ಪಂಚೆ ಹಾಕೊಂಡು, ಹ್ಯೂಬ್ಲೋಟ್ ವಾಚ್ ಕಟ್ಕೊಂಡ್ರೆ ಸಮಾಜವಾದಿ ಆಗೋಲ್ಲ: ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಹರಿಪ್ರಸಾದ್
ಪಂಚೆ ಹಾಕಿಕೊಂಡು ಹ್ಯೂಬ್ಲೋಟ್ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ.
ಬೆಂಗಳೂರು (ಸೆ.09): ಹಿಂದಿನ ಯಾವ ಸಿಎಂಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಯಾರೂ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ಹ್ಯೂಬ್ಲೋಟ್ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾಸ್ ವಾಗ್ದಾಳಿ ಮಾಡಿದರು.
ಬೆಂಗಳೂರಿನಲ್ಲಿ ಶನಿವಾರ ನಡೆದ ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಕಾರಿನಲ್ಲಿ ಕುಳಿತರೆ ನೀವು ದೇವರಾಜ ಅರಸು ಆಗೋದಿಲ್ಲ. ದೇವರಾಜ ಅರಸು ಚಿಂತನೆ ಇರಬೇಕು ಪರೋಕ್ಷವಾಗಿ ಸಿದ್ದರಾಮಯ್ಯ ಹೆಸರೇಳದೆ ಟಾಂಗ್ ಕೊಟ್ಟರು. ಹಿಂದಿನ ಯಾವ ಸಿಎಂಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಯಾರೂ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ಹ್ಯೂಬ್ಲೋಟ್ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ. ನಾನು ಮೂರು ಸಾರಿ ಸೋತಿರಬಹುದು, ಆದರೆ ಇನ್ನೂ ಸತ್ತಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಸಚಿವರೇ ನಿಮಗೆ 10 ಕೋಟಿ ರೂ. ಕೋಡ್ತೀವಿ, ನೇಣು ಹಾಕಿಕೊಳ್ಳಿ: ಮಾಜಿ ಸಚಿವ ಬೆಳ್ಳುಬ್ಬಿ ಸವಾಲು
ನಾನು ಮಂತ್ರಿ ಆಗಿದ್ದರೆ ಸಮುದಾಯದ ಜನರ ಜೊತೆಗೆ ಇರಲು ಸಾಧ್ಯವಾಗುತ್ತಿರಲ್ಲಿ. ನಾನು ಮುಖ್ಯಮಂತ್ರಿ ಅಥವಾ ಮಂತ್ರಿ ಆಗುತ್ತೇನೆ ಅಂತ ಸಮುದಾಯದ ಯಾರೂ ಭ್ರಮೆಯಲ್ಲಿ ಇರಬೇಡಿ. ಈಡಿಗ, ಬಿಲ್ಲವ, ನಾಮಧಾರಿ ಸಮುದಾಯದವರು ಕೇವಲ ರಾಜ್ಯದಲ್ಲಿ ಮಾತ್ರ ಅಲ್ಲ, ಎಲ್ಲ ರಾಜ್ಯಗಳಲ್ಲೂ ಇದ್ದಾರೆ. ದೇವರಾಜ ಅರಸು ಅವರ ಬಗ್ಗೆ ಭಾಷಣದಲ್ಲಿ ಪುಂಕಾನು ಪುಂಕವಾಗಿ ಹಾಡಿ ಹೊಗಳುವ ನಾವು ಅವರ ಮೊಮ್ಮಗನಿಗೆ ಯಾವ ಅಧಿಕಾರವನ್ನೂ ಕೊಟ್ಟಿಲ್ಲ ಅಂತ ಅವಮಾನ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಸರ್ಕಾರ ಮಾಡಿದ್ದೇನೆ, ಹೇಗೆ ಬೇಕಾದರೂ ತೀರ್ಮಾನ ಮಾಡ್ತೀನಿ ಎಂದರೆ ಜನರೂ ಕೂಡ ತೀರ್ಮಾನ ಮಾಡ್ತಾರೆ. ಶಿಕ್ಷಣ ಕ್ಷೇತ್ರದಲ್ಲಿ ಮಾಫಿಯಾ ಮಾಡಿಕೊಂಡು ಇರುವವರು ಹೆಂಡ ಸಾರಾಯಿ ಬಗ್ಗೆ ಮಾತಾಡ್ತಾರೆ. ರಾಜ್ಯ ನಡೆಯಬೇಕಾದರೆ 36 ಸಾವಿರ ಕೋಟಿ ರೂ. ತೆರಿಗೆ ಕಟ್ಟುವ ಅಬಕಾರಿ ಇಲಾಖೆ ಮುಖ್ಯವಾಗುತ್ತದೆ. ಸೈಟು ಕಳ್ಳತನ ಮಾಡಿ ಮಾರುವವನು ನನ್ನ ಬಗ್ಗೆ ಮಾತಾಡ್ತಾನೆ. ಆದರೆ ಸ್ವಾಭಿಮಾನ ಬಿಟ್ಟು ಸಹನೆ. ಕಳೆದುಕೊಂಡವನಲ್ಲ ನಾನು ಎಂದು ಸರ್ಕಾರದ ಮತ್ತು ಸಚಿವರ ವಿರುದ್ಧ ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.
