* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಢೀರ್‌ ದೆಹಲಿಗೆ* ಹೈಕಮಾಂಡ್‌ನಿಂದ ಬುಲಾವ್‌ ಬಂದ ಹಿನ್ನೆಲೆಯಲ್ಲಿ ದಿಲ್ಲಿಗೆ ಹೋದ ಬೊಮ್ಮಾಯಿ* ಸಂಪುಟ ವಿಸ್ತರಣೆ ಸಂಬಂಧ ಚರ್ಚೆ

ಬೆಂಗಳೂರು, (ಆ.01): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ (ಭಾನುವಾರ) ದಿಢೀರ್‌ ದೆಹಲಿಗೆ ತೆರಳಿದ್ದಾರೆ. 

ಹೈಕಮಾಂಡ್‌ನಿಂದ ಬುಲಾವ್‌ ಬಂದ ಹಿನ್ನೆಲೆಯಲ್ಲಿ ನೂತನ ಸಚಿವರ ಪಟ್ಟಿ ಕೈಯಲ್ಲಿ ಹಿಡಿದೇ ಅವರು ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ.

ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದಿದ್ದು ಹೇಗೆ: ಇಲ್ಲಿದೆ ರಹಸ್ಯ..?

ನಾಳೆ (ಸೋಮವಾರ) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ನಾಯಕರನ್ನ ಭೇಟಿಯಾಗಲಿದ್ದು, ಸಚಿವ ಸಂಪುಟಕ್ಕೆ ಅನುಮತಿ ಪಡೆದುಕೊಳ್ಳಲಿದ್ದಾರೆ.

 ಒಂದೆಡೆ, ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನು ಬಸವರಾಜ ಬೊಮ್ಮಾಯಿ ಸಿದ್ಧಪಡಿಸಿದ್ದಾರೆ. ಮತ್ತೊಂದೆಡೆ, ಪಕ್ಷದ ವತಿಯಿಂದ ಸಚಿವ ಸ್ಥಾನಕ್ಕೆ ಅರ್ಹ ಶಾಸಕರ ಪಟ್ಟಿ ಸಿದ್ಧವಾಗಿದೆ ಎಂದು ತಿಳಿದುಬಂದಿದೆ.ಇದರ ಮಧ್ಯೆ ಹೈಕಮಾಂಡ್ ಯಾವ ಪಟ್ಟಿ ನೀಡುತ್ತೋ ಎನ್ನುವುದು ಕುತೂಹಲ ಮೂಡಿಸಿದೆ.

ಬೊಮ್ಮಾಯಿ ತಂದಿರುವ ಪಟ್ಟಿ ಹಾಗೂ ಹೈಕಮಾಂಡ್ ತನ್ನ ಬಳಿ ಇರುವ ಪಟ್ಟಿಗೆ ತಾಳೆ ಹಾಕಿ ಫೈನಲ್ ಮಾಡಿ ಕಳುಹಿಸಲಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ ಮಂಗಳವಾರ ಅಥವಾ ಬುಧವಾರ ಸಂಪುಟ ರಚನೆ ಸಾಧ್ಯತೆಯಿದೆ. 

ಇನ್ನು ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆಲ್ಲಾ ಸಚಿವ ಸ್ಥಾನ ಸಿಗಲಿದೆ ಎನ್ನುವುದು ಕುತೂಹಲ ಕೆರಳಿಸಿದೆ. ಇದರ ಮಧ್ಯೆ ಉಪಮುಖ್ಯಮಂತ್ರಿ ಸ್ಥಾನಕ್ಕೂ ಸಹ ತೀವ್ರ ಪೈಪೋಟಿ ಶುರುವಾಗಿದ್ದು, ಹೈಕಮಾಂಡ್, ಜಾತಿವಾರು ಲೆಕ್ಕಾಚಾರದ ಮೇಲೆ 3 ಅಥವಾ 4 ಡಿಸಿಎಂ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.