ಬೆಂಗಳೂರು, [ಜ.14]: ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿಗಳ ನಡುವೆ ಒಂದಲ್ಲ ಒಂದು ಮುಸುಕಿನ ಗುದ್ದಾಟ ನಡೆಯುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ಇಂದು [ಸೋಮವಾರ] ಸಿಎಂ ಕುಮಾರಸ್ವಾಮಿ ಅವರು ದೋಸ್ತಿ ಪಕ್ಷವಾದ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ,

ಕಾಂಗ್ರೆಸ್ ನಮ್ಮನ್ನು 3ನೇ ದರ್ಜೆಯವರಂತೆ ನೋಡುತ್ತಿದ್ದು, ತನ್ನ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು. ಕೊಟ್ಟು ತೆಗೆದುಕೊಳ್ಳುವ ನೀತಿ ಅನುಸರಿಸಬೇಕು ಎಂದು ಕುಮಾರಸ್ವಾಮಿ ಅವರು ಖಾಸಗಿ ಸುದ್ದಿ ವಾಹಿನಿ ಸಂದರ್ಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಎಲೆಕ್ಷನ್: ಕುಮಾರಸ್ವಾಮಿಗೆ ಸ್ಪಷ್ಟ ಸಂದೇಶ ರವಾನಿಸಿದ ಖಂಡ್ರೆ

ಲೋಕಸಭೆ ಸೀಟು ಹಂಚಿಕೆಗೆ 1/3 ಸೂತ್ರ ಆಗಲೇಬೇಕು. ಅತಿ ಆತ್ಮವಿಶ್ವಾಸದಿಂದ ಮುನ್ನುಗ್ಗಿದರೆ ಸೋಲು ಖಚಿತ ಎಂದು ಕಾಂಗ್ರೆಸ್ ಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೀಗೆ ಸಿಎಂ ಕುಮಾರಸ್ವಾಮಿ ದೋಸ್ತಿ ಪಕ್ಷಕ್ಕೆ ನೇರವಾಗೇ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಇಲ್ಲದಿದ್ದರೆ ನಮ್ಮ ದಾರಿ ನಮಗೆ ಅನ್ನೋ ಸಂದೇಶ ರವಾನಿಸಿದ್ದಾರೆ.