ಸಾರಾಯಿ ಮಾರುತ್ತಿದ್ದವರಿಗೆ ತಲಾ 2 ಎಕರೆ ಜಮೀನು ಕೊಡಲಿ: ರಾಜ್ಯ ಸರ್ಕಾರದ ಇಂದು ಸಾರಾಯಿ ಹೆಂಡ ಮಾರಿ ಬದುಕುತ್ತಿರೋರ ಕಸುಬು ಕಿತ್ತುಕೊಳ್ಳಲಾಗಿದೆ. ಹೀಗಾಗಿ ಅವರು ಬೆಂಗಳೂರಲ್ಲಿ ಪಾನಿಪುರಿ ಮಾರ್ತಿದ್ದಾರೆ. ನಾನು ಸರ್ಕಾರಕ್ಕೆ ಒತ್ತಾಯ ಮಾಡ್ತಿನಿ ಅಂತವರಿಗೆ 2 ಎಕರೆ ಜಮೀನು ನೀಡಬೇಕು. ಇಂದು ನೀವು ಸಂಘಟಿತರಾಗಿ ವೋಟ್ ಮಾಡಿದರೆ ಯಾರನ್ನೇ ಬೇಕಾದರೂ ಸೋಲಿಸಬಹುದು. ನೀವು ಅಗತ್ಯವಾಗಿ ರಾಜಕೀಯ ಪಜ್ಞೆ ಬೆಳೆಸಿಕೊಳ್ಳಬೇಕು. ನಮ್ಮ ಸಮುದಾಯ ಮನಸು ಮಾಡಿದರೆ ಯಾರನ್ನಾದರೂ ಸೋಲಿಸೋ ಶಕ್ತಿ ಇದೆ ಎಂದು ಹೇಳಿದರು.
ಜಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳೊಂದಿಗೆ ಸೇರಿಕೊಂಡ ಜೆಡಿಎಸ್: ಸಿಎಂ ಸಿದ್ದರಾಮಯ್ಯ
ಪರಮೇಶ್ವರ್ ಅವರನ್ನು ಸಿಎಂ ಮಾಡಲಿಲ್ಲ, ಡಿಸಿಎಂನಿಂದಲೂ ಡಿಪ್ರಮೋಟ್ ಮಾಡಿದ್ರು: ರಾಜ್ಯದಲ್ಲಿ ಡಾ.ಜಿ.ಪರಮೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚಿನ ಸಮಯ ಅಧ್ಯಕ್ಷರಾಗಿದ್ದರು. ಅವರನ್ನು ಮುಖ್ಯಂತ್ರಿ ಮಾಡುವುದಕ್ಕೆ ಎಲ್ಲ ರೀತಿಯ ಅರ್ಹತೆ ಇದ್ದವರು. ಅವರನ್ನು ಸಿಎಂ ಇರಲಿ, ಡಿಸಿಎಂ ಸ್ಥಾನದಿಂದ ಡಿಪ್ರಮೋಟ್ ಮಾಡಲಾಯ್ತು. ಅರ್ಹತೆ ಇರುವ ಪರಮೇಶ್ವರ್ ಅವರನ್ನೇ ಸಿಎಂ ಮಾಡಲು ಸಾಧ್ಯವಾಗಿಲ್ಲ. ಈಗಲೂ ಉಪಮುಖ್ಯಮಂತ್ರಿ ಮಾಡುವಾಗ ದಲಿತರನ್ನು ಮಾಡಬಹುದಿತ್ತು. ಸತೀಶ್ ಜಾರಕಿಹೊಳಿಯನ್ನು ಡಿಸಿಎಂ ಮಾಡಬಹುದಿತ್ತು. ಅಲ್ಪಸಂಖ್ಯಾತರನ್ನ ಡಿಸಿಎಂ ಮಾಡಬಹುದಿತ್ತು, ಆದರೆ ಮಾಡಲಿಲ್ಲ ಎಂದು ಹರಿಹಾಯ್ದರು.
ಇನ್ನು ರಾಜ್ಯದಲ್ಲಿ ನಮ್ಮ ಸಮುದಾಯ ಅತಂತ್ರವಾಗಿದೆ. ಇದು ಅತಂತ್ರ ಸಮುದಾಯದ ವೇದಿಕೆಯಾಗಿದೆ. ಚುನಾವಣೆ ಬರುವಾಗ ಘೋಷಣೆ ಮಾಡಿದ್ದೇ ಮಾಡಿದ್ದು. ಅಧಿಕಾರಕ್ಕೆ ಬರುವಾಗ ಏನೇನೋ ಭರವಸೆ ಕೊಡಲಾಗುತ್ತದೆ. ಆದರೆ, ಅಧಿಕಾರ ಬಂದ ಮೇಲೆ ಅತೀ ಹಿಂದುಳಿದ ವರ್ಗಗಳು ನೆನಪೇ ಆಗಿಲ್ಲ. ಅಧಿಕಾರ ಸಿಕ್ಕ ತಕ್ಷಣವೇ ಸಮುದಾಯಕ್ಕೆ ಕೊಡಬೇಕಾಗಿರುವುದು ಇನ್ನೂ ಸಿಕ್ಕಿಲ್ಲ. ಸಮುದಾಯದ ಶಕ್ತಿ ಏನೂ ಎನ್ನುವುದನ್ನು ನಾವೇ ಇನ್ನೂ ತಿಳಿದುಕೊಂಡಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.