'ಸಾವರ್ಕರ್‌ಗೆ ಆಮೇಲೆ ಕೊಡುವಿರಂತೆ, ಮೊದಲು ಸಿದ್ದಗಂಗಾ ಶ್ರೀಗೆ ಭಾರತರತ್ನ ನೀಡಿ'
ಸಾವರ್ಕರ್‌ಗೆ ಭಾರತರತ್ನ ಆಮೇಲೆ ಕೊಡುವಿರಂತೆ| ಮೊದಲು ಸಿದ್ದಗಂಗಾ ಶ್ರೀಗೆ ಭಾರತರತ್ನ ನೀಡಿ| ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು[ಅ.19]: ಸಾವರ್ಕರ್‌ಗೆ ಭಾರತರತ್ನ ನೀಡುವ ಬಗ್ಗೆ ದೇಶಾದ್ಯಂತ ಪರ-ವಿರೋಧದ ಚರ್ಚೆಯಾಗುತ್ತಿರುವಾಗಲೇ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತರತ್ನ ನೀಡಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.
'ಕಾಯಕಯೋಗಿ'ಯ 15 ನುಡಿಮುತ್ತುಗಳು: ಪಾಲಿಸಿದರೆ ಕೈಲಾಸವೇ ನಮ್ಮದು
ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಅವರು, ‘ಸಾವರ್ಕರ್‌ಗೆ ಭಾರತರತ್ನ ಆಮೇಲೆ ಕೊಡುವಿರಂತೆ. ಮೊದಲು ಸಾಮಾಜಿಕ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಭಾರತರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ’ ಎಂದು ಒತ್ತಾಯಿಸಿದ್ದಾರೆ.
ಗೋಡ್ಸೆಗೂ ಭಾರತರತ್ನ ಕೊಡಿ: ಸಿದ್ದರಾಮಯ್ಯ ವಿವಾದ
ಇಷ್ಟೇ ಅಲ್ಲದೇ ಮಹಾತ್ಮ ಗಾಂಧಿ ಹತ್ಯೆಗೆ ಸ್ಕೆಚ್ (ರೂಪರೇಷೆ) ಸಿದ್ಧಪಡಿಸಿದವರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌ಗೆ ಭಾರತ ರತ್ನ ನೀಡುತ್ತಾರೆ. ಹಾಗಾದ್ರೆ ಗಾಂಧಿ ಕೊಲೆ ಮಾಡಿರುವ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಈ ವಿಚಾರ ಭಾರೀ ವಿವಾದ ಸೃಷ್ಟಿಸಿದೆ.