ಮೋದಿ ಹೆಸರು ಎತ್ತಿದ್ದಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅನ್ವಯವಾದ ಕ್ರಮ ನಿಮ್ಮ ಮೇಲೆ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನಿಸಿರುವ ಅವರು, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ. 

ಬೆಂಗಳೂರು(ಜು.27): ‘ವಿರೋಧಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ವನ್ನು ಈಸ್ಟ್‌ ಇಂಡಿಯಾ ಕಂಪನಿ ಮತ್ತು ಇಂಡಿಯನ್‌ ಮುಜಾಹಿದೀನ್‌ಗೆ ಹೋಲಿಸಿರುವ ನರೇಂದ್ರ ಮೋದಿ ಅವರೇ, ಭಾರತೀಯರ ನೂರಾರು ಕೋಟಿ ರು. ತೆರಿಗೆ ಹಣ ಲೂಟಿ ಮಾಡಿ ಓಡಿ ಹೋಗಿರುವ ನೀರವ್‌ ಮೋದಿ, ಲಲಿತ್‌ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜತೆ ಹೋಲಿಸಬಹುದಾ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಲ್ಲದೆ, ಮೋದಿ ಹೆಸರು ಎತ್ತಿದ್ದಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅನ್ವಯವಾದ ಕ್ರಮ ನಿಮ್ಮ ಮೇಲೆ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನಿಸಿರುವ ಅವರು, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಎಂದು ಪ್ರಶ್ನಿಸಿದ್ದಾರೆ.

'ಇಂಡಿಯಾ' ಒಕ್ಕೂಟದಿಂದ ಮೋದಿಗೆ ನಡುಕ: ಜಗದೀಶ್‌ ಶೆಟ್ಟರ್‌

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ‘ಲಲಿತ್‌ ಮತ್ತು ನೀರವ್‌ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್‌ಗಾಂಧಿ ವಿರುದ್ದ ಮಾನನಷ್ಟಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್‌ ಇಂಡಿಯಾ ಕಂಪನಿ ಮತ್ತು ಇಂಡಿಯನ್‌ ಮುಜಾಹಿದೀನ್‌ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ… ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ಇಂಡಿಯಾ ಎಂಬುದು ಸುಂದರ, ಸುಮಧುರ ಹಾಗೂ ಪವಿತ್ರ ಹೆಸರು. ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು, ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್‌ ಇನ್‌ ಇಂಡಿಯಾ, ಸ್ಟಾರ್ಚ್‌ ಅಪ್‌ ಇಂಡಿಯಾ, ಸ್ಕಿಲ್‌ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ? ಎಂದು ಪ್ರಶ್ನೆ ಮಾಡಿದ್ದಾರೆ.