿ ಗೊತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (siddaramaiah) ಮತ್ತು ಕುಮಾರಸ್ವಾಮಿ (Kumaraswamy) ವಿರುದ್ಧ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ನಿಮ್ಮ ಆಡಳಿತದ ಅವಧಿಯಲ್ಲಿ ಕರ್ತವ್ಯಪ್ರಜ್ಞೆ ಎಲ್ಲಿತ್ತು? ನಿಮ್ಮಿಂದ ಪಾಠ ಕಲಿಯಬೇಕಾದ್ದು ನಾವು ಏನು ಇಲ್ಲ. ನಮ್ಮ ರಾಜ್ಯದ ಶಾಂತಿ-ಸುವ್ಯವಸ್ಥೆ ನಮ್ಮ ರಾಜ್ಯದ ಪ್ರಗತಿ ಹೇಗೆ ಮಾಡುವುದೆಂದು ನಮಗೆ ಗೊತ್ತಿದೆ. ನಾವು ಕೆಲಸ ಮಾಡುತ್ತಿದ್ದೇವೆ. ಕೆಲಸ ಮಾಡಿ ತೋರಿಸುತ್ತೇವೆ ಎಂದರು.

Kalaburagi Central University ರಾಮನವಮಿ ಆಚರಣೆ ಮಾಡಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ

 

ಸಿದ್ದರಾಮಯ್ಯ ಕಾಲದಲ್ಲಿ ಹತ್ತು ಹಲವು ಕೊಲೆಗಳ ಆಯ್ತು.ಹಿಂದು ಕಾರ್ಯಕರ್ತರ ಕೊಲೆ ಆಯ್ತು.ಕೊಲೆ ಮಾಡಿದವರ ಕೇಸನ್ನೇ ವಿಡ್ರೋ ಮಾಡಿಕೊಂಡಿದ್ದಾರೆ.
ಆಗ ಸಿದ್ದರಾಮಯ್ಯ ಬುದ್ಧಿ ಕಳೆದುಕೊಂಡಿದ್ದರಾ? ಎಂದು ಪ್ರಶ್ನಿಸಿದರು.ಪ್ರಸಕ್ತ ವಿದ್ಯಮಾನಗಳ ಬಗ್ಗೆ ಯಾರು ಏನೇ ವಿಶ್ಲೇಷಣೆ ಮಾಡಲಿ.ನಾವು ಸಂವಿಧಾನಬದ್ಧವಾಗಿ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡುತ್ತೇವೆ. ಕಾನೂನಿನ ಮುಂದೆ ಎಲ್ಲರೂ ಸಮಾನ.ಈ ದೃಷ್ಟಿಕೋನ ಇಟ್ಟುಕೊಂಡು ನಾವು ಕೆಲಸ ಮಾಡುತ್ತಿದ್ದೇವೆ ಎಂದರು.

ಅವರವರ ರಕ್ಷಣೆ ಮಾಡಿಕೊಂಡರೆ ತಪ್ಪಿಲ್ಲ: ಸದ್ಯ ರಾಜ್ಯದಲ್ಲಿ ನಡೆಯಲಿರುವ ಧರ್ಮ ಸಂಘರ್ಷ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ,ಅವರವರ ವಿಚಾರ ಪ್ರಚಾರಮಾಡಲು ಏನೂ ತೊಂದರೆ ಇಲ್ಲ.ಆದರೆ ಕಾನೂನು ಕೈಗೆ ತೆಗೆದುಕೊಳ್ಳಬಾರದು.ಹಿಂಸೆಗೆ ಇಳಿದರೆ ಸರಕಾರ ಸಹಿಸುವುದಿಲ್ಲ. ಈ ಸ್ಪಷ್ಟ ಸಂದೇಶ ಈಗಾಗಲೇ ಕಳುಹಿಸಿದ್ದೇನೆ.ಹಿಜಬ್ ವಿಚಾರ ದಲ್ಲಿ ಕೋರ್ಟ್ ಆದೇಶ ಇದೆ.ಕೋರ್ಟ್ ಆದೇಶ ಪಾಲನೆ ಆಗುತ್ತೆ ಎಂದರು.

UGC NET 2022 Exam ಜೂನ್ ನಲ್ಲಿ ನಡೆಯಲಿದೆ ಯುಜಿಸಿ ನೆಟ್ ಪರೀಕ್ಷೆ

ಲವ್ ಜಿಹಾದ್ ನಿಯಂತ್ರಣಕ್ಕೆ ಹಿಂದು ಟಾಸ್ಕ್ ಫೋರ್ಸ್- ಸಿಎಂ ಸಮರ್ಥನೆ?
ಮಂಗಳೂರಲ್ಲಿ ಲವ್ ಜಿಹಾದ್ ನಿಯಂತ್ರಣಕ್ಕೆ ಹಿಂದೂ ಟಾಸ್ಕ್ ಪೋರ್ಸ್ ಆರಂಭಿಸಿರುವ ವಿಚಾರದ ಕುರಿತು ಸಿಎಂ ಪ್ರತಿಕ್ರಿಯೆ ನೀಡಿದರು. ಯಾರ್ಯಾರು ಅವರವರ ರಕ್ಷಣೆ ಮಾಡಿಕೊಳ್ಳಬೇಕೋ ಮಾಡಿಕೊಳ್ಳುತ್ತಾರೆ, ಆದರೆ ಎಲ್ಲದಕ್ಕೂ ಕಾನೂನು ಇದೆ. ಇಷ್ಟೆಲ್ಲಾ ಘಟನೆ ನಡೆದವಲ್ಲ. ಎಲ್ಲದಕ್ಕೂ ಕಾನೂನು ಇದೆ ಇದರ ಅರಿವು ಇದ್ದರೆ ಉತ್ತಮ. ಕೆಲವೊಂದು ಕಾನೂನುಗಳನ್ನು ಹಿಂದಿನ ಸರಕಾರವೇ ಮಾಡಿದೆ. ನಾವೇನು ಹೊಸದಾಗಿ ಕಾನೂನು ಮಾಡಿಲ್ಲ.ಹಿಂದಿನ ಸರಕಾರಗಳು ಮಾಡಿದ ಕಾನೂನು ಪ್ರಕಾರವೇ ಎಲ್ಲವೂ ನಡೆಯುತ್ತಿದೆ ಎಂದರು.

Latest Videos
Follow Us:
Download App:
  • android
  • ios